2 ಸಿಂಹಗಳಿಗೆ ಕೊರೊನಾ ಸೋಂಕು ಧೃಡ; ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿ ಆತಂಕ

ಉತ್ತರ ಪ್ರದೇಶದ‌ ಎತವಾದ ಬೈಪಾಸ್ ರಸ್ತೆಯಲ್ಲಿ‌‌ನ ಸಫಾರಿ ಪಾರ್ಕ್​ನಲ್ಲಿನ ಸೋಂಕಿತ ಎರಡು ಸಿಂಹಗಳನ್ನು ಸದ್ಯ ಐಸೋಲೇಷನ್​ನಲ್ಲಿ ಇಡಲಾಗಿದೆ ಎಂದು ಇಟಾವಾ ಸಫಾರಿ ಪಾರ್ಕ್‌ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

2 ಸಿಂಹಗಳಿಗೆ ಕೊರೊನಾ ಸೋಂಕು ಧೃಡ; ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿ ಆತಂಕ
ಪ್ರಾತಿನಿಧಿಕ ಚಿತ್ರ
Follow us
preethi shettigar
|

Updated on: May 08, 2021 | 11:51 AM

ಲಖ್ನೋ​: ಕೊರೊನಾ ಎರಡನೇ ಅಲೆಗೆ ಇಡೀ ದೇಶವೇ ನಲುಗಿ ಹೋಗಿದೆ. ಸೋಂಕಿತರ ಸಂಖ್ಯೆ ಕೂಡ ಅತ್ಯಂತ ವೇಗ ಗತಿಯಲ್ಲಿ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡುಬಂದಿದೆ. ಕೊರೊನಾದ ತೀವ್ರತೆಯಿಂದ ಸದ್ಯ ಜನ ಜೀವನ ಅಸ್ತವ್ಯಸ್ತವಾಗಿದೆ. ಹೀಗಿರುವಾಗಲೇ ಕೊರೊನಾದ ಆತಂಕ ಸದ್ಯ ಪ್ರಾಣಿಗಳಿಗೂ ಕೂಡ ಸಂಕಷ್ಟ ತಂದೊಡ್ಡಿದೆ. ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿನ 2 ಸಿಂಹಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಉತ್ತರ ಪ್ರದೇಶದ‌ ಎತವಾದ ಬೈಪಾಸ್ ರಸ್ತೆಯಲ್ಲಿ‌‌ನ ಸಫಾರಿ ಪಾರ್ಕ್​ನಲ್ಲಿನ ಸೋಂಕಿತ ಎರಡು ಸಿಂಹಗಳನ್ನು ಸದ್ಯ ಐಸೋಲೇಷನ್​ನಲ್ಲಿ ಇಡಲಾಗಿದೆ ಎಂದು ಇಟಾವಾ ಸಫಾರಿ ಪಾರ್ಕ್‌ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಹೈದರಾಬಾದ್​ನ ಜೂಲಾಜಿಕಲ್ ಪಾರ್ಕ್​ನಲ್ಲಿರುವ ಎಂಟು ಸಿಂಹಗಳಲ್ಲಿ ಕೊರೊನಾ ಸೋಂಕು ಇಷ್ಟು ದಿನ ಬೇರೆ ದೇಶಗಳಲ್ಲಿ ಪ್ರಾಣಿಗಳಿಗೂ ಕೊರೊನಾ ಸೋಂಕು ತಗುಲಿದ್ದ ಬಗ್ಗೆ ವರದಿಗಳನ್ನು ಓದಿದ್ದರೂ ನಮ್ಮ ದೇಶದಲ್ಲಿ ಇಂಥ ಪ್ರಕರಣಗಳು ಕಂಡುಬಂದಿರಲಿಲ್ಲ. ಆದರೆ ಇದೇ ಮೊದಲಬಾರಿಗೆ ಹೈದರಾಬಾದ್​ನಲ್ಲಿ ಎಂಟು ಸಿಂಹಗಳಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡಿದೆ. ಎಂಟು ಸಿಂಹಗಳಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಏಪ್ರಿಲ್​ 29ರಂದು ಅವುಗಳ ಗಂಟಲುದ್ರವದ ಮಾದರಿ ಸಂಗ್ರಹಿಸಿ, ಆರ್​ಟಿ-ಪಿಸಿಆರ್​​ ಟೆಸ್ಟ್​ ಮಾಡಿಸಲಾಗಿತ್ತು. ಅದರ ವರದಿ ಈಗ ಬಂದಿದ್ದು ಎಲ್ಲ ಪ್ರಾಣಿಗಳಲ್ಲೂ ಸೋಂಕು ದೃಢಪಟ್ಟಿದೆ.

ಸದ್ಯ ಎಲ್ಲ ಸಿಂಹಗಳನ್ನೂ ಸಂಪೂರ್ಣವಾಗಿ ಐಸೋಲೇಟ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಿಂಹಗಳೂ ಸಹ ಚಿಕಿತ್ಸೆಗೆ ಸ್ಪಂದಿಸುತ್ತಿವೆ. ಈ ನೆಹರೂ ಜೂಲಾಜಿಕಲ್​ ಪಾರ್ಕ್​ನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಸಾರ್ವಜನಿಕರ ವೀಕ್ಷಣೆಗೂ ನಿರ್ಬಂಧ ಹೇರಲಾಗಿದೆ. ಮೃಗಾಲಯದ ಸಿಬ್ಬಂದಿ ಸಿಂಹಗಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದಾರೆ. ಆಹಾರವನ್ನೂ ಸಹ ಸೋಂಕು ರಹಿತಗೊಳಿಸಿ, ಪರೀಕ್ಷಿಸಿ ನೀಡಲಾಗುತ್ತಿದೆ.

ಇದನ್ನೂ ಓದಿ:

ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು

WHO-China joint study: ಕೊರೊನಾ ಹುಟ್ಟಿದ್ದು ಲ್ಯಾಬ್​ನಲ್ಲಿ ಅಲ್ಲ, ಪ್ರಾಣಿಯಿಂದ ಬಂದಿದ್ದು!

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್