ಗುಂಡಿಕ್ಕಿ ಹತ್ಯೆ ಪ್ರಕರಣ: ಕೇಂದ್ರ ಸಚಿವ ಅಜಯ್ ಮಿಶ್ರಾಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ
2000ನೇ ಇಸವಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2004ರಲ್ಲಿ ಉತ್ತರ ಪ್ರದೇಶ ಸರ್ಕಾರ ಕೇಂದ್ರ ಸಚಿವ ಅಜಯ್ ಮಿಶ್ರಾ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಇದೀಗ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ದೆಹಲಿ, ಜ.10: ಕೇಂದ್ರ ಸಚಿವ ಅಜಯ್ ಮಿಶ್ರಾ (Ajay Mishra) ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 2000ನೇ ಇಸವಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2004ರಲ್ಲಿ ಉತ್ತರ ಪ್ರದೇಶ ಸರ್ಕಾರ ಕೇಂದ್ರ ಸಚಿವ ಅಜಯ್ ಮಿಶ್ರಾ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಇದೀಗ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ಪೀಠವು ಹೈಕೋರ್ಟ್‌ನ ಲಕ್ನೋ ಪೀಠ ಮತ್ತು ವಿಚಾರಣಾ ನ್ಯಾಯಾಲಯವು ನಡೆಸುತ್ತಿರುವ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡಲು ಒಲವು ಹೊಂದಿಲ್ಲ ಎಂದು ಹೇಳಿದೆ. ಇನ್ನು 2004ರಲ್ಲಿ ವಿಚಾರಣಾ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಮಿಶ್ರಾ ಅವರನ್ನು ಖುಲಾಸೆಗೊಳಿಸಿತ್ತು. ಇದರ ನಂತರ 2004ರಲ್ಲಿ ರಾಜ್ಯ ಸರ್ಕಾರ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು. ವಿಚಾರಣಾ ನ್ಯಾಯಾಲಯದ ತೀರ್ಪಿನಲ್ಲಿ ಯಾವುದೇ ದೋಷವಿಲ್ಲ ಎಂದು ಹೇಳಿದ ಮೇ 2023 ರ ಹೈಕೋರ್ಟ್ ಆದೇಶವನ್ನು ನೀಡಿತ್ತು. ನಂತರ ಇದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಹೈಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯ ನೀಡಿದ ಆದೇಶವನ್ನು ಸುಪ್ರೀಂ ಎತ್ತಿಹಿಡಿದಿದೆ.
ಇದಕ್ಕೂ ಮೊದಲು, ಕೇಂದ್ರ ಸಚಿವರು ಮೇಲ್ಮನವಿಯನ್ನು ಹೈಕೋರ್ಟ್‌ನ ಲಕ್ನೋ ಪೀಠದಿಂದ ಪ್ರಯಾಗ್‌ರಾಜ್‌ನಲ್ಲಿರುವ ಪ್ರಧಾನ ಪೀಠಕ್ಕೆ ವರ್ಗಾಯಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅದನ್ನು ಸುಪ್ರೀಂ ತಿರಸ್ಕರಿಸಲಾಯಿತು. 2000ರಲ್ಲಿ ಜಿಲ್ಲೆಯ ಟಿಕುನಿಯಾ ಪ್ರದೇಶದಲ್ಲಿ 24 ವರ್ಷದ ಗುಪ್ತಾ ಎಂಬ ಯುವಕನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ಸಂಬಂಧಿಸಿದಂತೆ ಲಖಿಂಪುರ ಪೊಲೀಸ್ ಠಾಣೆಯಲ್ಲಿ ಮಿಶ್ರಾ ಮತ್ತು ಇತರರ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು.
ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಕ್ಕೆ ಆಗ್ರಹಿಸಿ ಇಂದು ರೈಲು ತಡೆ ಆಂದೋಲನ
ಲಖಿಂಪುರ ಖೇರಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು 2004ರಲ್ಲಿ ಮಿಶ್ರಾ ಮತ್ತು ಇತರರನ್ನು ಈ ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿತ್ತು. ಖುಲಾಸೆಯಿಂದ ಅಸಮಾಧಾನಗೊಂಡ ರಾಜ್ಯ ಸರ್ಕಾರವು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದರು. ಅಲ್ಲಿಯು ಇದನ್ನು ವಜಾ ಮಾಡಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ