ದೆಹಲಿಯ ವೃದ್ಧಾಶ್ರಮವೊಂದರಲ್ಲಿ ಭಾನುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಹಿರಿಯನಾಗರಿಕರು ಸಜೀವ ದಹನವಾಗಿದ್ದಾರೆ.
ಅಗ್ನಿಶಾಮಕ ದಳದ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ 2ನಲ್ಲಿರುವ ಆಸ್ಪತ್ರೆ ಮತ್ತು ವೃದ್ಧಾಶ್ರಮದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ನಂದಿಸಲು ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿತ್ತು.
ಒಬ್ಬ ಹಿರಿಯ ನಾಗರಿಕನನ್ನು ಮ್ಯಾಕ್ಸ್ ಆಸ್ಪತ್ರೆ ಸಾಕೇತ್‌ಗೆ ಮತ್ತು ಇತರ 12 ಜನರನ್ನು ಅಂಟಾರಾ ಕೇರ್‌ನ ಓಖ್ಲಾದಲ್ಲಿರುವ ಮತ್ತೊಂದು ಶಾಖೆಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದರು. ಈ ಬಗ್ಗೆ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
82 ಹಾಗೂ 92 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದು, 13 ಮಂದಿಯನ್ನು ರಕ್ಷಿಸಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಂದಿಸಲಾಯಿತು.
ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಿಸಲ್ಪಟ್ಟವರಲ್ಲಿ ಹಿರಿಯ ನಾಗರಿಕರು ಹಾಗೂ ಸಹಾಯಕರು ಇದ್ದಾರೆ.
ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:57 am, Sun, 1 January 23