Navjot Singh Sidhu 1988ರ ರಸ್ತೆ ಜಗಳ ಪ್ರಕರಣ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ

ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಸಾವನ್ನಪ್ಪಿದ 1988 ರ ರಸ್ತೆ  ಜಗಳ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧು ಅವರನ್ನು ದೋಷಮುಕ್ತಗೊಳಿಸಿದ ಮೇ 2018 ರ ಆದೇಶವನ್ನು ಪರಿಶೀಲಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.

Navjot Singh Sidhu 1988ರ ರಸ್ತೆ ಜಗಳ ಪ್ರಕರಣ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ
ನವಜೋತ್​ ಸಿಂಗ್​ ಸಿಧು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 19, 2022 | 3:56 PM

1988ರ ರಸ್ತೆ ಜಗಳ ಪ್ರಕರಣದಲ್ಲಿ(1988 road rage case) ಕ್ರಿಕೆಟಿಗ,ರಾಜಕಾರಣಿ ನವಜೋತ್ ಸಿಂಗ್ (Navjot Singh Sidhu)  ಅವರಿಗೆ ಸುಪ್ರೀಂಕೋರ್ಟ್ (Supreme Court) ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಸಾವನ್ನಪ್ಪಿದ 1988 ರ ರಸ್ತೆ  ಜಗಳ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧು ಅವರನ್ನು ದೋಷಮುಕ್ತಗೊಳಿಸಿದ ಮೇ 2018 ರ ಆದೇಶವನ್ನು ಪರಿಶೀಲಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಈ ಆದೇಶದಂತೆ ಪಂಜಾಬ್ ಪೊಲೀಸರು ಸಿಧು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ. ಈ ಹಿಂದೆ ಸಿಧುಗೆ ₹1000  ದಂಡ ವಿಧಿಸಿ ಬಿಡುಗಡೆಗೊಳಿಸಲಾಗಿತ್ತು. ಇದೀಗ ಐಪಿಸಿ ಸೆಕ್ಷನ್ 323ರ ಅಡಿಯಲ್ಲಿ ಸಿಧುಗೆ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಮೇ 15, 2018 ರಂದು ಸುಪ್ರೀಂ ಕೋರ್ಟ್ ಸಿಧುಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ಪಂಜಾಬ್ ಮತ್ತು ಹರ್ಯಾಣ  ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿತು, ಆದರೆ ಹಿರಿಯ ನಾಗರಿಕರಿಗೆ ನೋವುಂಟು ಮಾಡಿದ ಆರೋಪದಲ್ಲಿ ಅವರನ್ನು ತಪ್ಪಿತಸ್ಥರೆಂದು ಹೇಳಿತ್ತು. 65 ವರ್ಷ ವಯಸ್ಸಿನ ವ್ಯಕ್ತಿಗೆ “ಸ್ವಯಂಪ್ರೇರಿತವಾಗಿ ಹಾನಿಯನ್ನುಂಟುಮಾಡುವ” ಪ್ರಕರಣದಲ್ಲಿ ನವಜೋತ್ ಸಿಧು ತಪ್ಪಿತಸ್ಥರೆಂದು ಕಂಡುಬಂದರೂ, ಸುಪ್ರೀಂಕೋರ್ಟ್ ಅವರಿಗೆ ಜೈಲು ಶಿಕ್ಷೆಯನ್ನು  ವಿಧಿಸದೆ ₹1,000 ದಂಡವನ್ನು ವಿಧಿಸಿತ್ತು. ನಂತರ ಸೆಪ್ಟೆಂಬರ್ 2018 ರಲ್ಲಿ, ಮೃತರ ಕುಟುಂಬ ಸದಸ್ಯರು ಸಲ್ಲಿಸಿದ ಮರುಪರಿಶೀಲನಾ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದ್ದು, ಸಿಧುಗೆ ನೋಟಿಸ್ ಜಾರಿ ಮಾಡಿತು.

ಆದೇಶ ಹೊರಬೀಳುತ್ತಿದ್ದಂತೆ ನಾನು ಕಾನೂನಿಗೆ ತಲೆ ಬಾಗುತ್ತೇೆನೆ ಎಂದು  ಸಿಧು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
ನವಜೋತ್​ ಸಿಂಗ್ ಸಿಧು ಬಿಟ್ಟು ಹೋದ ಜಾಗವನ್ನು ಇಮ್ರಾನ್ ಖಾನ್​ ತುಂಬಲಿ; ಪಾಕ್​ ಮಾಜಿ ಪ್ರಧಾನಿಯ ಮಾಜಿ ಪತ್ನಿಯಿಂದ ವ್ಯಂಗ್ಯ
Image
ರಾಜೀನಾಮೆ ಕೊಟ್ಟ ಬೆನ್ನಲ್ಲೇ ಕಾಂಗ್ರೆಸ್​​ಗೆ ಮುಜುಗರ ಉಂಟು ಮಾಡಿದ ನವಜೋತ್ ಸಿಂಗ್ ಸಿಧು; ಏನಿದು ಟ್ವೀಟ್ ಅರ್ಥ?
Image
ಸೋತಿದ್ದು ದೇವರ ಇಚ್ಛೆ ಎಂದಿದ್ದ ನವಜೋತ್​ ಸಿಂಗ್​ ಸಿಧು; ಪಂಜಾಬ್​ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ

ಏನಿದು ಪ್ರಕರಣ?

ಡಿಸೆಂಬರ್ 27, 1988 ರಂದು  ಸಿಧು ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಅವರೊಂದಿಗೆ ಪಾರ್ಕಿಂಗ್ ಸ್ಥಳದ ಬಗ್ಗೆ ಜಗಳವಾಡಿದರು.  ಸಿಧು ಮತ್ತು ಅವರ ಸಹವರ್ತಿ ರೂಪಿಂದರ್ ಸಿಂಗ್ ಸಂಧು ಅವರು ಗುರ್ನಾಮ್ ಸಿಂಗ್ ಅವರನ್ನು ಅವರ ಕಾರಿನಿಂದ ಎಳೆದುಕೊಂಡು ಹೊಡೆದಿದ್ದುಗುರ್ನಾಮ್ ಸಾವಿಗೀಡಾಗಿದ್ದರು. 1999 ರಲ್ಲಿ, ಪಟಿಯಾಲದ ಸೆಷನ್ಸ್ ನ್ಯಾಯಾಲಯವು  ಸಿಧು ಮತ್ತು ಅವರ ಸಹಚರರನ್ನು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಖುಲಾಸೆ ಮಾಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ 2006 ರಲ್ಲಿ  ಸಿಧುವನ್ನು ತಪ್ಪಿತಸ್ಥ ನರಹತ್ಯೆಯ ಅಪರಾಧಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

2018 ರಲ್ಲಿ ಸಿಧು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದರು. ಒಂದೇ ಏಟಿಗೆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಯಾವುದೇ ಪುರಾವೆಗಳಿಲ್ಲ ಎಂದು ಹೈಕೋರ್ಟ್ ಆದೇಶವನ್ನು ತಳ್ಳಿ ಹಾಕಿದ  ಸುಪ್ರೀಂಕೋರ್ಟ್  ಹಿರಿಯ ನಾಗರಿಕರಿಗೆ ನೋವುಂಟು ಮಾಡಿದ  ಕಾರಣಕ್ಕೆ ಸಿಧುವನ್ನು ತಪ್ಪಿತಸ್ಥ ಎಂದು ಪರಿಗಣಿಸಿತು. ಸಿಧುಗೆ ಜೈಲು ಶಿಕ್ಷೆ ಮತ್ತು ₹ 1,000 ದಂಡ ವಿಧಿಸಲಾಯಿತು.

ಸಿಧು ಅವರ ಸಹಾಯಕ ರೂಪಿಂದರ್ ಸಂಧು ಅವರು ಸ್ಥಳದಲ್ಲಿ ಹಾಜರಿದ್ದಕ್ಕೆ ಸರಿಯಾದ ಪುರಾವೆಗಳಿಲ್ಲ ಎಂದು ಸುಪ್ರೀಂಕೋರ್ಟ್ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:22 pm, Thu, 19 May 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ