ವೈದ್ಯಕೀಯ ಆಕ್ಸಿಜನ್ ಅಭಾವ; ಆಮ್ಲಜನಕವಿಲ್ಲದೆ ಜೀವ ಬಿಟ್ಟ ನವಜಾತ ಅವಳಿ ಶಿಶುಗಳು

ನಮ್ಮಲ್ಲಿ ಆಮ್ಲಜನಕದ ಕೊರತೆಯಿಲ್ಲ ಎಂದು ಇತ್ತೀಚೆಗಷ್ಟೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇತ್ತೀಚೆಗಷ್ಟೇ ಹೇಳಿದ್ದರು. ಹಾಗೇ, ಕಾಳಸಂತೆಯಲ್ಲಿ ಆಕ್ಸಿಜನ್ ಮಾರುತ್ತಿರುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದರು.

ವೈದ್ಯಕೀಯ ಆಕ್ಸಿಜನ್ ಅಭಾವ; ಆಮ್ಲಜನಕವಿಲ್ಲದೆ ಜೀವ ಬಿಟ್ಟ ನವಜಾತ ಅವಳಿ ಶಿಶುಗಳು
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Apr 25, 2021 | 9:06 AM

ಲಖನೌ: ಉತ್ತರಪ್ರದೇಶದ ಬಾರ್ಬಂಕಿಯಲ್ಲಿರುವ ಮಕ್ಕಳ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ಆಕ್ಸಿಜನ್​ ಇಲ್ಲದೆ ಇಬ್ಬರು ನವಜಾತ ಶಿಶುಗಳು ಮೃತಪಟ್ಟ ಹೃದಯವಿದ್ರಾವಕ ಘಟನೆ ಶನಿವಾರ ರಾತ್ರಿ ನಡೆದಿದೆ. ಬಾರ್ಬಂಕಿಯಲ್ಲಿರುವ ಎರಡು ಆಸ್ಪತ್ರೆಗಳು ತಮ್ಮಲ್ಲಿ ಆಮ್ಲಜನಕ ಖಾಲಿ ಆಗಿರುವ ಬಗ್ಗೆ ಸರ್ಕಾರಕ್ಕೆ ತಿಳಿಸಿದ್ದರು. ಆದರೆ ಅಲ್ಲಿಗೆ ಪೂರೈಕೆ ಆಗಿರಲಿಲ್ಲ.

ಈ ಎರಡರಲ್ಲಿ ಒಂದು ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಅವಳಿ ಮಕ್ಕಳು ಜನಿಸಿದ್ದವು. ಅವಕ್ಕಿಬ್ಬರಿಗೂ ಆಮ್ಲಜನಕದ ಅಗತ್ಯವಿತ್ತು. ಆದರೆ ಆಮ್ಲಜನಕ ಪೂರೈಕೆ ಆಗದ ಕಾರಣ ಮಕ್ಕಳಿಗೆ ಕೊಡಲು ಸಾಧ್ಯವಾಗದೆ, ಇಬ್ಬರ ಜೀವವೂ ಹೋಗಿದೆ.

ವೈದ್ಯಕೀಯ ಆಮ್ಲಜನಕ ಪೂರೈಕೆ ವಿಚಾರದಲ್ಲಿ ಸರ್ಕಾರ, ಇಲಾಖೆಗಳು ಒತ್ತಡದಲ್ಲಿವೆ. ನಮ್ಮ ಕೈಲಾದಷ್ಟು ಮಟ್ಟಿಗೆ ಆಕ್ಸಿಜನ್ ಒದಗಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಉತ್ತರ ಪ್ರದೇಶದ ಆರೋಗ್ಯ ಇಲಾಖೆ ತಿಳಿಸಿದೆ. ಇನ್ನು, ನಮ್ಮಲ್ಲಿ ಆಮ್ಲಜನಕದ ಕೊರತೆಯಿಲ್ಲ ಎಂದು ಇತ್ತೀಚೆಗಷ್ಟೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇತ್ತೀಚೆಗಷ್ಟೇ ಹೇಳಿದ್ದರು. ಹಾಗೇ, ಕಾಳಸಂತೆಯಲ್ಲಿ ಆಕ್ಸಿಜನ್ ಮಾರುತ್ತಿರುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದರು. ಈ ಆಕ್ಸಿಜನ್​ ಅಭಾವ ಆಗುತ್ತಿರುವುದು ಕೇವಲ ಉತ್ತರಪ್ರದೇಶದಲ್ಲಿ ಅಷ್ಟೇ ಅಲ್ಲ. ದೆಹಲಿಯಲ್ಲೂ ತೀವ್ರವಾಗಿ ಕಾಡುತ್ತಿದೆ. ಎರಡು ಆಸ್ಪತ್ರೆಗಳಲ್ಲಿ 20ಕ್ಕೂ ಹೆಚ್ಚು ರೋಗಿಗಳು ಆಕ್ಸಿಜನ್ ಇಲ್ಲದೆ ಮೃತಪಟ್ಟಿದ್ದಾರೆ. ಕೆಲವು ಆಸ್ಪತ್ರೆಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯ ಕೂಡ ಖಡಕ್​ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ಕೊಡಗು ಜನರ ಕನಸು ಕೊನೆಗೂ ನನಸು

Gold Rate Today: ಏಪ್ರಿಲ್ 25ರಂದು ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನ,ಬೆಳ್ಳಿ ದರ ಹೀಗಿದೆ!

2 newborns die at hospital in Uttar Pradesh due to lack of oxygen

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್