AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಮಂತ್ರಿ ನರೇಂದ್ರ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಅಮಿತ್​ ಖರೆ ನೇಮಕ

Amit Khare: ಅಮಿತ್​ ಖರೆ ಅತ್ಯಂತ ಸಮರ್ಥ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಕೆಲಸ ಮಾಡಿದ ವಿಭಾಗಗಳಲ್ಲಿ ತಮ್ಮ ವೃತ್ತಿಪರತೆ ಮತ್ತು ಸಮರ್ಥತೆಯನ್ನು ತೋರಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಅಮಿತ್​ ಖರೆ ನೇಮಕ
ಅಮಿತ್ ಖರೆ
TV9 Web
| Edited By: |

Updated on:Oct 12, 2021 | 4:29 PM

Share

ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನಿವೃತ್ತ ಐಎಎಸ್​ ಅಧಿಕಾರಿ ಅಮಿತ್​ ಖರೆ ಇಂದು ನೇಮಕವಾಗಿದ್ದಾರೆ. ಇವರು 1985ನೇ ಬ್ಯಾಚ್​​ನ ಐಎಎಸ್​ ಅಧಿಕಾರಿಯಾಗಿದ್ದು, ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಾಜಿ ಕಾರ್ಯದರ್ಶಿಯಾಗಿದ್ದಾರೆ.  ಹಾಗೇ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿದ್ದ ಅವರು ಸೆಪ್ಟೆಂಬರ್​ 30ರಂದು ನಿವೃತ್ತರಾಗಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನೇಮಕವಾಗಿದ್ದಾರೆ.  

1985ನೇ ಬ್ಯಾಚ್​ನ ಐಎಎಸ್​ ಅಧಿಕಾರಿಯಾಗಿರುವ ಅಮಿತ್​ ಖರೆಯವರನ್ನು ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರನ್ನಾಗಿ ನೇಮಕ ಮಾಡಲು ಕ್ಯಾಬಿನೆಟ್​​ನ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ. ಅದರ ಅನ್ವಯ ಇನ್ನುಮುಂದೆ ಅಮಿತ್​ ಖರೆ ಪ್ರಧಾನಿ ಸಲಹೆಗಾರರಾಗಿ ಪ್ರಧಾನಮಂತ್ರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಭಾರತ ಸರ್ಕಾರದ ಕಾರ್ಯದರ್ಶಿಯ ಶ್ರೇಣಿ ಮತ್ತು ಸ್ಕೇಲ್​​ನಲ್ಲಿ, ಗುತ್ತಿಗೆ ಆಧಾರದ ಅನ್ವಯ ಮತ್ತು ಇತರ ಸಾಮಾನ್ಯ ನಿಯಮಗಳಿಗೆ ಅನುಗುಣವಾಗಿ ಅವರ ನೇಮಕಾತಿ ನಡೆದಿದೆ. ಕಾರ್ಯದರ್ಶಿ ಶ್ರೇಣಿಗೆ ಅನ್ವಯ ಆಗುವ ಎಲ್ಲ ಷರತ್ತುಗಳೂ ಅನ್ವಯ ಆಗುತ್ತವೆ. ಎರಡು ವರ್ಷಗಳ ಅವಧಿಗೆ ಸದ್ಯ ನೇಮಕ ಮಾಡಲಾಗಿದ್ದು, ಮುಂದಿನ ಆದೇಶದವರೆಗೂ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ.

ಅಮಿತ್​ ಖರೆ ಅತ್ಯಂತ ಸಮರ್ಥ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಕೆಲಸ ಮಾಡಿದ ವಿಭಾಗಗಳಲ್ಲಿ ತಮ್ಮ ವೃತ್ತಿಪರತೆ ಮತ್ತು ಸಮರ್ಥತೆಯನ್ನು ತೋರಿಸಿದ್ದಾರೆ. ಈ ಹಿಂದೆ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ಡಿಜಿಟಲ್​ ಮೀಡಿಯಾ ನಿಯಮಗಳಲ್ಲಿ ಬಹುಮುಖ್ಯ ಬದಲಾವಣೆಗಳನ್ನು ತರಲು ಶ್ರಮಿಸಿದ್ದರು. ಅಷ್ಟೇ ಅಲ್ಲ, ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿದ್ದಾಗ ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಮೇಲ್ವಿಚಾರಣೆ ನೋಡಿಕೊಂಡಿದ್ದರು.

ಇದನ್ನೂ ಓದಿ: ಏಷ್ಯಾದಲ್ಲೇ ದೊಡ್ಡ ಆರ್ಥಿಕ ಶಕ್ತಿ ಭಾರತ ಎಂದು ಪ್ರಧಾನಿ ನರೇಂದ್ರ ಮೋದಿಯನ್ನೂ ಹೊಗಳಿದ ಅಮೆರಿಕದ ಕಾರ್ಪೊರೇಟ್ ನಾಯಕ

ಶಿಲ್ಪಾ ಶೆಟ್ಟಿ ಮನೆಯಲ್ಲಿ ನವರಾತ್ರಿ ವೈಭವ; ಮಕ್ಕಳಿಗೆ ಕಲಿಸುತ್ತಿರುವ ಪಾಠ ಎಂಥದ್ದು?

Published On - 4:16 pm, Tue, 12 October 21

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ