Mukhtar Ansari: ಅವಧೇಶ್ ಕೊಲೆ ಪ್ರಕರಣ: ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಆಗಸ್ಟ್ 3, 1991 ರಂದು, ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ ನ್ನು ವಾರಣಾಸಿಯಲ್ಲಿ ಅಜಯ್ ರಾಯ್ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಿಲಾಗಿತ್ತು.

Mukhtar Ansari: ಅವಧೇಶ್ ಕೊಲೆ ಪ್ರಕರಣ: ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮುಖ್ತಾರ್ ಅನ್ಸಾರಿ
Follow us
ರಶ್ಮಿ ಕಲ್ಲಕಟ್ಟ
|

Updated on:Jun 05, 2023 | 3:16 PM

ದೆಹಲಿ:  1991ರ ಅವಧೇಶ್ ರಾಯ್ ಹತ್ಯೆ(Awadhesh Rai murder case) ಪ್ರಕರಣದಲ್ಲಿ ಗ್ಯಾಂಗ್​​ಸ್ಟರ್ ,ರಾಜಕಾರಣಿ ಮುಖ್ತಾರ್ ಅನ್ಸಾರಿಗೆ (Mukhtar Ansari) ವಾರಣಾಸಿಯ (Varanasi) ವಿಶೇಷ ಎಂಪಿ/ಎಂಎಲ್ಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಇಂದು ಬೆಳಗ್ಗೆ ನ್ಯಾಯಾಲಯ ಪ್ರಸ್ತುತ ಕೊಲೆ ಪ್ರಕರಣದಲ್ಲಿ ಅನ್ಸಾರಿ ದೋಷಿ ಎಂದು ತೀರ್ಪು ನೀಡಿತ್ತು. ಆಗಸ್ಟ್ 3, 1991 ರಂದು, ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್​​ನ್ನು ವಾರಣಾಸಿಯಲ್ಲಿ ಅಜಯ್ ರಾಯ್ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಿಲಾಗಿತ್ತು. ಈ ಪ್ರಕರಣದಲ್ಲಿ ಅಜಯ್ ರಾಯ್ ಅವರು ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್ ಮತ್ತು ಮಾಜಿ ಶಾಸಕ ಅಬ್ದುಲ್ ಕಲೀಂನ್ನು ಎಫ್‌ಐಆರ್‌ನಲ್ಲಿ ಹೆಸರಿಸಿದ್ದರು.

32 ವರ್ಷಗಳಷ್ಟು ಹಳೆಯದಾದ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದ ವಾರಣಾಸಿಯ ನ್ಯಾಯಾಲಯವು ಜೈಲಿನಲ್ಲಿರುವ  ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ಮತ್ತು ₹ 1,00,000 ದಂಡ ವಿಧಿಸಿದೆ. ಅವಧೇಶ್ ಕೊಲೆ ನಡೆದಾಗ ಮುಖ್ತಾರ್ ಅನ್ಸಾರಿ  ಶಾಸಕರಾಗಿರಲಿಲ್ಲ. ತೀರ್ಪು ಪ್ರಕಟವಾಗುವ ಮುನ್ನ ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು.

ಅನ್ಸಾರಿ ವಿರುದ್ಧದ 61 ಕ್ರಿಮಿನಲ್ ಪ್ರಕರಣಗಳಲ್ಲಿ ಇದು ಐದನೇ ಶಿಕ್ಷೆಯಾಗಿದೆ. ಈತನ ವಿರುದ್ಧ ರಾಜ್ಯದ ವಿವಿಧೆಡೆ ಇನ್ನೂ 20 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಐದು ಬಾರಿ ಶಾಸಕರಾಗಿರುವ ಮುಖ್ತಾರ್ ಅನ್ಸಾರಿಗೆ ಈ ಏಪ್ರಿಲ್‌ನಲ್ಲಿ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು.

ಇದನ್ನೂ ಓದಿ: Mukhtar Ansari: ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್​​ಸ್ಟರ್ ಮುಖ್ತಾರ್ ಅನ್ಸಾರಿ ದೋಷಿ

ವಾರಣಾಸಿ ಎಂಪಿ ಎಂಎಲ್ಎ ನ್ಯಾಯಾಲಯವು ಮೇ 19 ರಂದು ಅಂತಿಮ ವಾದಗಳ ನಂತರ ಅವಧೇಶ್ ರಾಯ್ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿತು. ಆದೇಶವನ್ನು ಕಾಯ್ದಿರಿಸಿದ ಕೋರ್ಟ್ ಜೂನ್ 5 ರಂದು ದಿನಾಂಕವನ್ನು ನಿಗದಿಪಡಿಸಿತು.

1996, 2002, 2007, 2012 ಮತ್ತು 2017ರಲ್ಲಿ ಮುಖ್ತಾರ್ ಅನ್ಸಾರಿ ಅವರು ಐದು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಜೈಲಿನಿದ್ದಾಗಲೇ ಅನ್ಸಾರಿ ಮೂರು ಬಾರಿ ಗೆದ್ದಿದ್ದಾರೆ. ಮುಖ್ತಾರ್ ಪುತ್ರ ಅಬ್ಬಾಸ್ ಅನ್ಸಾರಿ 2022 ರಲ್ಲಿ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದಿಂದ (SBSP) ಸ್ಪರ್ಧಿಸಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಭದ್ರಕೋಟೆಯಾದ ಮೌ ಸದರ್‌ನಿಂದ ಗೆದ್ದಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Mon, 5 June 23

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ