ರಜೌರಿ ಎನ್​ಕೌಂಟರ್​: ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದರೆ, ಒಬ್ಬ ಯೋಧ ಗಾಯಗೊಂಡಿದ್ದಾರೆ. ಬುಧವಾರ (ಸೆಪ್ಟೆಂಬರ್ 22) ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.

ರಜೌರಿ ಎನ್​ಕೌಂಟರ್​: ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮ
ಸೈನಿಕರುImage Credit source: ABP Live
Follow us
ನಯನಾ ರಾಜೀವ್
|

Updated on:Nov 23, 2023 | 10:44 AM

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದರೆ, ಒಬ್ಬ ಯೋಧ ಗಾಯಗೊಂಡಿದ್ದಾರೆ. ಬುಧವಾರ (ಸೆಪ್ಟೆಂಬರ್ 22) ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.

ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಾವನ್ನಪ್ಪಿದ ಯೋಧರಾಗಿದ್ದಾರೆ. ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರ ಪ್ರಾಂಜಲ್ ಆಗಿದ್ದಾರೆ. ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು. 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು.

ಗಾಯಗೊಂಡ ಯೋಧನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ಸ್ಥಳದಲ್ಲೇ ಇಬ್ಬರು ಭಯೋತ್ಪಾದಕರನ್ನು ಸುತ್ತುವರಿದಿದ್ದು, ಭೀಕರ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರನ್ನು ಹತ್ಯೆಗೈಯಲು ಹೆಚ್ಚಿನ ಸೈನಿಕರನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಧರ್ಮಸಾಲ್‌ನ ಬಾಜಿಮಲ್ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕರ ಪತ್ತೆಗಾಗಿ ಭಾನುವಾರದಿಂದ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಲ್ಲಿನ ಸ್ಥಳೀಯರಿಗೆ ಮನೆ ಬಿಟ್ಟು ಹೊರಗಡೆ ತೆರಳದಂತೆ ಸೂಚಿಸಲಾಗಿತ್ತು, ಮಕ್ಕಳು ಕೂಡ ಶಾಲೆಗೆ ಹೋಗದೆ ಮನೆಯಲ್ಲೇ ಉಳಿದಿದ್ದರು. ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಎನ್​ಕೌಂಟರ್​ ನಡೆಯುತ್ತಿದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: Encounter In UP: ಯುಪಿಯಲ್ಲಿ ಕಳೆದ 6 ವರ್ಷಗಳಲ್ಲಿ 10 ಸಾವಿರಕ್ಕೂ ಅಧಿಕ ಎನ್​ಕೌಂಟರ್​ಗಳು, 63 ಕ್ರಿಮಿನಲ್​ಗಳ ಹತ್ಯೆ

ಇಬ್ಬರು ಭಯೋತ್ಪಾದಕರು ವಿದೇಶಿ ಪ್ರಜೆಯಾಗಿದ್ದಾರೆ, ಮತ್ತು ಇದೇ ಪ್ರದೇಶದಲ್ಲಿ ತಿರುಗಾಡುತ್ತಿದ್ದಾರೆ ಎನ್ನುವ ಮಾಹಿತಿ ಬಂದಿತ್ತು. ಪ್ರತಿ ದಿನವೂ ಒಂದಲ್ಲಾ ಒಂದು ರೀತಿಯಲ್ಲಿ ಭಾರತದ ಮೇಲೆ ದಾಳಿ ನಡೆಸಲು ಉಗ್ರರು ಯತ್ನಿಸುತ್ತಲೇ ಇರುತ್ತಾರೆ, ಆದರೆ ಗಡಿ ಭದ್ರತಾ ಪಡೆ ಅದ್ಯಾವುದಕ್ಕೂ ಕಿಂಚಿತ್ತು ಅವಕಾಶವನ್ನು ಮಾಡಿಕೊಡುತ್ತಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:37 am, Thu, 23 November 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್