Punjab: ಲುಧಿಯಾನಾ ಕೋರ್ಟ್​ ಎರಡನೇ ಮಹಡಿಯಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ

Blast in Ludhiana Court: ಎರಡನೇ ಮಹಡಿಯಲ್ಲಿರುವ ವಾಶ್​ ರೂಂನಲ್ಲಿ ಸ್ಫೋಟವುಂಟಾಗಿದ್ದು, ಸ್ಥಳಕ್ಕೆ ಪೊಲೀಸ್​ ಸಿಬ್ಬಂದಿ ತೆರಳಿದ್ದಾರೆ.

Punjab: ಲುಧಿಯಾನಾ ಕೋರ್ಟ್​ ಎರಡನೇ ಮಹಡಿಯಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ
ಲುಧಿಯಾನಾ ಕೋರ್ಟ್​ನಲ್ಲಿ ಸ್ಫೋಟ
Follow us
TV9 Web
| Updated By: Lakshmi Hegde

Updated on:Dec 23, 2021 | 1:14 PM

ಲುಧಿಯಾನಾ: ಪಂಜಾಬ್​ನ ಲುಧಿಯಾನಾ ನಗರ (Ludhiana Court)ದಲ್ಲಿರುವ ನ್ಯಾಯಾಲಯವೊಂದರ ಸಂಕೀರ್ಣದಲ್ಲಿ ಇಂದು ಸ್ಫೋಟ ಉಂಟಾಗಿದ್ದು, ಮಹಿಳೆ ಸೇರಿ, ಇಬ್ಬರು ಮೃತಪಟ್ಟಿದ್ದಾರೆ. ಹಾಗೇ, ಕೆಲವರು ಗಾಯಗೊಂಡಿದ್ದಾಗಿ ವರದಿಯಾಗಿದೆ.  ಕೋರ್ಟ್​ನ ಎರಡನೇ ಮಹಡಿಯಲ್ಲಿ ಸ್ಫೋಟವಾಗಿದೆ. ಹಾಗೇ, ಕೆಳಗೆ ವಾಹನ ನಿಲುಗಡೆ ಜಾಗವೂ ಧ್ವಂಸಗೊಂಡಿದೆ. ಅಲ್ಲಿ ಹಾಕಿದ್ದ ಇಟ್ಟಿಗೆ, ಕಬ್ಬಿಣದ ಕಂಬಗಳು ಬಿದ್ದಿವೆ ಎಂದು ವರದಿಯಾಗಿದೆ. ಅಂದಹಾಗೆ, ಇದು ಆರು ಮಹಡಿಗಳ ಕಟ್ಟಡವಾಗಿದ್ದು, ಎರಡನೇ ಮಹಡಿಯಲ್ಲಿರುವ ವಾಶ್​ ರೂಂನಲ್ಲಿ ಸ್ಫೋಟ (Blast in Ludhiana Court) ವುಂಟಾಗಿದ್ದು, ಸ್ಥಳಕ್ಕೆ ಪೊಲೀಸ್​ ಸಿಬ್ಬಂದಿ ತೆರಳಿದ್ದಾರೆ. ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು ಅಪಾರ ಜನರು ಸೇರಿದ್ದಾರೆ. ಕಟ್ಟಡದಿಂದ ಹೊಗೆ ಬರುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದೊಂದು ಪ್ರಬಲ ಸ್ಫೋಟವಾಗಿದ್ದು, ಸ್ಫೋಟದ ರಭಸಕ್ಕೆ ಇಡೀ ಕಟ್ಟಡ ನಲುಗಿದೆ ಎಂದು ಹೇಳಲಾಗಿದೆ.

ಕೆಲವು ದಿನಗಳ ಹಿಂದೆ, ಅಂದರೆ ಡಿಸೆಂಬರ್​ 9ರಂದು ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ಕೋರ್ಟ್​ನಲ್ಲಿ ಸಣ್ಣ ಸ್ಫೋಟ ಸಂಭವಿಸಿದೆ. ಆದರೆ, ಈ ಘಟನೆಯಲ್ಲಿ ಓರ್ವ ಸಿಬ್ಬಂದಿಗೆ ಗಾಯವಾಗಿದೆ. ಕೋರ್ಟ್​ ಆವರಣದಲ್ಲಿ ಉಂಟಾದ ಸ್ಫೋಟದಿಂದಾಗಿ ಅಲ್ಲಿದ್ದ ಜನರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಸದ್ಯ ಈ ಪ್ರಕರಣದ ಆರೋಪಿ  ಡಿಆರ್​ಡಿಒ ವಿಜ್ಞಾನಿಯಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ತಮ್ಮ ನೆರೆಮನೆಯ ವಕೀಲರೊಬ್ಬರ ಮೇಲಿನ ಸೇಡಿಗೆ, ಕೋರ್ಟ್ ಆವರಣದಲ್ಲಿ ಟಿಫಿನ್​ ಬಾಕ್ಸ್​ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದರು. ಸದ್ಯ ಅವರು ಜೈಲಿನಲ್ಲಿದ್ದಾರೆ. ಇತ್ತೀಚೆಗೆ ಜೈಲಿನಲ್ಲಿಯೇ ಹ್ಯಾಂಡ್ ವಾಶ್​ ದ್ರವ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಮಂದಿರ-ಮಸೀದಿ ವಿವಾದ ಬಗೆಹರಿಯುತ್ತಿದ್ದಂತೆ ಶುರುವಾಯ್ತು ಭೂಮಿ ಖರೀದಿ ಹಗರಣ, ತನಿಖೆಗೆ ಆದೇಶಿಸಿದ ಆದಿತ್ಯನಾಥ ಸರ್ಕಾರ

Published On - 1:02 pm, Thu, 23 December 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ