ಜಮ್ಮು ಕಾಶ್ಮೀರದಲ್ಲಿ ಯೋಧರು ಉಗ್ರರ ನಡುವೆ ಗುಂಡಿನ ಕಾಳಗ, ಇಬ್ಬರು ಸೈನಿಕರು ಹುತಾತ್ಮ, ಮೂವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರದ ಅರಣ್ಯ ಪ್ರದೇಶದಲ್ಲಿ ಶನಿವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದು ಮೂವರು ಗಾಯಗೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರದ ಅರಣ್ಯ ಪ್ರದೇಶದಲ್ಲಿ ಶನಿವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದು ಮೂವರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಕಾಡಿನಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಸೈನಿಕರನ್ನು ಗಮನಿಸಿ ಮನಬಂದಂತೆ ಗುಂಡು ಹಾರಿಸಿದರು, ಇದು ತೀವ್ರ ಗುಂಡಿನ ಕಾಳಗಕ್ಕೆ ಕಾರಣವಾಯಿತು.
ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರದೃಷ್ಟವಶಾತ್, ಗಾಯಗೊಂಡ ಇಬ್ಬರು ಸಿಬ್ಬಂದಿ ನಂತರ ಸಾವನ್ನಪ್ಪಿದ್ದಾರೆ.
ವಿದೇಶಿಯರು ಎಂದು ಶಂಕಿಸಲಾದ ಭಯೋತ್ಪಾದರನ್ನು ಮಟ್ಟಹಾಕಲು ಸೇನೆಯ ವಿಶೇಷ ಪಡೆಗಳು, ಪ್ಯಾರಾಟ್ರೂಪರ್‌ಗಳು ಕಾರ್ಯಾಚರಣೆಯಲ್ಲಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕೋಕರ್‌ನಾಗ್‌ನಲ್ಲಿ ನಡೆದ ಎನ್‌ಕೌಂಟರ್ ಬಿಟ್ಟರೆ, ಇದು ಎರಡನೇ ಪ್ರಮುಖ ಗುಂಡಿನ ಚಕಮಕಿಯಾಗಿದೆ.
ಸೆಪ್ಟೆಂಬರ್ 2023 ರಲ್ಲಿ, ಕೋಕರ್ನಾಗ್ ಅರಣ್ಯದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಕಮಾಂಡಿಂಗ್ ಆಫೀಸರ್, ಮೇಜರ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹುತಾತ್ಮರಾಗಿದ್ದರು. ಅನಂತನಾಗ್ ಜಿಲ್ಲೆಯ ಕೊಕರ್ನಾಗ್‌ನ ಅಹ್ಲಾನ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಛತ್ತೀಸ್ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ, ಇಬ್ಬರು ಯೋಧರು ಹುತಾತ್ಮ
ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಅವರಿಗೆ ತಕ್ಷಣದ ವೈದ್ಯಕೀಯ ನೆರವು ಒದಗಿಸಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ತಿಳಿಸಿದೆ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಪ್ರವೃತ್ತವಾಗಿವೆ ಎಂದು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:37 pm, Sat, 10 August 24