ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ರಕ್ತಸಿಕ್ತ ಸ್ಥಿತಿಯಲ್ಲಿ ಎರಡು ಶವ ಪತ್ತೆ
ಮಣಿಪುರದ ಇಂಫಾಲ್ನಲ್ಲಿ ಎರಡು ಶವಗಳು ಪತ್ತೆಯಾಗಿವೆ. ಕಣ್ಣುಗಳಿಗೆ ಬಟ್ಟೆ ಕಟ್ಟಲಾಗಿತ್ತು, ಮೈತುಂಬಾ ಗಾಯದ ಗುರುತುಗಳು, ಕೈಗಳು ಕೂಡ ಕಟ್ಟಿದ್ದವು. ಇಬ್ಬರಲ್ಲಿ ಓರ್ವ ಮಹಿಳೆ ಕೂಡ ಇದ್ದಾರೆ. ಬುಧವಾರದಂದು ಇಂಫಾಲ್ ಪಶ್ಚಿಮ ಜಿಲ್ಲೆಯ ತೈರೆನ್ಪೋಕ್ಟಿ ಪ್ರದೇಶದ ಸುತ್ತಮುತ್ತಲ ಪ್ರದೇಶದಲ್ಲಿ ಮಧ್ಯವಯಸ್ಕ ಮಹಿಳೆಯ ಶವ ಪತ್ತೆಯಾಗಿತ್ತು.

ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಇಂಫಾಲ್ನ ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕಳುಹಿಸಲಾಗಿದೆ. ಮಂಗಳವಾರ ತಡರಾತ್ರಿ ಇಂಫಾಲ್ ಪೂರ್ವ ಜಿಲ್ಲೆಯ ತಖೋಕ್ ಮಾಪಾಲ್ ಮಖಾ ಪ್ರದೇಶದಲ್ಲಿ ನಲವತ್ತರ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿತ್ತು. ಸ್ಥಳೀಯರು ಅಪರಿಚಿತ ವ್ಯಕ್ತಿಯ ಶವವನ್ನು ಹೊರ ತೆಗೆದಿದ್ದಾರೆ.
ಪೊಲೀಸರ ಪ್ರಕಾರ, ಮೃತ ವ್ಯಕ್ತಿಯ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು, ಕೈಗಳನ್ನು ಬೆನ್ನಿನ ಹಿಂದೆ ಕಟ್ಟಿದ ಸ್ಥಿತಿಯಲ್ಲಿತ್ತು, ತಲೆಯ ಮೇಲೆ ಗುಂಡಿನ ಗಾಯಗಳಿದ್ದವು. ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು
ಮಂಗಳವಾರ ಕಾಂಗ್ಚುಪ್ನಲ್ಲಿ ಅಪರಿಚಿತ ಗುಂಡು ಹಾರಿಸಿದ್ದು, ಇಬ್ಬರು ಪೊಲೀಸ್ ಸಿಬ್ಬಂದಿ ಮತ್ತು ಒಬ್ಬ ಮಹಿಳೆ ಸೇರಿದಂತೆ 9 ಮಂದಿಗೆ ಗುಂಡುಗಳು ತಗುಲಿವೆ.
ಮೇ ತಿಂಗಳಿನಲ್ಲಿ ಮೊದಲ ಬಾರಿಗೆ ಜನಾಂಗೀಯ ಘರ್ಷಣೆಗಳು ಸ್ಫೋಟಗೊಂಡಾಗಿನಿಂದ ಮಣಿಪುರದಲ್ಲಿ ಹಿಂಸಾಚಾರಗಳು ಹೆಚ್ಚಾಗಿವೆ. ಅಂದಿನಿಂದ ಇಲ್ಲಿಯವರೆಗೆ 180ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ