ಎರಡು ಜಿಲ್ಲೆಗಳ ಗಡಿಯ ಗುಡ್ಡದಲ್ಲಿ 18 ಕಾಡಾನೆಗಳ ಸಾವು; ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು, ಪಶುವೈದ್ಯರು ಸ್ಥಳಕ್ಕೆ ತೆರಳಿದ್ದಾರೆ. ಆನೆಗಳ ಸಾವಿಗೆ ನಿಜವಾದ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ

ಎರಡು ಜಿಲ್ಲೆಗಳ ಗಡಿಯ ಗುಡ್ಡದಲ್ಲಿ 18 ಕಾಡಾನೆಗಳ ಸಾವು; ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು
ಮೃತ ಆನೆಗಳು
Follow us
|

Updated on:May 13, 2021 | 10:05 PM

ಆಸ್ಸಾಂನ ನಾಗೋನ್​ ಮತ್ತು ಕರ್ಬಿ ಅಂಗ್ಲಾಂಗ್​ ಜಿಲ್ಲೆಯ ಗಡಿ ಭಾಗದಲ್ಲಿರುವ ಗುಡ್ಡದ ಮೇಲೆ ಇಂದು ಸುಮಾರು 18 ಕಾಡಾನೆಗಳ ಮೃತದೇಹ ಸಿಕ್ಕಿದೆ. ಈ ಗುಡ್ಡದ ಎರಡು ಭಾಗಗಳಲ್ಲಿ ಆನೆಗಳ ಮೃತದೇಹ ಪತ್ತೆಯಾಗಿದೆ. ಸಿಡಿಲು ಬಡಿದಿದ್ದೇ ಆನೆಗಳ ಸಾವಿಗೆ ಕಾರಣ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಆನೆಗಳ ಸಾವಿನ ಬಗ್ಗೆ ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಅಸ್ಸಾಂನ ಅರಣ್ಯ ವನ್ಯಜೀವಿ ವಿಭಾಗದ ಪ್ರಧಾನ ಸಂರಕ್ಷಣಾಧಿಕಾರಿ ಅಮಿತ್ ಸಹಯ್​, ಕತಿಯಾಟೋಲಿ ವಲಯದ ಕುಂಡೋಲಿ ಸಂರಕ್ಷಿತ ಅರಣ್ಯದ ಗುಡ್ಡಗಾಡು ಪ್ರದೇಶದಲ್ಲಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಆನೆಗಳ ಮೃತದೇಹ ಪತ್ತೆಯಾಗಿದೆ. ಒಂದು ಕಡೆ ನಾಲ್ಕು ಆನೆಗಳು ಸತ್ತಿವೆ. ಇನ್ನೊಂದು ಕಡೆಯಲ್ಲಿ 14 ಆನೆಗಳು ಮೃತಪಟ್ಟಿವೆ. ಸಿಡಿಲು ಬಡಿದಿದ್ದೇ ಈ ಆನೆಗಳ ಸಾವಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು, ಪಶುವೈದ್ಯರು ಸ್ಥಳಕ್ಕೆ ತೆರಳಿದ್ದಾರೆ. ಆನೆಗಳ ಸಾವಿಗೆ ನಿಜವಾದ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ. ಆನೆಗಳ ಸಾವಿನ ಬಗ್ಗೆ ಅಸ್ಸಾಂ ಅರಣ್ಯ ಸಚಿವ ಪರಿಮಳ್​ ಶುಕ್ಲಬೈದ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಆನೆಗಳು ಮೃತಪಟ್ಟಿರುವ ಸ್ಥಳಕ್ಕೆ ಶುಕ್ರವಾರ ಭೇಟಿಕೊಡುವುದಾಗಿಯೂ ಹೇಳಿದ್ದಾರೆ.

ಇದನ್ನೂ ಓದಿ: ಆಗಸ್ಟ್​ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ ಕೊವಿಡ್ ಲಸಿಕೆ ದೊರೆಯುವ ಸಾಧ್ಯತೆ

Published On - 10:04 pm, Thu, 13 May 21

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ