AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ದಿನ ವರ್ಕ್ ಫ್ರಂ ಹೋಂ, ಆನ್​ಲೈನ್ ಮೀಟಿಂಗ್, ವಾಹನ ರಹಿತ ದಿನ; ದೆಹಲಿ ಸರ್ಕಾರ ಮಹತ್ವದ ನಿರ್ಧಾರ

ಇಂಧನ ಉಳಿಸಲು ಭಾರತೀಯ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ವಾಹನಗಳ ಬಳಕೆ ಕಡಿಮೆ ಮಾಡಲು, ಆನ್​ಲೈನ್ ಮೀಟಿಂಗ್​ ನಡೆಸಲು, ವರ್ಕ್ ಫ್ರಂ ಹೋಂ ಮಾಡಲು ಕರೆನೀಡಿದ್ದರು. ಈಗಾಗಲೇ ಪ್ರಧಾನಿ ಮೋದಿಯವರೂ ಸೇರಿದಂತೆ ಕೇಂದ್ರ ಸಚಿವರು ಇಂಧನ ಉಳಿಸಲು ತಮ್ಮ ಬೆಂಗಾವಲು ಪಡೆಯ ವಾಹನಗಳ ಪ್ರಮಾಣವನ್ನು ಕಡಿಮೆ ಮಾಡಿದ್ದಾರೆ. ಇದೀಗ ದೆಹಲಿ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಾರದಲ್ಲಿ 2 ದಿನಗಳ ಕಾಲ ಮನೆಯಿಂದ ಕೆಲಸ ಮಾಡಬೇಕು (ವರ್ಕ್ ಫ್ರಂ ಹೋಂ), ಆನ್‌ಲೈನ್ ಮೀಟಿಂಗ್ ನಡೆಸಬೇಕು ಮತ್ತು ವಾಹನ ರಹಿತ ದಿನದಂದು ವಾಹನಗಳನ್ನು ರಸ್ತೆಗೆ ತರುವಂತಿಲ್ಲ ಎಂದು ದೆಹಲಿ ಸರ್ಕಾರ ಘೋಷಿಸಿದೆ.

2 ದಿನ ವರ್ಕ್ ಫ್ರಂ ಹೋಂ, ಆನ್​ಲೈನ್ ಮೀಟಿಂಗ್, ವಾಹನ ರಹಿತ ದಿನ; ದೆಹಲಿ ಸರ್ಕಾರ ಮಹತ್ವದ ನಿರ್ಧಾರ
Cm Rekha GuptaImage Credit source: PTI
ಸುಷ್ಮಾ ಚಕ್ರೆ
|

Updated on: May 14, 2026 | 7:20 PM

Share

ನವದೆಹಲಿ, ಮೇ 14: ಮೇ 15ರಿಂದ ಪ್ರಾರಂಭವಾಗಲಿರುವ “ನನ್ನ ಭಾರತ, ನನ್ನ ಕೊಡುಗೆ” ಅಭಿಯಾನದಡಿಯಲ್ಲಿ ದೆಹಲಿ ಸರ್ಕಾರ ಇಂದು ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿದೆ. ಸರ್ಕಾರಿ ನೌಕರರು ಇನ್ನು ವಾರದಲ್ಲಿ ಎರಡು ದಿನ ಮನೆಯಿಂದಲೇ ಕೆಲಸ (Work from Home) ಮಾಡಬೇಕು. ಖಾಸಗಿ ಸಂಸ್ಥೆಗಳು ಸಹ ಇದೇ ರೀತಿ ಕೆಲಸ ಮಾಡಲು ಸೂಚಿಸಲಾಗಿದೆ. ಹಾಗೇ ಪ್ರತಿ ಸೋಮವಾರ ಖಾಸಗಿ ವಾಹನದ ಬದಲು ಮೆಟ್ರೋ ಬಳಸಲು ಕರೆನೀಡಲಾಗಿದೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸಂರಕ್ಷಿಸಲು ರಾಷ್ಟ್ರಕ್ಕೆ ಮನವಿ ಮಾಡಿದ್ದರು. ಈ ನಿಟ್ಟಿನಲ್ಲಿ, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ದೆಹಲಿ ಸರ್ಕಾರದ ಮೊದಲ ಮತ್ತು ಪ್ರಮುಖ ನಿರ್ಧಾರವೆಂದರೆ ಮನೆಯಿಂದ ಕೆಲಸ ಮಾಡುವ ಬಗ್ಗೆ. ಇನ್ನು ಸರ್ಕಾರಿ ನೌಕರರು ಕೂಡ ವಾರದಲ್ಲಿ ಎರಡು ದಿನ ಮನೆಯಿಂದಲೇ ಕೆಲಸ ಮಾಡುತ್ತಾರೆ. ಅಗತ್ಯ ಸೇವೆಗಳಲ್ಲಿ ತೊಡಗಿರುವ ಇಲಾಖೆಗಳಿಗೆ ಮನೆಯಿಂದಲೇ ಕೆಲಸ ಮಾಡುವುದರಿಂದ ವಿನಾಯಿತಿ ನೀಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಉಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಖಾಸಗಿ ಸಂಸ್ಥೆಗಳಿಗೆ ಕೂಡ 2 ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಸಲಹೆ ಬೆನ್ನಲ್ಲೇ ಬೆಂಗಳೂರಿನ ಕೆಲ ಕಂಪನಿಗಳಿಂದ ವರ್ಕ್ ಫ್ರಂ ಹೋಂ ನೀಡಲು ಪ್ಲ್ಯಾನ್!

ನಾವು ದೆಹಲಿಗಾಗಿ ಕೆಲವು ಯೋಜನೆಗಳನ್ನು ರೂಪಿಸಿದ್ದೇವೆ. ದೆಹಲಿ ಸರ್ಕಾರ “ಮೇರಾ ಭಾರತ್, ಮೇರಾ ಯುಗತ್” (ನನ್ನ ಭಾರತ, ನನ್ನ ಕೊಡುಗೆ) ಅಭಿಯಾನವನ್ನು ಜಾರಿಗೆ ತರಲಿದೆ ಎಂದು ದೆಹಲಿ ಸಿಎಂ ರೇಖಾ ಗುಪ್ತಾ ತಿಳಿಸಿದ್ದಾರೆ. ಮುಖ್ಯಮಂತ್ರಿ ರೇಖಾ ಗುಪ್ತಾ ಕೂಡ ಈ ನಿಟ್ಟಿನಲ್ಲಿ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಕೂಡ ಮನವಿ ಮಾಡಿದ್ದಾರೆ. ನ್ಯಾಯಾಲಯವು ಆನ್‌ಲೈನ್‌ನಲ್ಲಿ ವಿಚಾರಣೆಗಳನ್ನು ನಡೆಸುವಂತೆಯೂ ಕೋರಲಾಗಿದೆ. ಸಾರ್ವಜನಿಕರು ಒಂದು ವರ್ಷದವರೆಗೆ ವಿದೇಶ ಪ್ರವಾಸದಿಂದ ದೂರವಿರಲು ಮನವಿ ಮಾಡಲಾಗಿದೆ. ದೆಹಲಿ ಸರ್ಕಾರದ ಯಾವುದೇ ಸಚಿವರು ಅಥವಾ ಅಧಿಕಾರಿಗಳು ವಿದೇಶ ಪ್ರವಾಸ ಮಾಡುವಂತಿಲ್ಲ. ಅವರ ವಿದೇಶದ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಪ್ರಧಾನ ಮಂತ್ರಿಯವರ ಪ್ರವಾಸೋದ್ಯಮ ಮನವಿಗೆ ಸ್ಪಂದಿಸಿ, ದೆಹಲಿಯ ಮಾಲ್‌ಗಳಲ್ಲಿ ಈಗ ಭಾರತದಲ್ಲಿ ತಯಾರಿಸಿದ ಉತ್ಪನ್ನಗಳಿಗೆ ಒಂದು ಸ್ಥಳವನ್ನು ಮೀಸಲಿಡಲಾಗುವುದು ಎಂದು ರೇಖಾ ಗುಪ್ತಾ ಹೇಳಿದ್ದಾರೆ. ದೆಹಲಿ ಸರ್ಕಾರವು 100% ಭಾರತದಲ್ಲಿ ತಯಾರಿಸಿದ ಉತ್ಪನ್ನಗಳಿಗೆ ಆದ್ಯತೆ ನೀಡುತ್ತದೆ. ದೆಹಲಿ ಸರ್ಕಾರವು ಮುಂದಿನ 90 ದಿನಗಳವರೆಗೆ ಈ ಅಭಿಯಾನವನ್ನು ನಡೆಸಲಿದೆ.

ಇದನ್ನೂ ಓದಿ: ವರ್ಕ್ ಫ್ರಂ ಹೋಂ, ಆನ್​ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನದ ಮಿತ ಬಳಕೆ; ಮತ್ತೊಮ್ಮೆ ಪ್ರಧಾನಿ ಮೋದಿ ಮನವಿ

“ಎಲ್ಲಾ ವ್ಯಾಪಾರಿಗಳು ಸರಕು ಸಾಗಣೆಗೆ ಟ್ರಕ್‌ಗಳ ಬದಲಿಗೆ ರೈಲು ಬಳಸುವಂತೆ ಒತ್ತಾಯಿಸಲಾಗಿದೆ. 29 ವಸಾಹತುಗಳಲ್ಲಿ 58 ಫೀಡರ್ ಬಸ್‌ಗಳನ್ನು ಓಡಿಸಲಾಗುವುದು. ಇದರಿಂದಾಗಿ ಅವರು ಮೆಟ್ರೋ ಮೂಲಕ ಪ್ರಯಾಣಿಸಲು ಸಾಧ್ಯವಾಗುತ್ತದೆ. ದೆಹಲಿ ಸರ್ಕಾರಿ ಸಭೆಗಳಲ್ಲಿ 50% ಆನ್‌ಲೈನ್‌ನಲ್ಲಿ ನಡೆಯಲಿವೆ. ದೆಹಲಿ ಸರ್ಕಾರಿ ಕಚೇರಿಗಳು ಬೆಳಿಗ್ಗೆ 10.30ರಿಂದ ಸಂಜೆ 7ರವರೆಗೆ ಕಾರ್ಯನಿರ್ವಹಿಸುತ್ತವೆ. ದೆಹಲಿ ಮಹಾನಗರ ಪಾಲಿಕೆ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಕಾರ್ಯನಿರ್ವಹಿಸುತ್ತದೆ” ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!