ಮಹಾರಾಷ್ಟ್ರ: ರಾಜ್ಯದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ(Accident) ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್, ಬುಲ್ಧಾನ ಜಿಲ್ಲೆಯ ಸಿಂಧಖೇಡ್ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್ಗೆ ಡಿಕ್ಕಿಯಾಗಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹೋಗಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಇನ್ನು ಬಸ್ ಅಪಘಾತವಾದಾಗ ಎಲ್ಲಾ ಪ್ರಯಾಣಿಕರು ಮಲಗಿಕೊಂಡಿದ್ದು, ಎನಾಗುತ್ತಿದೆ ಎನ್ನುವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದೆ. ಸುಮಾರು 25 ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಪೊಲೀಸ್-ಆಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.
ಇದನ್ನೂ ಓದಿ: Accident: ಪಶ್ಚಿಮ ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ, 48 ಜನ ದುರ್ಮರಣ
ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿಯಲ್ಲಿ ಬಳಿ ಲಾರಿ, 2 ಆಟೋಗಳ ನಡುವೆ ಅಪಘಾತವಾಗಿದ್ದು, ಮೃತರ ಸಂಖ್ಯೆ 8 ಕ್ಕೆ ಎರಿಕೆಯಾಗಿದೆ. ಗಂಭೀರ ಗಾಯಗೊಂಡವರಿಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಸಾಹಿರಾ(25), ಯಾಸ್ಮಿನ್(45), ಶಾಮ್(40), ಉಮೇಶ್(27), ಜಹೀರಾ(16) ಸಪ್ರಾಭೀ(55), ಇಬ್ರಾಹಿಂ(33), ಕೌಸರ್(35) ಮೃತ ವ್ಯಕ್ತಿಗಳು. ಇನ್ನು ಮೃತಪಟ್ಟವರೆಲ್ಲರೂ ಬಳ್ಳಾರಿಯ ಕೌಲ್ಬಜಾರ್ ನಿವಾಸಿಗಳಾಗಿದ್ದು, ಹೊಸಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:58 am, Sat, 1 July 23