AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸೀಮಾಪುರಿ ಕಟ್ಟಡ ಕುಸಿತ; ಇಬ್ಬರು ಮಕ್ಕಳು, ಗರ್ಭಿಣಿ ಸೇರಿದಂತೆ ಮೂವರು ಸಾವು

ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಇಂದು (ಅಕ್ಟೋಬರ್ 7) ನಡೆದ ಕಟ್ಟಡ ದುರಂತದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. 4 ಮಹಡಿಯ ಕಟ್ಟಡದ ಮುಂಭಾಗದ ಭಾಗ ದಿಢೀರ್ ಕುಸಿದುಬಿದ್ದ ಪರಿಣಾಮವಾಗಿ ಇಬ್ಬರು ಮಕ್ಕಳು ಹಾಗೂ 4 ತಿಂಗಳ ಗರ್ಭಿಣಿ ಮೃತಪಟ್ಟಿದ್ದಾರೆ. ಕಾರ್ಯಾಚರಣೆ ತೀವ್ರಗೊಳಿಸಿರುವ ರಕ್ಷಣಾ ಸಿಬ್ಬಂದಿ ಇದುವರೆಗೆ 11 ಜನರನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ರಕ್ಷಿಸಲಾದ 8 ಗಾಯಾಳುಗಳನ್ನು ತಹಿರ್‌ಪುರದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೆಹಲಿ ಸೀಮಾಪುರಿ ಕಟ್ಟಡ ಕುಸಿತ; ಇಬ್ಬರು ಮಕ್ಕಳು, ಗರ್ಭಿಣಿ ಸೇರಿದಂತೆ ಮೂವರು ಸಾವು
ಸೀಮಾಪುರಿ ಕಟ್ಟಡ ಕುಸಿತImage Credit source: ANI
ಸುಷ್ಮಾ ಚಕ್ರೆ
|

Updated on: Oct 07, 2026 | 10:39 PM

Share

ನವದೆಹಲಿ, ಅಕ್ಟೋಬರ್ 7: ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಇಂದು ಸಂಭವಿಸಿದ ಭೀಕರ ಕಟ್ಟಡ ದುರಂತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. 4 ಮಹಡಿಯ ಕಟ್ಟಡದ ಮುಂಭಾಗದ ಭಾಗವು ದಿಢೀರ್ ಕುಸಿದುಬಿದ್ದ ಪರಿಣಾಮವಾಗಿ ಇಬ್ಬರು ಮಕ್ಕಳು ಹಾಗೂ 4 ತಿಂಗಳ ಗರ್ಭಿಣಿ ಮಹಿಳೆ ಮೃತಪಟ್ಟಿದ್ದಾರೆ. ರಕ್ಷಣಾ ಸಿಬ್ಬಂದಿ ಹಾಗೂ ಸ್ಥಳೀಯರು ಶ್ರಮಿಸಿ ಇದುವರೆಗೆ 11 ಜನರನ್ನು ಅವಶೇಷಗಳ ಅಡಿಯಿಂದ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಈ ಘಟನೆಯಲ್ಲಿ ಪಕ್ಕದಲ್ಲಿದ್ದ ಎರಡು ಮನೆಗಳಿಗೂ ಭಾಗಶಃ ಹಾನಿಯಾಗಿದೆ.

ಮಂಗಳವಾರ ಸಂಜೆ ಉತ್ತರಾಖಂಡದಲ್ಲಿ ಸಂಭವಿಸಿದ ಭೂಕಂಪದ ಆಘಾತದಿಂದಾಗಿ ಈ ಕಟ್ಟಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದವು ಎಂದು ದೆಹಲಿ ಮಹಾನಗರ ಪಾಲಿಕೆ (MCD) ಹಾಗೂ ಸ್ಥಳೀಯರು ಶಂಕಿಸಿದ್ದಾರೆ. ಕಟ್ಟಡದ ಮಾಲೀಕರು ಮನೆ ಖಾಲಿ ಮಾಡಿಸುವ ಪ್ರಕ್ರಿಯೆಯಲ್ಲಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈದ್ಗಾ ಮಚ್ಲಿ ಮಂಡಿ ಬಳಿಯ ದುಸಿಬ್ ವ್ಯಾಪ್ತಿಯಲ್ಲಿದ್ದ ಸುಮಾರು 225 ಚದರ ಅಡಿ ವಿಸ್ತೀರ್ಣದ ಈ ಕಟ್ಟಡ ಕುಸಿದ ತಕ್ಷಣವೇ ಸ್ಥಳೀಯರು ಕೈಯಿಂದಲೇ ಶಿಥಿಲಾವಶೇಷಗಳನ್ನು ತೆರವುಗೊಳಿಸಿ ರಕ್ಷಣಾ ಕಾರ್ಯಕ್ಕೆ ನೆರವಾದರು.

ಇದನ್ನೂ ಓದಿ: ದೆಹಲಿಯ ಸೀಮಾಪುರಿಯಲ್ಲಿ 4 ಮಹಡಿ ಕಟ್ಟಡ ಕುಸಿತ, ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಶುರು

ನಂತರ ದೆಹಲಿ ಅಗ್ನಿಶಾಮಕ ದಳ, ದೆಹಲಿ ಪೊಲೀಸ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಡಿಡಿಎಂಎ ಪಡೆಗಳು ಸ್ಥಳಕ್ಕಾಗಮಿಸಿ ಜೆಸಿಬಿ ಮೂಲಕ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿವೆ. ದೆಹಲಿಯ ಸತ್ಯ ನಿಕೇತನ ದುರಂತ ನಡೆದ ಕೇವಲ ಒಂದು ತಿಂಗಳ ಅಂತರದಲ್ಲೇ, ಈಶಾನ್ಯ ದೆಹಲಿಯ ಸೀಮಾಪುರಿಯಲ್ಲಿ ಈ ಭೀಕರ ದುರಂತ ಸಂಭವಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ