Indigo Flight: ಇಂಡಿಗೋ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ, ಇಬ್ಬರು ಪ್ರಯಾಣಿಕರ ಬಂಧನ

|

Updated on: Mar 23, 2023 | 10:08 AM

ಇಬ್ಬರು ಪ್ರಯಾಣಿಕರು ಕುಡಿದ ಮತ್ತಿನಲ್ಲಿ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆ ಇಂಡಿಗೋ ವಿಮಾನದಲ್ಲಿ ನಡೆದಿದೆ.

Indigo Flight: ಇಂಡಿಗೋ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ, ಇಬ್ಬರು ಪ್ರಯಾಣಿಕರ ಬಂಧನ
Indigo
Follow us on

ಇಬ್ಬರು ಪ್ರಯಾಣಿಕರು ಕುಡಿದ ಮತ್ತಿನಲ್ಲಿ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆ ಇಂಡಿಗೋ ವಿಮಾನದಲ್ಲಿ ನಡೆದಿದೆ. ದುಬೈನಿಂದ ಮುಂಬೈಗೆ ಬರುತ್ತಿದ್ದ ಇಂಡಿಗೋ ಏರ್​ಲೈನ್ಸ್ ವಿಮಾನದಲ್ಲಿ ಇಬ್ಬರು ಮಾನಮತ್ತ ಪ್ರಯಾಣಿಕರು ಗಲಾಟೆ ಮಾಡಿದ್ದಾರೆ. ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ.ಬಳಿಕ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬುಧವಾರ ಮುಂಬೈನಲ್ಲಿ ವಿಮಾನ ಇಳಿದ ನಂತರ ಅವರನ್ನು ಬಂಧಿಸಲಾಯಿತು ಮತ್ತು ನ್ಯಾಯಾಲಯದಿಂದ ಜಾಮೀನು ನೀಡಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇಬ್ಬರು ಆರೋಪಿಗಳು ಪಾಲ್ಘರ್ ಮತ್ತು ಕೊಲ್ಹಾಪುರದ ನಲಸೋಪಾರದವರು, ಅವರು ಗಲ್ಫ್‌ನಲ್ಲಿ ಒಂದು ವರ್ಷ ಕೆಲಸ ಮಾಡಿ ಹಿಂತಿರುಗುತ್ತಿದ್ದರು ಮತ್ತು ಸುಂಕ ರಹಿತ ಅಂಗಡಿಯಿಂದ ತಂದ ಮದ್ಯವನ್ನು ಸೇವಿಸಿ ಜೋರಾಗಿ ಮಾತನಾಡಲು ಆರಂಭಿಸಿದ್ದರು.

ಮತ್ತಷ್ಟು ಓದಿ:Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ಆಗ ಸಹ ಪ್ರಯಾಣಿಕರು ಅವರ ವಿರುದ್ಧ ಧ್ವನಿ ಎತ್ತಿದಾಗ ವಿಮಾನ ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರ ಜತೆ ಅಸಭ್ಯವಾಗಿ ನಡೆದುಕೊಂಡಿದ್ದರು.

ಅಧಿಕಾರಿಗಳ ಪ್ರಕಾರ, ಈ ವರ್ಷದಲ್ಲಿ ಇದು ಏಳನೇ ಘಟನೆಯಾಗಿದ್ದು, ವಿಮಾನ ಪ್ರಯಾಣಿಕರ ಅಶಿಸ್ತಿನ ವರ್ತನೆಗಾಗಿ ಪ್ರಕರಣ ದಾಖಲಿಸಲಾಗಿದೆ.

ಮಾರ್ಚ್ 11 ರಂದು, ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಮತ್ತು ಲಂಡನ್-ಮುಂಬೈ ವಿಮಾನದ ತುರ್ತು ನಿರ್ಗಮನವನ್ನು ತೆರೆಯಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಯಿತು.

ಏರ್​ಲೈನ್ಸ್​ ಸಿಬ್ಬಂದಿ ನೀಡಿರುವ ದೂರಿನ ಮೇರೆಗೆ ಎಫ್​ಐಆರ್​ ದಾಖಲಿಸಲಾಗಿದೆ, ನಲಸೋಪರದ ಜಾನ್ ಜಿ ಡಿಸೋಜಾ ಮತ್ತು ಕೊಲ್ಲಾಪುರದ ದತ್ತಾತ್ರೇಯ ಬಾಪರ್ಡೇಕರ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಹ ಪ್ರಯಾಣಿಕರು ಅವರ ಗದ್ದಲವನ್ನು ತಾಳಲಾರದೆ ಸುಮ್ಮನಿರುವಂತೆ ಸೂಚಿಸಿದ್ದರು, ಅದನ್ನು ಕಿವಿಗೆ ಹಾಕಿಕೊಳ್ಳದೆ ಕುಡಿಯುವುದನ್ನು ಮುಂದುವರೆಸಿದ್ದರು. ಬಳಿಕ ವಿಮಾನ ಸಿಬ್ಬಂದಿ ಅವರ ಬ್ಯಾಗ್​ನಲ್ಲಿರುವ ಮದ್ಯವನ್ನು ತೆಗೆದುಕೊಂಡು ಹೋದರು, ಆಗ ಕೋಪ ಮತ್ತಷ್ಟು ಹೆಚ್ಚಾಗಿ ಸಿಬ್ಬಂದಿ ಜತೆಗೂ ಕೆಟ್ಟದಾಗಿ ವರ್ತಿಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ