ಪಶ್ಚಿಮಬಂಗಾಳದಲ್ಲಿ ಸಿಡಿಲು ದುರಂತಕ್ಕೆ 20 ಮಂದಿ ಸಾವು; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ
ಪಶ್ಚಿಮ ಬಂಗಾಳ ಘಟನೆ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಜೀವ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ದೆಹಲಿ: ಪಶ್ಚಿಮಬಂಗಾಳದ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಸುಮಾರು 20 ಮಂದಿ ಮೃತಪಟ್ಟಿದ್ದಾರೆ. ಈ ಸಿಡಿಲು ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದು, ಗಾಯಗೊಂಡವರಿಗೆ 50,000 ರೂ.ಪರಿಹಾರ ನೀಡುವುದಾಗಿ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಘಟನೆ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಜೀವ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಹೂಗ್ಲಿ ಮತ್ತು ಮುರ್ಶಿದಾಬಾದ್ ಜಿಲ್ಲೆಗಳಲ್ಲಿ 9 ಮಂದಿ ಮೃತಪಟ್ಟಿದ್ದು, ಪುರ್ಬಾ ಮೇದಿನಿಪುರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇದರ ಹೊರತಾಗಿ ದಕ್ಷಿಣ 24 ಪರಗಣ, ಕೋಲ್ಕತ್ತ, ಹೌರಾಹ್, ಪುರುಲಿಯಾ, ಬಂಕುರಾ, ನಾದಿಯಾ ಜಿಲ್ಲೆಗಳಲ್ಲಿ ಭಾರಿ ಗುಡುಗು-ಸಿಡಿಲು ಉಂಟಾಗಿದೆ.
My thoughts are with all those who lost their near and dear ones due to lightning in parts of West Bengal. May the injured recover at the earliest.
— Narendra Modi (@narendramodi) June 7, 2021
Published On - 9:09 am, Tue, 8 June 21