ಇಂದು ಶ್ರೀನಗರದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ; ಮುಂದುವರಿದ ಕಾರ್ಯಾಚರಣೆ
ನಿನ್ನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜೈಷ್ ಇ ಮೊಹಮ್ಮದ್ ಸಂಘಟನೆಯ ಸ್ಥಳೀಯ ಉಗ್ರನೊಬ್ಬನನ್ನು ಕೊಂದಿದ್ದರು. ಭಾರತೀಯ ಸೇನೆಯ 42ನೇ ರಾಷ್ಟ್ರೀಯ ರೈಫಲ್ ಮತ್ತು ಕೇಂದ್ರೀಯ ಮೀಸಲು ಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು.
ಶ್ರೀನಗರದ ರಾಂಗ್ರೆಥ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು (Terrorists) ಭದ್ರತಾ ಪಡೆ ಸಿಬ್ಬಂದಿ ಹತ್ಯೆ ಮಾಡಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಇಂದು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಆದರೆ ಅವರು ಯಾರೆಂಬುದು ಇನ್ನೂ ಗುರುತು ಪತ್ತೆಯಾಗಿಲ್ಲ ಎಂದು ಕಾಶ್ಮೀರಿ ಪೊಲೀಸರು ಟ್ವೀಟ್ ಮಾಡಿದ್ದಾರೆ.
ನಿನ್ನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜೈಷ್ ಇ ಮೊಹಮ್ಮದ್ ಸಂಘಟನೆಯ ಸ್ಥಳೀಯ ಉಗ್ರನೊಬ್ಬನನ್ನು ಕೊಂದಿದ್ದರು. ಭಾರತೀಯ ಸೇನೆಯ 42ನೇ ರಾಷ್ಟ್ರೀಯ ರೈಫಲ್ ಮತ್ತು ಕೇಂದ್ರೀಯ ಮೀಸಲು ಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು. ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಿ, ಜೈಷ್ ಇ ಮೊಹಮ್ಮದ್ ಸಂಘಟನೆಯ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಮೊದಲು ಉಗ್ರನನ್ನು ವಶಕ್ಕೆ ಪಡೆಯಲಾಯಿತು. ಆದರೆ ಆತ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಯತ್ನಿಸಿದಾಗ ಅವನನ್ನು ಕೊಲ್ಲಲಾಯಿತು ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:BWF World Championship: ಮೊದಲ ಸುತ್ತಿನಲ್ಲೇ ಸಾಯಿ ಪ್ರಣೀತ್ ಔಟ್! ಡಬಲ್ಸ್‌ನಲ್ಲೂ ಸೋಲು; ಕಿಡಂಬಿಗೆ ಜಯ
Published On - 3:48 pm, Mon, 13 December 21