ದೆಹಲಿ-ಜೈಪುರ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಲೀಪರ್ ಬಸ್, ಇಬ್ಬರು ಪ್ರಯಾಣಿಕರು ಸಜೀವ ದಹನ

|

Updated on: Nov 09, 2023 | 8:20 AM

ದೆಹಲಿ-ಜೈಪುರ್ ಹೆದ್ದಾರಿಯಲ್ಲಿ ಬರುತ್ತಿದ್ದ ಸ್ಲೀಪರ್​ ಬಸ್​ ಹೊತ್ತಿ ಉರಿದಿದ್ದು, ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವದಹನವಾಗಿದ್ದಾರೆ. ದುರಂತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಬಸ್​ ರಾಜಸ್ಥಾನದಿಂದ ದೆಹಲಿಗೆ ಬರುತ್ತಿರುವಾಗ ಘಟನೆ ನಡೆದಿದೆ. ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ಘಟನೆ ಸಂಭವಿಸಿದೆ.

ದೆಹಲಿ-ಜೈಪುರ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಲೀಪರ್ ಬಸ್, ಇಬ್ಬರು ಪ್ರಯಾಣಿಕರು ಸಜೀವ ದಹನ
ಬಸ್
Image Credit source: News 18
Follow us on

ದೆಹಲಿ-ಜೈಪುರ್ ಹೆದ್ದಾರಿಯಲ್ಲಿ ಬರುತ್ತಿದ್ದ ಸ್ಲೀಪರ್​ ಬಸ್​ ಹೊತ್ತಿ ಉರಿದಿದ್ದು, ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವದಹನವಾಗಿದ್ದಾರೆ.
ದುರಂತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಬಸ್​ ರಾಜಸ್ಥಾನದಿಂದ ದೆಹಲಿಗೆ ಬರುತ್ತಿರುವಾಗ ಘಟನೆ ನಡೆದಿದೆ. ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ಘಟನೆ ಸಂಭವಿಸಿದೆ.

ಎಆರ್ 01 ಕೆ 7707 ನೋಂದಣಿ ಸಂಖ್ಯೆಯ ಸ್ಲೀಪರ್ ಬಸ್‌ಗೆ ಕ್ಯಾರೇಜ್‌ವೇಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿಯನ್ನು ಪಡೆದ ನಂತರ ಮೂರು ಅಗ್ನಿಶಾಮಕ ಇಂಜಿನ್‌ಗಳು ಸ್ಥಳಕ್ಕೆ ಧಾವಿಸಿತ್ತು. ಏಳು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗುರುಗ್ರಾಮ್‌ನ ಸಿವಿಲ್ ಆಸ್ಪತ್ರೆಯ ಡಾ.ಮಾನವ್ ಖಚಿತಪಡಿಸಿದ್ದಾರೆ.

ಎಲ್ಲಾ ಗಾಯಾಳುಗಳು 30 ರಿಂದ 50 ರಷ್ಟು ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ ಆದರೆ ಆರೋಗ್ಯ ಸ್ಥಿರವಾಗಿದೆ ಎಂದು ಅವರು ಹೇಳಿದರು.
ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು.

ಮತ್ತಷ್ಟು ಓದಿ: ತನ್ನ ವಿರುದ್ಧ ದೂರು ನೀಡಿದರೆಂದು ವಾಹನಗಳಿಗೆ ಬೆಂಕಿ ಹಚ್ಚಿದ ಶ್ವಾನ ಮಾಲೀಕ ಅರೆಸ್ಟ್

ಮತ್ತೊಂದೆಡೆ, ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ದೆಹಲಿ ಜೈಪುರ ಹೆದ್ದಾರಿಯಲ್ಲಿ ಸುದೀರ್ಘ ಟ್ರಾಫಿಕ್ ಜಾಮ್ ಆಗಿತ್ತು. ಜಾಮ್ ತೆರವುಗೊಳಿಸಲು ಪೊಲೀಸ್ ಸಿಬ್ಬಂದಿ ತುಂಬಾ ಕಷ್ಟಪಡುವಂತಾಯಿತು. ದ್ಯ ಅಗ್ನಿಶಾಮಕ ದಳ ಮತ್ತು ಪೊಲೀಸರು ಬೆಂಕಿಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಸಂಪೂರ್ಣ ಅಪಘಾತದ ತನಿಖೆಯನ್ನು ಪೊಲೀಸರು ನಿರತರಾಗಿದ್ದಾರೆ.

ಬಸ್​ನಲ್ಲಿ ಕಾರ್ಮಿಕರಿದ್ದರು. ಈ ಪೈಕಿ ಮೂವರು ಸಫ್ದರ್‌ಗಂಜ್ ಆಸ್ಪತ್ರೆಯಲ್ಲಿ, ಆರು ಮಂದಿ ಸಿವಿಲ್ ಆಸ್ಪತ್ರೆಯಲ್ಲಿ ಮತ್ತು ಐವರು ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ