ಮಹಾರಾಷ್ಟ್ರದ ನಾಸಿಕ್‌ನಲ್ಲಿ ಫಿರಂಗಿ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್‌ಗಳು ಸಾವು
ಮಹಾರಾಷ್ಟ್ರದ ನಾಸಿಕ್‌ನಲ್ಲಿ ಗುರುವಾರ ಮಧ್ಯಾಹ್ನ ಆರ್ಟಿಲರಿ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ. ಅಗ್ನಿವೀರ್‌ಗಳ ತಂಡವು ಭಾರತೀಯ ಫೀಲ್ಡ್ ಗನ್‌ನಿಂದ ಗುಂಡು ಹಾರಿಸುತ್ತಿದ್ದಾಗ ಒಂದು ಶೆಲ್ ಸ್ಫೋಟಿಸಿತು. ಫೈರಿಂಗ್ ತರಬೇತಿ ವೇಳೆ ಫಿರಂಗಿ ಶೆಲ್ ಸ್ಫೋಟಗೊಂಡಾಗ ಅಪಘಾತದಲ್ಲಿ ಇಬ್ಬರು ಭಾರತೀಯ ಸೇನಾ ಅಗ್ನಿವೀರ್‌ಗಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ನಾಸಿಕ್: ದುರಂತ ಘಟನೆಯೊಂದರಲ್ಲಿ ಫೈರಿಂಗ್ ತರಬೇತಿಯ ಸಮಯದಲ್ಲಿ ಫಿರಂಗಿ ಶೆಲ್ ಸ್ಫೋಟಗೊಂಡಾಗ ಅಪಘಾತದಲ್ಲಿ ಇಬ್ಬರು ಭಾರತೀಯ ಸೇನಾ ಅಗ್ನಿವೀರ್‌ಗಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನ ಡಿಯೋಲಾಲಿಯಲ್ಲಿರುವ ಆರ್ಟಿಲರಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಅಗ್ನಿವೀರರು ತರಬೇತಿಗಾಗಿ ಹೈದರಾಬಾದ್‌ನಿಂದ ಆಗಮಿಸಿದ್ದರು. ಭಾರತೀಯ ಸೇನೆಯು ಅಪಘಾತದ ನಿಖರವಾದ ಕಾರಣವನ್ನು ತನಿಖೆ ನಡೆಸುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿವೀರ್‌ಗಳು ಗನ್ನರ್ ಗೋಹಿಲ್ ವಿಶ್ವರಾಜ್‌ಸಿಂಹ ಮತ್ತು ಗನ್ನರ್ ಸೈಕತ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ದಕ್ಷಿಣ ಕಮಾಂಡ್ ಇಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಮೃತರನ್ನು ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿತ್ (21) ಎಂದು ಗುರುತಿಸಲಾಗಿದೆ. ಅವರಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಡಿಯೋಲಾಲಿಯ ಎಂಎಚ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಹವಾಲ್ದಾರ್ ಅಜಿತ್ ಕುಮಾರ್ ನೀಡಿದ ದೂರಿನ ಮೇರೆಗೆ ದೇವಾಲಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ಜನರ ದಾರಿ ತಪ್ಪಿಸುತ್ತಿದ್ದಾರೆ; ಅಗ್ನಿವೀರ್ ಯೋಜನೆ ಕುರಿತು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ
ಇದೇ ರೀತಿ ಅಕ್ಟೋಬರ್ 4ರಂದು ರಾಜಸ್ಥಾನದ ಭರತ್‌ಪುರದಲ್ಲಿ ಅಣಕು ಡ್ರಿಲ್‌ನಲ್ಲಿ ಅಗ್ನಿಶಾಮಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 24 ವರ್ಷದ ಅಗ್ನಿವೀರ್ ಸಾವನ್ನಪ್ಪಿದ್ದರು. ಅದಾದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ.
‘ಅಗ್ನಿವೀರ್’ ಎಂದರೆ ಯಾರು?:
ಭಾರತೀಯ ಸಶಸ್ತ್ರ ಪಡೆಗಳು ‘ಅಗ್ನಿಪಥ್’ ಯೋಜನೆಯಡಿಯಲ್ಲಿ ‘ಅಗ್ನಿವೀರ್’ಗಳನ್ನು ಜೂನ್ 2022ರಲ್ಲಿ ಜಾರಿಗೆ ತಂದಿತು. ಇಲ್ಲಿಗೆ ನೇಮಕಗೊಂಡವರು 4 ವರ್ಷಗಳ ಅಧಿಕಾರಾವಧಿಯನ್ನು ಪೂರೈಸುತ್ತಾರೆ. ಅಧಿಕಾರಾವಧಿಯ ಕೊನೆಯಲ್ಲಿ ಹೊರಹೋಗುವ ಬ್ಯಾಚ್‌ನಲ್ಲಿ ಶೇ. 25ಕ್ಕಿಂತ ಹೆಚ್ಚು ಅಗ್ನಿವೀರ್‌ಗಳನ್ನು ಕಾಯಂ ಕೇಡರ್‌ಗೆ ಆಯ್ಕೆ ಮಾಡಲಾಗುವುದಿಲ್ಲ.
ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್ ಸೋಲು; ರಾಹುಲ್ ಗಾಂಧಿ ಮನೆಗೆ 1 ಕೆಜಿ ಜಿಲೇಬಿ ಕಳುಹಿಸಿದ ಬಿಜೆಪಿ
ವಿಶೇಷವಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅಗ್ನಿವೀರ್‌ಗಳು ಸಾಮಾನ್ಯ ಅಧಿಕಾರಿ ಅಥವಾ ಜವಾನರಿಗೆ ಸಿಗುವ ಪ್ರಯೋಜನಗಳನ್ನು ಪಡೆಯುವುದಿಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ. ಇದನ್ನು ಆಡಳಿತ ಸರ್ಕಾರವಾದ ಬಿಜೆಪಿ ತಿರಸ್ಕರಿಸುತ್ತದೆ. ನಾಲ್ಕು ವರ್ಷಗಳ ಕೊನೆಯಲ್ಲಿ ನಿವೃತ್ತರಾಗುವ ಅಗ್ನಿವೀರರಿಗೆ ಕೇಂದ್ರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳು ಕ್ರಮವಾಗಿ ಕೇಂದ್ರ ಮತ್ತು ರಾಜ್ಯ ಸೇವೆಗಳಲ್ಲಿ ಉದ್ಯೋಗಗಳನ್ನು ಮೀಸಲಿಟ್ಟಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ