ವೇಗವಾಗಿ ಸಾಗುತ್ತಿದೆ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ; ಶುರುವಾದ ವಾರದೊಳಗೆ ಕೊರೊನಾ ಲಸಿಕೆ ಪಡೆದವರ ಸಂಖ್ಯೆ 2 ಕೋಟಿ

ಕೊವಿನ್ ಆ್ಯಪ್​​ನಲ್ಲಿ ತೋರಿಸಲಾದ ಮಾಹಿತಿಯಂತೆ, ಜನವರಿ 1ರಿಂದ 7ರವರೆಗೆ, 15-17ವಯಸ್ಸಿನವರು ಒಟ್ಟು 20,226,790 ಮಂದಿ ಲಸಿಕೆ ಪಡೆದಿದ್ದಾರೆ. ದೇಶದಲ್ಲಿ ಶುಕ್ರವಾರ ಒಟ್ಟಾರೆ ಕೊರೊನಾ ಲಸಿಕೆ ಅಭಿಯಾನ 150 ಕೋಟಿ ಗಡಿದಾಟಿದೆ.

ವೇಗವಾಗಿ ಸಾಗುತ್ತಿದೆ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ; ಶುರುವಾದ ವಾರದೊಳಗೆ ಕೊರೊನಾ ಲಸಿಕೆ ಪಡೆದವರ ಸಂಖ್ಯೆ 2 ಕೋಟಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jan 08, 2022 | 3:56 PM

ದೇಶದಲ್ಲಿ ಜನವರಿ 3ರಿಂದ 15-17ವರ್ಷದವರಿಗೂ ಕೊವಿಡ್ 19 ಲಸಿಕೆ ನೀಡಲಾಗುತ್ತಿದೆ. ಈ ಮೂಲಕ ಕೊರೊನಾ ಲಸಿಕೆ ಅಭಿಯಾನವನ್ನು(Covid 19 Vaccination Drive) ಇನ್ನೊಂದು ಹಂತಕ್ಕೆ ವಿಸ್ತರಿಸಲಾಗಿದೆ. ಹಾಗೇ, ಹೊಸ ಹಂತದ ಕೊರೊನಾ ಲಸಿಕೆ ಅಭಿಯಾನ ಶುರುವಾದ ಒಂದು ವಾರದ ಒಳಗೆ, 15-17ವರ್ಷದವರು 2 ಕೋಟಿಗೂ ಅಧಿಕ ಫಲಾನುಭವಿಗಳು ಲಸಿಕೆ ಪಡೆದಿದ್ದಾರೆ. ಈ ಬಗ್ಗೆ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಮಕ್ಕಳ ವ್ಯಾಕ್ಸಿನೇಶನ್​ ಅಭಿಯಾನ ವೇಗವಾಗಿ ಮುಂದುವರಿಯುತ್ತಿದೆ. ನನ್ನ ಕಿರಿಯ ಸ್ನೇಹಿತರೇ, ಅದ್ಭುತವಾಗಿ ಸಾಥ್​ ಕೊಡುತ್ತಿದ್ದೀರಿ ಎಂದು ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲ, ಕೊವಿಡ್ 19 ಹೊಸ ಹಂತದ ಅಭಿಯಾನ ಶುರುವಾದ ವಾರದಲ್ಲಿ 2 ಕೋಟಿಗೂ ಅಧಿಕ ಮಕ್ಕಳು ಲಸಿಕೆ ಪಡೆದಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಕೊವಿನ್ ಆ್ಯಪ್​​ನಲ್ಲಿ ತೋರಿಸಲಾದ ಮಾಹಿತಿಯಂತೆ, ಜನವರಿ 1ರಿಂದ 7ರವರೆಗೆ, 15-17ವಯಸ್ಸಿನವರು ಒಟ್ಟು 20,226,790 ಮಂದಿ ಲಸಿಕೆ ಪಡೆದಿದ್ದಾರೆ. ದೇಶದಲ್ಲಿ ಶುಕ್ರವಾರ ಒಟ್ಟಾರೆ ಕೊರೊನಾ ಲಸಿಕೆ ಅಭಿಯಾನ 150 ಕೋಟಿ ಗಡಿದಾಟಿದೆ. ಅದನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಶ್ಲಾಘಿಸಿದ್ದರು. ನಿನ್ನೆ ಕೋಲ್ಕತ್ತದಲ್ಲಿ ಚಿತ್ತರಂಜನ್​ ರಾಷ್ಟ್ರೀಯ ಕ್ಯಾನ್ಸರ್​ ಇನ್​ಸ್ಟಿಟ್ಯೂಟ್ ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಇಂದು ದೇಶ ಕೊರೊನಾ ಲಸಿಕೆ ಅಭಿಯಾನದಲ್ಲಿ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿತು. ಈ ಹೊತ್ತಲ್ಲಿ ಕೊರೊನಾ ಲಸಿಕೆ ತಯಾರಕರು, ಕೇಂದ್ರ ಆರೋಗ್ಯ ಸಚಿವಾಲಯ, ವಿಜ್ಞಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದರು.

ಭಾರತದಲ್ಲಿ ಕೊವಿಡ್​ 19 ಲಸಿಕೆ ಅಭಿಯಾನ 2021ರ ಜನವರಿಯಿಂದ ಶುರುವಾಗಿದೆ. ಇನ್ನೂ ಒಂದು ವರ್ಷ ಪೂರ್ತಿಯಾಗುವುದರ ಒಳಗೇ ದೇಶದಲ್ಲಿ ಕೊರೊನಾ ಲಸಿಕೆ 150 ಕೋಟಿ ಡೋಸ್ ನೀಡಲಾಗಿದೆ. ಹಾಗೇ, ಡಿಸೆಂಬರ್​ 26ರಂದು ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಜನವರಿ ಮೂರರಿಂದ 15-18ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ ಮತ್ತು ಜನವರಿ 10ರಿಂದ ಕೊರೊನಾ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಗೆ ಮತ್ತು 60 ವರ್ಷ ಮೇಲ್ಪಟ್ಟು ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೊರೊನಾ ಲಸಿಕೆ ಬೂಸ್ಟರ್​ ಡೋಸ್ ನೀಡಲಾಗುವುದು ಎಂದು ಘೋಷಿಸಿದ್ದರು. ಅದರಂತೆ ಈಗ 15-18 ವರ್ಷದವರಿಗೆ ಕೊರೊನಾ ಲಸಿಕೆ ಅಭಿಯಾನ ಪ್ರಾರಂಭವಾಗಿದೆ.

ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್

Published On - 3:55 pm, Sat, 8 January 22

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ