ತಿರುವನಂತಪುರ: ಕೇರಳದಲ್ಲಿ ವಿಪರೀತವಾಗಿ ಮಳೆ (Kerala Heavy Rain) ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಪ್ರವಾಹ, ಭೂಕುಸಿತ (Flood And Landslide)ಗಳಂಥ ಅವಘಡಗಳಿಂದ ಇಲ್ಲಿಯವರೆಗೆ ಸುಮಾರು 18 ಮಂದಿ ಮೃತಪಟ್ಟಿದ್ದಾರೆ. 12ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ.ಕೇರಳದ ದಕ್ಷಿಣ ಮತ್ತು ಮಧ್ಯ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಅಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ 11 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (NDRF)ಯ ತಂಡಗಳು, ಎರಡು ಸೇನೆ ಮತ್ತು ಎರಡು ರಕ್ಷಣಾ ಸೇವೆ ಕಾರ್ಪ್ಸ್ (DSC) ತಂಡಗಳನ್ನು ನಿಯೋಜಿಸಲಾಗಿದೆ.
ಇನ್ನು ಜನರ ರಕ್ಷಣಾ ಕಾರ್ಯಾಚರಣೆ ಸಂಬಂಧ ಹೆಚ್ಚಿನ ಕ್ರಮ ಕೈಗೊಳ್ಳಲು, ಈ ಬಗ್ಗೆ ಚರ್ಚಿಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಿನ್ನೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕೊಟ್ಟಾಯಂ ಸೇರಿ, ಎಲ್ಲ ಪ್ರವಾಹ ಮತ್ತು ಭೂಕುಸಿತ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಗೊಳಿಸಲು ಏನೇನು ವ್ಯವಸ್ಥೆಯ ಅಗತ್ಯವಿದೆಯೋ ಅದನ್ನೆಲ್ಲ ಮಾಡಲಾಗುವುದು ಎಂದು ಹೇಳಿದ್ದಾರೆ. ಸಭೆಯ ಬಳಿಕ ಹೇಳಿಕೆ ಬಿಡುಗಡೆ ಮಾಡಿರುವ ಪಿಣರಾಯಿ ವಿಜಯನ್, ಕೇರಳದ ಹಲವು ಭಾಗಗಳಲ್ಲಿ ಮಳೆಯಿಂದಾಗಿ ಗಂಭೀರ ಪರಿಸ್ಥಿತಿ ಉಂಟಾಗಿದೆ. ಜನ-ಜಾನುವಾರಗಳ ರಕ್ಷಣೆಗೆ ಏನುಬೇಕಾದರೂ ಮಾಡಲು ನಾವು ಸಿದ್ಧರಿದ್ದೇವೆ. ನಮಗೀಗ ಭಾರತೀಯ ಸೇನೆಯ ಭೂ, ವಾಯು ಮತ್ತು ನೌಕಾಪಡೆಗಳಿಂದ ಸಹಾಯ ಬೇಕು. ಅಗತ್ಯವಿರುವ ಜಿಲ್ಲೆಗಳಲ್ಲಿ ಎಲ್ಲ ಕಡೆ ಆಶ್ರಯ ಶಿಬಿರಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
#WATCH | Kerala: NDRF team conducts rescue operation in Kokkayar, Idukki where landslide occurred yesterday pic.twitter.com/icTNMxsGhV
— ANI (@ANI) October 17, 2021
#WATCH | Flood like situation in Ranni town of Pathanamthitta district in Kerala due to heavy rain followed by low-pressure formations in the southeast of the Arabian Sea off the coast of Kerala pic.twitter.com/cjgGZ7xtBy
— ANI (@ANI) October 16, 2021
ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕೇರಳದಲ್ಲಿ ಭಾರೀ ಮಳೆ ಮುಂದುವರೆದಿದೆ. ಸಿಕ್ಕಾಪಟೆ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಪಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಇದನ್ನೂ ಓದಿ: ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ವಿತರಕ ಖಾಜಾಪೀರ್ ದೂರು; ಪೊಲೀಸ್ ಠಾಣೆ ಮೆಟ್ಟಿಲೇರಿದ ರಿಲೀಸ್ ಕಿರಿಕ್
Published On - 10:07 am, Sun, 17 October 21