AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Old Age Home: ದೆಹಲಿಯ ವೃದ್ಧಾಶ್ರಮವೊಂದರಲ್ಲಿ ಅಗ್ನಿ ಅವಘಡ: ಇಬ್ಬರು ಹಿರಿಯ ನಾಗರಿಕರ ಸಜೀವ ದಹನ

ದೆಹಲಿಯ ವೃದ್ಧಾಶ್ರಮವೊಂದರಲ್ಲಿ ಭಾನುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಹಿರಿಯನಾಗರಿಕರು ಸಜೀವ ದಹನವಾಗಿದ್ದಾರೆ.

Old Age Home: ದೆಹಲಿಯ ವೃದ್ಧಾಶ್ರಮವೊಂದರಲ್ಲಿ ಅಗ್ನಿ ಅವಘಡ:  ಇಬ್ಬರು ಹಿರಿಯ ನಾಗರಿಕರ ಸಜೀವ ದಹನ
Fire
TV9 Web
| Edited By: |

Updated on:Jan 01, 2023 | 10:58 AM

Share

ದೆಹಲಿಯ ವೃದ್ಧಾಶ್ರಮವೊಂದರಲ್ಲಿ ಭಾನುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಹಿರಿಯನಾಗರಿಕರು ಸಜೀವ ದಹನವಾಗಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ 2ನಲ್ಲಿರುವ ಆಸ್ಪತ್ರೆ ಮತ್ತು ವೃದ್ಧಾಶ್ರಮದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ನಂದಿಸಲು ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿತ್ತು.

ಒಬ್ಬ ಹಿರಿಯ ನಾಗರಿಕನನ್ನು ಮ್ಯಾಕ್ಸ್ ಆಸ್ಪತ್ರೆ ಸಾಕೇತ್‌ಗೆ ಮತ್ತು ಇತರ 12 ಜನರನ್ನು ಅಂಟಾರಾ ಕೇರ್‌ನ ಓಖ್ಲಾದಲ್ಲಿರುವ ಮತ್ತೊಂದು ಶಾಖೆಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದರು. ಈ ಬಗ್ಗೆ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

82 ಹಾಗೂ 92 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದು, 13 ಮಂದಿಯನ್ನು ರಕ್ಷಿಸಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಂದಿಸಲಾಯಿತು.

ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಿಸಲ್ಪಟ್ಟವರಲ್ಲಿ ಹಿರಿಯ ನಾಗರಿಕರು ಹಾಗೂ ಸಹಾಯಕರು ಇದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 am, Sun, 1 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ