ಜಮ್ಮು ಕಾಶ್ಮೀರದ ಅಖ್ನೂರ್‌ನಲ್ಲಿ ಐಇಡಿ ಸ್ಫೋಟ; ಇಬ್ಬರು ಸೈನಿಕರು ಸಾವು
ಜಮ್ಮು ಸೆಕ್ಟರ್‌ನ ಎಲ್‌ಒಸಿ ಬಳಿ ಐಇಡಿ ಸ್ಫೋಟದಲ್ಲಿ ಅಧಿಕಾರಿ ಸೇರಿದಂತೆ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ, ಮತ್ತೊಬ್ಬರು ಗಾಯಗೊಂಡಿದ್ದಾರೆ. ಭಟ್ಟಲ್ ಪ್ರದೇಶದ ಫಾರ್ವರ್ಡ್ ಪೋಸ್ಟ್ ಬಳಿ ಇಂದು ಸಂಜೆ 3.50ರ ಸುಮಾರಿಗೆ ಪ್ರಬಲ ಸ್ಫೋಟ ಸಂಭವಿಸಿದೆ. ಸೈನಿಕರು ಗಸ್ತು ತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನ ಲಲೇಲಿಯಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಇಬ್ಬರು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಅಖ್ನೂರ್ ಸೆಕ್ಟರ್‌ನ ಲಲೇಲಿಯಲ್ಲಿ ಬೇಲಿ ಗಸ್ತು ತಿರುಗುತ್ತಿದ್ದಾಗ ಐಇಡಿ ಸಾಧನ ಸ್ಫೋಟ ವರದಿಯಾಗಿದ್ದು, ಇದರ ಪರಿಣಾಮವಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದ ಭಟ್ಟಲ್ ಪ್ರದೇಶದ ಫಾರ್ವರ್ಡ್ ಪೋಸ್ಟ್ ಬಳಿ 3.50ರ ಸುಮಾರಿಗೆ ಪ್ರಬಲ ಸ್ಫೋಟ ಸಂಭವಿಸಿದಾಗ ಸೈನಿಕರು ಗಸ್ತು ತಿರುಗುತ್ತಿದ್ದ ಸೈನಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಕದನ ವಿರಾಮ; ಹಮಾಸ್ನಿಂದ ಗಾಜಾದಲ್ಲಿ ಬಂಧಿತರಾಗಿದ್ದ ನಾಲ್ವರು ಇಸ್ರೇಲಿ ಮಹಿಳಾ ಸೈನಿಕರ ಬಿಡುಗಡೆ
ಇಂದು ಮುಂಜಾನೆ ಅಖ್ನೂರ್ ಸೆಕ್ಟರ್‌ನಲ್ಲಿ ಬಾಂಬ್ ನಿಷ್ಕ್ರಿಯ ದಳವು ಒಂದು ಮಾರ್ಟರ್ ಶೆಲ್ ಅನ್ನು ಕಂಡುಹಿಡಿದು ನಂತರ ಅದನ್ನು ನಿಷ್ಕ್ರಿಯಗೊಳಿಸಿತ್ತು ಎಂದು ಪೊಲೀಸ್ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ನಮಂದರ್ ಗ್ರಾಮದ ಬಳಿಯ ಪಾರ್ಟಪ್ ಕಾಲುವೆಯಲ್ಲಿ ಕೆಲವು ಸ್ಥಳೀಯರು ಮಾರ್ಟರ್ ಶೆಲ್ ಅನ್ನು ಗಮನಿಸಿದ್ದರು. ಮಾಹಿತಿ ಪಡೆದ ನಂತರ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ನಂತರ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿ ಸ್ಫೋಟಕ ವಸ್ತುವನ್ನು ಸುರಕ್ಷಿತವಾಗಿ ನಿಷ್ಕ್ರಿಯಗೊಳಿಸಿತು ಎಂದು ಅವರು ಹೇಳಿದ್ದಾರೆ.
White Knight Corps of Indian Army tweets, “Suspected Improvised Explosive Device blast reported in Laleali in Akhnoor Sector, J&K during a fence patrol resulting in two fatalities. Own troops are dominating the area and search operations are underway. White Knight Corps salutes… pic.twitter.com/b8QlHFA5rv
— ANI (@ANI) February 11, 2025
ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ