ಜಮ್ಮು ಕಾಶ್ಮೀರ: ಉಗ್ರರ ವಿರುದ್ಧದ ಹೋರಾಟದಲ್ಲಿ ಓರ್ವ ಪೊಲೀಸ್, ಇಬ್ಬರು ಸೇನಾಧಿಕಾರಿಗಳು ಹುತಾತ್ಮ

|

Updated on: Sep 13, 2023 | 7:49 PM

ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಸೇನೆಯ 15 ಕಾರ್ಪ್ಸ್ ಕಮಾಂಡರ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ಎನ್‌ಕೌಂಟರ್ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಮತ್ತು ಮೃತದೇಹಗಳ ತೆರವು ಕಾರ್ಯವನ್ನು ಮೇಲ್ವಿಚಾರಣೆ ಮಾಡಿದ್ದಾರೆ.ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ನಿನ್ನೆ ತಡರಾತ್ರಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಮ್ಮು ಕಾಶ್ಮೀರ: ಉಗ್ರರ ವಿರುದ್ಧದ ಹೋರಾಟದಲ್ಲಿ ಓರ್ವ ಪೊಲೀಸ್, ಇಬ್ಬರು ಸೇನಾಧಿಕಾರಿಗಳು ಹುತಾತ್ಮ
ಎನ್​ಕೌಂಟರ್ ನಡೆದ ಸ್ಥಳಕ್ಕೆ ಆಗಮಿಸಿದ ಸೇನಾಪಡೆ
Follow us on

ಜಮ್ಮು ಮತ್ತು ಕಾಶ್ಮೀರ ಸೆಪ್ಟೆಂಬರ್ 13: ಕಾಶ್ಮೀರದ (Kashmir) ಅನಂತ್‌ನಾಗ್‌ನಲ್ಲಿ (Anantnag) ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರಾಷ್ಟ್ರೀಯ ರೈಫಲ್ಸ್ ಯುನಿಟ್ (Rashtriya Rifles Unit) ಮುನ್ನಡೆಸುತ್ತಿದ್ದ ಸೇನಾ ಪಡೆಯ ಕರ್ನಲ್, ಮೇಜರ್ ಮತ್ತು ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಪೊಲೀಸ್ ಉಪ ಅಧೀಕ್ಷಕ ಹ್ಯುಮನ್ಯು  ಪ್ರಾಣ ಕಳೆದುಕೊಂಡಿದ್ದಾರೆ.  ಕರ್ನಲ್ ಮನ್‌ಪ್ರೀತ್ ಸಿಂಗ್ ಅವರು 19 ರಾಷ್ಟ್ರೀಯ ರೈಫಲ್ಸ್ (19 ಆರ್‌ಆರ್) ಘಟಕದ ಕಮಾಂಡಿಂಗ್ ಅಧಿಕಾರಿಯಾಗಿದ್ದರು. ರಾಷ್ಟ್ರೀಯ ರೈಫಲ್ಸ್ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಡಾಯ ನಿಗ್ರಹ ಪಡೆ ಆಗಿದೆ.

ಅನಂತನಾಗ್‌ನ ಕೋಕರ್‌ನಾಗ್ ಪ್ರದೇಶದ ದಟ್ಟ ಅರಣ್ಯದಲ್ಲಿ ಭಯೋತ್ಪಾದಕರು ನಡೆಸಿದ ಭಾರೀ ಗುಂಡಿನ ದಾಳಿಯ ನಡುವೆ ಪೊಲೀಸ್ ಅಧಿಕಾರಿಯ ಮೃತದೇಹವನ್ನು ಹೊರತೆಗೆಯಲಾಗಿದೆ.

ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಸೇನೆಯ 15 ಕಾರ್ಪ್ಸ್ ಕಮಾಂಡರ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ಎನ್‌ಕೌಂಟರ್ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಮತ್ತು ಮೃತದೇಹಗಳ ತೆರವು ಕಾರ್ಯವನ್ನು ಮೇಲ್ವಿಚಾರಣೆ ಮಾಡಿದ್ದಾರೆ.


ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ನಿನ್ನೆ ತಡರಾತ್ರಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಕಮಾಂಡಿಂಗ್ ಆಫೀಸರ್ ಮತ್ತು ಡೆಪ್ಯುಟಿ ಸೂಪರಿಂಟೆಂಡೆಂಟ್ ನೇತೃತ್ವದ ಪಡೆಗಳು ಭಾರೀ ಗುಂಡಿನ ದಾಳಿಗೆ ಒಳಗಾದವು.

ಮೂವರು ಅಧಿಕಾರಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಸೇನಾಪಡೆ ತಕ್ಷಣವೇ ಪ್ರದೇಶಕ್ಕೆ ಧಾವಿಸಿತು. ಆದರೆ ಭಯೋತ್ಪಾದಕರ ಭಾರೀ ಗುಂಡಿನ ದಾಳಿಯಿಂದಾಗಿ ಗಾಯಾಳುಗಳನ್ನು ತಕ್ಷಣವೇ ಸ್ಥಳಾಂತರಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:  ಬಿಎಸ್‌ಪಿ ಭದ್ರಕೋಟೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್; ಕಾನ್ಶಿರಾಂ ಸ್ಪರ್ಧಿಸಿದ್ದ ಕ್ಷೇತ್ರದಿಂದ ಖರ್ಗೆ ಅವರನ್ನು ಕಣಕ್ಕಿಳಿಸಲು ಸಿದ್ಧತೆ?

ಕಳೆದ 24 ಗಂಟೆಗಳಲ್ಲಿ ಇದು ಎರಡನೇ ಎನ್‌ಕೌಂಟರ್ ಆಗಿದೆ. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಎನ್‌ಕೌಂಟರ್‌ನಲ್ಲಿ ಒಬ್ಬ ಸೇನಾ ಯೋಧ ಹುತಾತ್ಮರಾಗಿದ್ದರು ಮತ್ತು ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಕೂಡ ಹತರಾಗಿದ್ದಾರೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:49 pm, Wed, 13 September 23