AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1984ರ ಸಿಖ್ ವಿರೋಧಿ ದಂಗೆ: ಫೆ.21 ರಂದು ನ್ಯಾಯಾಲಯದಿಂದ ಸಜ್ಜನ್ ಕುಮಾರ್​ಗೆ ಶಿಕ್ಷೆ ಪ್ರಕಟ

1984ರ ನವೆಂಬರ್ 1ರಂದು ಸರಸ್ವತಿ ವಿಹಾರ್ ಪ್ರದೇಶದಲ್ಲಿ ತಂದೆ- ಮಗನ ಹತ್ಯೆಗೆ ಸಂಬಂಧಿಸಿದ 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಪ್ರಾಸಿಕ್ಯೂಷನ್ ಮನವಿ ಮಾಡಿದೆ. ಫೆಬ್ರವರಿ 21ರಂದು ಶಿಕ್ಷೆ ಪ್ರಕಟಗೊಳ್ಳಲಿದೆ. ಫೆಬ್ರವರಿ 12ರಂದು ರೋಸ್ ಅವೆನ್ಯೂ ನ್ಯಾಯಾಲಯವು ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.

1984ರ ಸಿಖ್ ವಿರೋಧಿ ದಂಗೆ:  ಫೆ.21 ರಂದು ನ್ಯಾಯಾಲಯದಿಂದ ಸಜ್ಜನ್ ಕುಮಾರ್​ಗೆ  ಶಿಕ್ಷೆ ಪ್ರಕಟ
ಸಜ್ಜನ್ ಕುಮಾರ್ Image Credit source: India TV
ನಯನಾ ರಾಜೀವ್
|

Updated on: Feb 18, 2025 | 12:11 PM

Share

ನವದೆಹಲಿ, ಫೆಬ್ರವರಿ 18: 1984ರ ನವೆಂಬರ್ 1ರಂದು ಸರಸ್ವತಿ ವಿಹಾರ್ ಪ್ರದೇಶದಲ್ಲಿ ತಂದೆ- ಮಗನ ಹತ್ಯೆಗೆ ಸಂಬಂಧಿಸಿದ 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಪ್ರಾಸಿಕ್ಯೂಷನ್ ಮನವಿ ಮಾಡಿದೆ. ಫೆಬ್ರವರಿ 21ರಂದು ಶಿಕ್ಷೆ ಪ್ರಕಟಗೊಳ್ಳಲಿದೆ. ಫೆಬ್ರವರಿ 12ರಂದು ರೋಸ್ ಅವೆನ್ಯೂ ನ್ಯಾಯಾಲಯವು ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬೃಹತ್ ಗುಂಪನ್ನು ಸಜ್ಜನ್ ಕುಮಾರ್ ಮುನ್ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಇನ್ನೂ ಲಿಖಿತ ಹೇಳಿಕೆಗಳನ್ನು ಸಲ್ಲಿಸದಿದ್ದರೂ, ನಿರ್ಭಯಾ ಮತ್ತು ಇತರ ಪ್ರಕರಣಗಳಲ್ಲಿ ಮಾರ್ಗಸೂಚಿಗಳ ಆಧಾರದ ಮೇಲೆ ಮರಣದಂಡನೆ ವಿಧಿಸಬೇಕೆಂದು ಅವರು ಕೋರಿದ್ದಾರೆ ಎಂದು ಸಂಸ್ಥೆ ವರದಿ ಮಾಡಿದೆ. ಫೆಬ್ರವರಿ 21 ರಂದು ಶಿಕ್ಷೆಯ ಕುರಿತಾದ ವಾದಗಳನ್ನು ಆಲಿಸಲು ನ್ಯಾಯಾಲಯವು ಪ್ರಕರಣವನ್ನು ಪಟ್ಟಿ ಮಾಡಿದೆ.

1984 ರ ನವೆಂಬರ್‌ನಲ್ಲಿ ಸರಸ್ವತಿ ವಿಹಾರ್ ಪ್ರದೇಶದಲ್ಲಿ ತಂದೆ-ಮಗನ ಕೊಲೆ ಪ್ರಕರಣದಲ್ಲಿ ಕುಮಾರ್ ದೋಷಿ ಎಂದು ಸಾಬೀತಾಯಿತು. ಈ ಪ್ರಕರಣವು ನವೆಂಬರ್ 1, 1984 ರಂದು ನಡೆದ ಸಿಖ್ ವಿರೋಧಿ ಗಲಭೆಯ ಸಮಯದಲ್ಲಿ ರಾಷ್ಟ್ರ ರಾಜಧಾನಿಯ ಸರಸ್ವತಿ ವಿಹಾರ್‌ನಲ್ಲಿ ನಡೆದ ಇಬ್ಬರು ಸಿಖ್ಖರ ಹತ್ಯೆಗೆ ಸಂಬಂಧಿಸಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣ; ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್ ಕುಮಾರ್‌ ಅಪರಾಧಿ ಎಂದು ತೀರ್ಪು

ಸಜ್ಜನ್ ಕುಮಾರ್ ಅವರು ದಂಗೆ ನಡೆಸಿದ ಗುಂಪನ್ನು ಮುನ್ನಡೆಸಿದ್ದಾರೆ ಎಂಬ ಆರೋಪವಿದ್ದು ಅದರಂತೆ ಕುಮಾರ್ ಪ್ರಚೋದನೆ ಮೇರೆಗೆ ಗುಂಪೊಂದು ಸರಸ್ವತಿ ನಗರದಲ್ಲಿರುವ ಸಿಖ್ಖರ ಮನೆ ಮೇಲೆ ದಾಳಿ ನಡೆಸಿ ಇಬ್ಬರನ್ನು ಜೀವಂತವಾಗಿ ಸುಟ್ಟು ಹಾಕಿದ್ದು ಮಾತ್ರವಲ್ಲದೆ ಮನೆಯನ್ನೂ ಲೂಟಿ ಮಾಡಿ ಬಳಿಕ ಮನೆಗೆ ಬೆಂಕಿ ಹಚ್ಚಲಾಯಿತು ಇದರಿಂದ ಮನೆಯೊಳಗಿದ್ದ ಕೆಲವರು ಗಾಯಗೊಂಡಿದ್ದರು ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಸಜ್ಜನ್ ಕುಮಾರ್ ದೋಷಿ ಎಂದು ಆದೇಶ ಹೊರಡಿಸಿದ್ದಾರೆ. ಮತ್ತು ಶಿಕ್ಷೆಯ ಮೇಲಿನ ವಾದಗಳನ್ನು ಫೆಬ್ರವರಿ 18 ಕ್ಕೆ ಮುಂದೂಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ