AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಮ್ಲಾದ ದೇವಸ್ಥಾನದಲ್ಲಿ ಮಹಿಳೆಗೆ ಗುಂಡು ಹಾರಿಸಿ ಕೊಲೆ; ಇಬ್ಬರ ಬಂಧನ

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ದೇವಸ್ಥಾನದ ಸಮಾರಂಭದಲ್ಲಿ ಮಹಿಳೆಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಭಾನುವಾರ ಸಂಜೆ ಶಿಮ್ಲಾ ಜಿಲ್ಲೆಯ ರೋಹ್ರು ಉಪವಿಭಾಗದಲ್ಲಿ ದೇವಾಲಯದ ಸಮಾರಂಭದಲ್ಲಿ 26 ವರ್ಷದ ಮಹಿಳೆಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 'ಭಾಯಿ-ಭಾಯಿ ಮಿಲನ್' ಆಚರಣೆಯ ಸಮಯದಲ್ಲಿ ಈ ದುರಂತ ಸಂಭವಿಸಿದೆ.

ಶಿಮ್ಲಾದ ದೇವಸ್ಥಾನದಲ್ಲಿ ಮಹಿಳೆಗೆ ಗುಂಡು ಹಾರಿಸಿ ಕೊಲೆ; ಇಬ್ಬರ ಬಂಧನ
RitikaImage Credit source: Hindustan Times
ಸುಷ್ಮಾ ಚಕ್ರೆ
|

Updated on:Apr 27, 2026 | 5:23 PM

Share

ಶಿಮ್ಲಾ, ಏಪ್ರಿಲ್ 27: ಹಿಮಾಚಲ ಪ್ರದೇಶದ ಶಿಮ್ಲಾ (Shimla) ಜಿಲ್ಲೆಯ ಹಳ್ಳಿಯೊಂದರಲ್ಲಿ ಧಾರ್ಮಿಕ ಸಮಾರಂಭದಲ್ಲಿ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಶಿಮ್ಲಾದ ರೋಹ್ರುವಿನ ಆಂಧ್ರ ಗ್ರಾಮದ ನಿವಾಸಿ 26 ವರ್ಷ ರಿತಿಕಾ ಎಂದು ಗುರುತಿಸಲಾಗಿದೆ. ಕುಲ್ಗಾಂವ್ ಗ್ರಾಮದಲ್ಲಿ ಸ್ಥಳೀಯ ದೇವತೆಯ ಹೊಸದಾಗಿ ನಿರ್ಮಿಸಲಾದ ದೇವಾಲಯದ ಪ್ರತಿಷ್ಠಾಪನಾ ಸಮಾರಂಭದ ಸಂದರ್ಭದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ.

ದೇವಸ್ಥಾನದಲ್ಲಿ ಎಲ್ಲರೂ ನೃತ್ಯ ಮಾಡುತ್ತಿದ್ದಾಗ, ಆರೋಪಿ ಗುಂಡು ಹಾರಿಸಿದ್ದಾನೆ. ಆ ಗುಂಡು ರಿತಿಕಾಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಾದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸರು ಆ ಸ್ಥಳಕ್ಕೆ ತೆರಳಿ ಮೃತದೇಹವನ್ನು ವಶಪಡಿಸಿಕೊಂಡರು.

ಇದನ್ನೂ ಓದಿ: ಸೆಖೆ ತಡೆಯಲಾಗದೆ ಎಸಿ ಕೊಡಿಸಿ ಎಂದ ಪತ್ನಿಗೆ ನೋ ಎಂದ ಗಂಡ; ಆಮೇಲಾಗಿದ್ದು ದುರಂತ!

ಆ ಸ್ಥಳದಿಂದ ಸಾಕ್ಷಿಗಳನ್ನು ಸಂಗ್ರಹಿಸಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ತೀವ್ರ ಹುಡುಕಾಟದ ನಂತರ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಜತ್ ಸೋಹ್ತಾ (28) ಮತ್ತು ಅಮಿತ್ ಅಲಿಯಾಸ್ ರೋಹಿತ್ ಭಾಪ್ತಾ (32) ಎಂಬ ಇಬ್ಬರು ವ್ಯಕ್ತಿಗಳನ್ನು ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 103 (1) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Mon, 27 April 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!
ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!