AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲಗಾಂವ್​​ನಲ್ಲಿ ಮುಂದುವರಿದ ಎನ್​ಕೌಂಟರ್​​; ಇಂದು ಇಬ್ಬರು ಭಯೋತ್ಪಾದಕರ ಹತ್ಯೆ

ಮೊನ್ನೆ ಪುಲ್ವಾಮಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭದ್ರತಾ ಸಿಬ್ಬಂದಿ ದಾಳಿಗೆ ಹಿಜ್ಬುಲ್ ಮುಜಾಹಿದ್ದೀನ್​ ಸಂಘಟನೆಯ ಉಗ್ರ ಫೆರೋಜ್ ಅಹ್ಮದ್ ದಾರ್​ ಎಂಬಾತ ಬಲಿಯಾಗಿದ್ದ. ಇವನು ಅನೇಕ ಉಗ್ರಕೃತ್ಯಗಳಲ್ಲಿ ಭಾಗಿಯಾಗಿದ್ದ.

ಕುಲಗಾಂವ್​​ನಲ್ಲಿ ಮುಂದುವರಿದ ಎನ್​ಕೌಂಟರ್​​; ಇಂದು ಇಬ್ಬರು ಭಯೋತ್ಪಾದಕರ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 16, 2021 | 11:35 AM

Share

ಜಮ್ಮು-ಕಾಶ್ಮೀರದ ಕುಲಗಾಂವ್​​ನಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಇಬ್ಬರು ಉಗ್ರರು (Terrorists) ಬಲಿಯಾಗಿದ್ದಾರೆ. ಕುಲಗಾಂವ್​​ನ ರೆಡ್​ವಾನಿ ಪ್ರದೇಶದಲ್ಲಿ ನಿನ್ನೆ ರಾತ್ರಿಯಿಂದ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನಚಕಮಕಿ ಶುರುವಾಗಿತ್ತು.  ಈಗಲೂ ಕೂಡ ಅಲ್ಲಿ ಎನ್​ಕೌಂಟರ್​ ಮುಂದುವರಿಯುತ್ತಿದೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಾಶ್ಮೀರ ವಲಯದ ಪೊಲೀಸರು, ಇಬ್ಬರು ಅಪರಿಚಿತ ಉಗ್ರರು ಹತ್ಯೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನೂ ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಹಾಗೇ, ಈ ಉಗ್ರರ ಹೆಸರು, ಯಾವ ಸಂಘಟನೆಗೆ ಸೇರಿದವರು ಎಂಬುದನ್ನು ಪತ್ತೆ ಹಚ್ಚುವ ಕಾರ್ಯವೂ ಶುರುವಾಗಿದೆ.

ಮೊನ್ನೆ ಪುಲ್ವಾಮಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭದ್ರತಾ ಸಿಬ್ಬಂದಿ ದಾಳಿಗೆ ಹಿಜ್ಬುಲ್ ಮುಜಾಹಿದ್ದೀನ್​ ಸಂಘಟನೆಯ ಉಗ್ರ ಫೆರೋಜ್ ಅಹ್ಮದ್ ದಾರ್​ ಎಂಬಾತ ಬಲಿಯಾಗಿದ್ದ. ಇವನು ಅನೇಕ ಉಗ್ರಕೃತ್ಯಗಳಲ್ಲಿ ಭಾಗಿಯಾಗಿದ್ದ. ಅದರಲ್ಲೂ ಮುಖ್ಯವಾಗಿ 2018ರಲ್ಲಿ ಶೋಪಿಯಾನಾದ ಜೈನಾಪೋರಾದಲ್ಲಿ ನಡೆದ ಉಗ್ರರ ದಾಳಿಯಲ್ಲೂ ಈತ ಪಾಲ್ಗೊಂಡಿದ್ದ. ಅಂದಿನ ದಾಳಿಯಲ್ಲಿ ನಾಲ್ವರು ಪೊಲೀಸ್​ ಸಿಬ್ಬಂದಿ ಹುತಾತ್ಮರಾಗಿದ್ದರು.  ಅಷ್ಟೇ ಅಲ್ಲ, 2019ರ ಫೆಬ್ರವರಿಯಲ್ಲಿ ಇಶ್ರಾತ್​ ಮುನೀರ್​ ಎಂಬ ಹುಡುಗಿಯ ಹತ್ಯೆಯಲ್ಲೂ ಈತನ ಕೈವಾಡ ಇತ್ತು. ಅದೇ ವರ್ಷ ಅಕ್ಟೋಬರ್​​ನಲ್ಲಿ ಸ್ಥಳೀಯನಲ್ಲದ ಕಾರ್ಮಿಕ ಚರಣಜೀತ್​ ಎಂಬಾತನನ್ನು ಉಗ್ರರು ಕೊಂದು ಹಾಕಿದ್ದರು. ಅದರಲ್ಲೂ ಸಹ ದಾರ್ ಭಾಗಿಯಾಗಿದ್ದ. ಸದ್ಯ ಜಮ್ಮು-ಕಾಶ್ಮೀರದ ಸುತ್ತಲೂ ಉಗ್ರರ ವಿರುದ್ಧ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ. ರಕ್ಷಣಾ ಪಡೆ ಸಿಬ್ಬಂದಿ ಜೀವವೂ ಹೋಗುತ್ತಿದ್ದು, ಇನ್ನೊಂದೆಡೆ ಭಯೋತ್ಪಾದಕರನ್ನು ಹೆಡೆಮುರಿಕಟ್ಟಲಾಗುತ್ತಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಸುದ್ದಿಗೋಷ್ಠಿ ಬಳಿಕ ರವೀಂದ್ರ ಜಡೇಜಾ ಮಾಡಿದ ಟ್ವೀಟ್ ಫುಲ್ ವೈರಲ್: ಏನು ಗೊತ್ತೇ?

Published On - 11:26 am, Thu, 16 December 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್