ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ.

ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:Apr 24, 2021 | 1:43 PM

ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವೈದ್ಯಕೀಯ ಆಕ್ಸಿಜನ್ ಅಭಾವದ ಭೀಕರತೆ ದಿನದಿನಕ್ಕೂ ಹೆಚ್ಚುತ್ತಿದೆ. ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯ ಐಸಿಯುನಲ್ಲಿದ್ದ ಸುಮಾರು 20 ರೋಗಿಗಳು ಆಮ್ಲಜನಕ ಕೊರತೆಯಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜೈಪುರ ಗೋಲ್ಡನ್ ಆಸ್ಪತ್ರೆ ನಿರ್ದೇಶಕರಾದ ಡಾ. ಡಿ.ಕೆ.ಬಾಲುಜಾ, ನಮಗೆ ನಿನ್ನೆ 3600 ಮೆಟ್ರಿಕ್​ ಟನ್​ಗಳಷ್ಟು ಆಕ್ಸಿಜನ್ ಬರಬೇಕಿತ್ತು. ಆದರೆ ಕೇವಲ 1500 ಲೀಟರ್​ಗಳನ್ನಷ್ಟೇ ನೀಡಲಾಗಿತ್ತು. ನಿನ್ನೆ ರಾತ್ರಿ ಸುಮಾರು 20 ರೋಗಿಗಳು ಆಕ್ಸಿಜನ್​ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಹಾಗೇ, ವೈದ್ಯಕೀಯ ಆಮ್ಲಜನಕವನ್ನು ಶೀಘ್ರವೇ ಪೂರೈಸಿ ಎಂದು ಶನಿವಾರ ಮುಂಜಾನೆ ದೆಹಲಿ ಸರ್ಕಾರಕ್ಕೆ ಒಂದು ಎಸ್​ಒಎಸ್​ ಕೂಡ ಕಳಿಸಿದ್ದಾಗಿ ತಿಳಿಸಿದ್ದಾರೆ.

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ. ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯೂ ಕೂಡ ತಮ್ಮಲ್ಲಿ ಆಕ್ಸಿಜನ್​ಅಭಾವ ಇದೆ ಎಂದು ಸರ್ಕಾರಕ್ಕೆ ತಿಳಿಸಿದೆ. ಒಂದೊಮ್ಮೆ ವೈದ್ಯಕೀಯ ಆಕ್ಸಿಜನ್​ ಪೂರ್ತಿಯಾಗಿ ಖಾಲಿ ಆದರೆ 700 ರೋಗಿಗಳ ಜೀವ ಅಪಾಯದಲ್ಲಿರುತ್ತದೆ ಎಂದೂ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ಪ್ರಮಾಣವಚನ ಸ್ವೀಕಾರ

Published On - 12:19 pm, Sat, 24 April 21

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ