Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 20 ವರ್ಷದ ಯುವತಿಯ ಬಾಯಿ ಕಟ್ಟಿ, 51 ಬಾರಿ ಇರಿದು ಕೊಂದ ಪಾಗಲ್ ಪ್ರೇಮಿ

ಜಶ್ಪುರ್ ಜಿಲ್ಲೆಯವನಾದ ಆರೋಪಿಯು 3 ವರ್ಷಗಳ ಹಿಂದೆ ಆ ಯುವತಿಯೊಂದಿಗೆ ಪರಿಚಯವಾಗಿದ್ದ. ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾಗ ಅದೇ ಬಸ್​ನಲ್ಲಿ ಆ ಯುವತಿ ಕೂಡ ಪ್ರಯಾಣಿಸುತ್ತಿದ್ದಳು.

Crime News: 20 ವರ್ಷದ ಯುವತಿಯ ಬಾಯಿ ಕಟ್ಟಿ, 51 ಬಾರಿ ಇರಿದು ಕೊಂದ ಪಾಗಲ್ ಪ್ರೇಮಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Dec 27, 2022 | 3:35 PM

ಕೊರ್ಬಾ: ಛತ್ತೀಸ್‌ಗಢದ  (Chhattisgarh) ಕೊರ್ಬಾ ಜಿಲ್ಲೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ತನ್ನೊಂದಿಗೆ ಮಾತನಾಡಲು ನಿರಾಕರಿಸಿದ 20 ವರ್ಷದ ಯುವತಿಯನ್ನು ಕಟ್ಟಿ ಹಾಕಿ, ಆಕೆಯ ಬಾಯಿಯನ್ನು ಮುಚ್ಚಿ, 51 ಬಾರಿ ಸ್ಕ್ರೂಡ್ರೈವರ್‌ನಿಂದ ಇರಿದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 24ರಂದು ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ ಲಿಮಿಟೆಡ್ (SECL) ಪಂಪ್ ಹೌಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಆರೋಪಿ ಯುವಕ ಅಲ್ಲಿಗೆ ಬಂದಾಗ ಆ ಯುವತಿ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಯ ಕಿರುಚಾಟವನ್ನು ತಡೆಯಲು ಆಕೆಯ ಬಾಯಿಗೆ ಬಟ್ಟೆ ತುರುಕಿ, ಆಕೆಗೆ ಸ್ಕ್ರೂ ಡ್ರೈವರ್‌ನಿಂದ 51 ಬಾರಿ ಇರಿದಿದ್ದಾನೆ. ಇದರಿಂದ ಆ ಯುವತಿ ಸಾವನ್ನಪ್ಪಿದ್ದಾಳೆ.

ಆ ಯುವತಿಯ ತಮ್ಮ ಸಂಜೆ ಮನೆಗೆ ಬಂದಾಗ ಆಕೆ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಗಾಬರಿಯಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಜಶ್ಪುರ್ ಜಿಲ್ಲೆಯವನಾದ ಆರೋಪಿಯು 3 ವರ್ಷಗಳ ಹಿಂದೆ ಆ ಯುವತಿಯೊಂದಿಗೆ ಪರಿಚಯವಾಗಿದ್ದ. ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾಗ ಅದೇ ಬಸ್​ನಲ್ಲಿ ಆ ಯುವತಿ ಕೂಡ ಪ್ರಯಾಣಿಸುತ್ತಿದ್ದಳು. ಆಗ ಅವರಿಬ್ಬರಿಗೂ ಪರಿಚಯವಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ಯುವಕ ನಂತರ ಕೆಲಸಕ್ಕಾಗಿ ಗುಜರಾತ್‌ನ ಅಹಮದಾಬಾದ್‌ಗೆ ತೆರಳಿದ್ದ. ಆಮೇಲೆ ಅವರಿಬ್ಬರೂ ಫೋನ್‌ನಲ್ಲಿ ಸಂಪರ್ಕದಲ್ಲಿದ್ದರು. ಆ ಯುವತಿ ಆತನೊಂದಿಗೆ ಫೋನ್‌ನಲ್ಲಿ ಮಾತನಾಡುವುದನ್ನು ನಿಲ್ಲಿಸಿದ ನಂತರ ಆ ಯುವಕ ಆಕೆಯ ಪೋಷಕರಿಗೂ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಆಸ್ತಿಗಾಗಿ ತಮ್ಮನ ಮರ್ಡರ್, 3 ದಿನಗಳ ಬಳಿಕ ಶವ ಪತ್ತೆ, ಕೊಲೆ ರಹಸ್ಯ ಬೇಧಿಸಿದ ಸೊರಬ ಪೊಲೀಸರು

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿಯ ಪತ್ತೆಗೆ 4 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Tue, 27 December 22

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್