ಪಕ್ಕದ ಮನೆಯ ಟೆರೇಸ್​ ಮೇಲೆ ಆಟವಾಡಲು ಹೋಗಿದ್ದ ಇಬ್ಬರು ಬಾಲಕಿಯರ ನಿಗೂಢ ಸಾವು

ಪಕ್ಕದ ಮನೆಯ ಟೆರೇಸ್​ನಲ್ಲಿ ಆಡವಾಡಲು ಹೋಗಿದ್ದ ಇಬ್ಬರು ಬಾಲಕಿಯರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.  ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ,  ಟೆರೇಸ್​ ಮೇಲೆ ಬಿದ್ದಿದ್ದ ಚಾಕೊಲೇಟ್ ತಿಂದು ಇಬ್ಬರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಕಡಧಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಕ್ಕದ ಮನೆಯ ಟೆರೇಸ್​ ಮೇಲೆ ಆಟವಾಡಲು ಹೋಗಿದ್ದ ಇಬ್ಬರು ಬಾಲಕಿಯರ ನಿಗೂಢ ಸಾವು
ಪ್ರಾತಿನಿಧಿಕ ಚಿತ್ರ

Updated on: Aug 18, 2023 | 8:30 AM

ಪಕ್ಕದ ಮನೆಯ ಟೆರೇಸ್​ನಲ್ಲಿ ಆಡವಾಡಲು ಹೋಗಿದ್ದ ಇಬ್ಬರು ಬಾಲಕಿಯರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.  ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ,  ಟೆರೇಸ್​ ಮೇಲೆ ಬಿದ್ದಿದ್ದ ಚಾಕೊಲೇಟ್ ತಿಂದು ಇಬ್ಬರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಕಡಧಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಧನಾ (7) ಮತ್ತು ಅವರ ಸಹೋದರಿ ಶಾಲಿನಿ (4) ಅವರು ಬೆಳಗ್ಗೆ ಚಾಕೊಲೇಟ್​ನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದರು. ಪೋಷಕರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪಕ್ಕದ ಮನೆಯ ಇನ್ನೂ ಇಬ್ಬರು ಬಾಲಕಿಯರು ಕೂಡ ಚಾಕೊಲೇಟ್​ ಅನ್ನು ಸೇವಿಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆ 6 ಗಂಟೆ ವೇಳೆಗೆ ಘಟನೆ ನಡೆದಿದೆ, ಟೆರೇಸ್​ ಮೇಲೆ ಬಿದ್ದಿದ್ದ ಚಾಕೊಲೇಟ್​ ಅನ್ನು ನಾಲ್ವರು ತಿಂದಿದ್ದರು, ತಕ್ಷಣವೇ ಹೊಟ್ಟೆ ನೋಡು ಶುರುವಾಗಿತ್ತು. ಎದೆ ಉರಿಯೂ ಇತ್ತು. ಬಾಲಕಿಯರ ಸ್ಥಿತಿ ಕಂಡು ಪೋಷಕರು ಕಂಗಾಲಾಗಿದ್ದರು.

ಮತ್ತಷ್ಟು ಓದಿ: ಮುಂಬೈ ರೈಲು ನಿಲ್ದಾಣದಲ್ಲಿ ವ್ಯಕ್ತಿಯನ್ನು ಥಳಿಸಿ, ಎದುರಿನಿಂದ ಬರುತ್ತಿದ್ದ ರೈಲಿನ ಕೆಳಗೆ ತಳ್ಳಿದ್ರು

ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಕ್ಕ ಪಕ್ಕದ ಮನೆಯವರು ವಿಷಪೂರಿತ ಮಿಠಾಯಿಯನ್ನು ಎಸೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ಬಳಿಕವೇ ನಿಜವಾದ ಕಾರಣ ತಿಳಿದುಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us