ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರಿಂದ ಅನ್ಯಾಯ; ನೀರಿನ ಟ್ಯಾಂಕ್ ಹತ್ತಿದ 18 ವರ್ಷದ ಯುವತಿ

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿಯೊಬ್ಬಳು ಪೊಲೀಸರಿಗೆ ದೂರು ಸಲ್ಲಿಸಿ ಹಲವು ದಿನಗಳಾಗಿದ್ದರೂ ಆ ಬಗ್ಗೆ ಏನೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆ ಯುವತಿ ಪೊಲೀಸರು ಮತ್ತು ಆಡಳಿತದ ಮೇಲೆ ಒತ್ತಡ ಹೇರಲು ಯುವತಿ ನೀರಿನ ಟ್ಯಾಂಕ್ ಮೇಲೆ ಹತ್ತಿದ್ದಾಳೆ ಎಂದು ನವಾಬ್‌ಗಂಜ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮನೋಜ್ ಕುಮಾರ್ ರೈ ಹೇಳಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರಿಂದ ಅನ್ಯಾಯ; ನೀರಿನ ಟ್ಯಾಂಕ್ ಹತ್ತಿದ 18 ವರ್ಷದ ಯುವತಿ
ಸಾಂದರ್ಭಿಕ ಚಿತ್ರ
Follow us
|

Updated on: Jul 10, 2024 | 4:14 PM

ನೊಯ್ಡಾ: ಉತ್ತರ ಪ್ರದೇಶದ ಗೊಂಡಾದಲ್ಲಿರುವ ವಿಭಾಗೀಯ ಆಯುಕ್ತರ ಕಚೇರಿಯ ನೀರಿನ ಟ್ಯಾಂಕ್ ಮೇಲೆ 18 ವರ್ಷದ ಯುವತಿಯೊಬ್ಬಳು ಹತ್ತಿರುವ ಘಟನೆ ಬೆಳಕಿಗೆ ಬಂದಿದೆ. ಆಕೆಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರ ನಿಷ್ಕ್ರಿಯತೆ ತೋರಿದ್ದಾರೆ ಎಂಬ ಆರೋಪದ ಮೇಲೆ ಆಕೆ ನೀರಿನ ಟ್ಯಾಂಕ್ ಮೇಲೆ ಹತ್ತಿದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಈ ಘಟನೆಯ ಸಮಯದಲ್ಲಿ ಅಪ್ರಾಪ್ತ ವಯಸ್ಸಿನ ಮಹಿಳೆಯ ತಾಯಿ ಡಿಸೆಂಬರ್ 2023ರಲ್ಲಿ ದೂರು ದಾಖಲಿಸಿದ್ದರು. ಈ ವೇಳೆ ಮೂವರು ಸಹೋದರರಾದ ಉಮೇಶ್ (24), ದುರ್ಗೇಶ್ (22) ಮತ್ತು ಕುಂದನ್ (18) ಬೈಕ್​ನಲ್ಲಿ ಬಂದು ತಮಗೆ ಬಂದೂಕು ತೋರಿಸಿ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಪೂರ್ವ) ಮನೋಜ್ ಕುಮಾರ್ ರಾವತ್ ಮಾತನಾಡಿ, 2023ರ ಡಿಸೆಂಬರ್ 1ರಂದು ತಾನು ಮಗಳು ಮತ್ತು ಸೊಸೆಯೊಂದಿಗೆ ಮಲವಿಸರ್ಜನೆಗಾಗಿ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಯುವತಿಯ ತಾಯಿ ಹೇಳಿಕೆ ನೀಡಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಯುವತಿ ಮಂಗಳವಾರ ತನ್ನ ಪೋಷಕರೊಂದಿಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಲು ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ್ದರು.

ಇದನ್ನೂ ಓದಿ: Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್

ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಭಾಗೀಯ ಆಯುಕ್ತರ ಕಚೇರಿಯ ಮೇಲ್ಭಾಗದಲ್ಲಿ ನಿರ್ಮಿಸಲಾಗಿದ್ದ ನೀರಿನ ಟ್ಯಾಂಕ್ ಹತ್ತಿದ್ದು, ಪೊಲೀಸರು ನನ್ನ ಮೇಲೆ ಅತ್ಯಾಚಾರ ನಡೆಸಿದವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾಳೆ. ಅತ್ಯಾಚಾರಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ ಮತ್ತು ಈ ವಿಷಯದಲ್ಲಿ ಅಂತಿಮ ವರದಿಯನ್ನು ಕಳುಹಿಸಿದ್ದಾರೆ ಎಂದು ಆಕೆ ಹೇಳಿದ್ದಾರೆ.

ಸುಮಾರು 3 ಗಂಟೆಗಳ ಮನವೊಲಿಕೆ ನಂತರ ಈ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಆ ಯುವತಿಯನ್ನು ಕೆಳಗಿಳಿಸಲಾಗಿದೆ ಎಂದು ರಾವತ್ ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಅಶ್ಲೀಲ ವಿಡಿಯೋ ನೋಡಿ ಬಾಲಕನ ಮೇಲೆ ಅತ್ಯಾಚಾರವೆಸಗಿ ಕೊಂದ ಮದರಸಾ ಶಿಕ್ಷಕ

ಅತ್ಯಾಚಾರಕ್ಕೊಳಗಾದ ಯುವತಿ ಅಲೆಮಾರಿ ಜನಾಂಗದವಳಾಗಿರುವುದರಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪ್ರಯಾಣಿಸುವಾಗ ಶಿಬಿರವನ್ನು ಸ್ಥಾಪಿಸುತ್ತಾಳೆ ಎಂದು ಮಹಿಳೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ ಎಂದು ಎಎಸ್ಪಿ ತಿಳಿಸಿದ್ದಾರೆ. ಈ ಘಟನೆಯ ಸಮಯದಲ್ಲಿ, ಅವರು ನವಾಬ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಲಾಮ್ಟಿ ಲೋಲ್‌ಪುರ್ ಗ್ರಾಮದಲ್ಲಿ ಕ್ಯಾಂಪ್ ಮಾಡುತ್ತಿದ್ದರು ಎಂದು ಅವರು ಹೇಳಿದ್ದಾರೆ.

ನ್ಯಾಯಾಲಯದ ಆದೇಶದ ಮೇರೆಗೆ ಮೂವರು ಸಹೋದರರ ವಿರುದ್ಧ ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್ಪಿ ರಾವತ್ ತಿಳಿಸಿದ್ದಾರೆ. ತನಿಖೆಯ ವೇಳೆ ದೂರು ದೃಢಪಡದಿದ್ದಾಗ ಈ ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ