Ahmedabad Blast Case: 2008ರ ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣ; 49 ಆರೋಪಿಗಳಿಗೆ ಶಿಕ್ಷೆ, 28 ಆರೋಪಿಗಳು ಖುಲಾಸೆ
Ahmedabad Serial Blast Case: 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ 77 ಆರೋಪಿಗಳ ಪೈಕಿ 28 ಮಂದಿಯನ್ನು ಗುಜರಾತ್‌ನ ವಿಶೇಷ ನ್ಯಾಯಾಲಯ ಇಂದು ಖುಲಾಸೆಗೊಳಿಸಿದೆ.
ಗಾಂಧಿನಗರ: ಅಹಮದಾಬಾದ್‌ನಲ್ಲಿ ಸರಣಿ ಬಾಂಬ್ ಸ್ಫೋಟ (Ahmedabad Serial Blast) ಪ್ರಕರಣಕ್ಕೆ ಸಂಬಂಧಿಸಿದಂತೆ 77 ಆರೋಪಿಗಳ ಪೈಕಿ 49 ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಉಳಿದ 28 ಆರೋಪಿಗಳನ್ನು ಖುಲಾಸೆ ಮಾಡಲಾಗಿದೆ ಎಂದು ಅಹಮದಾಬಾದ್ ವಿಶೇಷ ಕೋರ್ಟ್ ಇಂದು (ಮಂಗಳವಾರ) ತೀರ್ಪು ಪ್ರಕಟಿಸಿದೆ. 2008ರ ಜುಲೈ 26ರಂದು ಅಹಮದಾಬಾದ್‌ನಲ್ಲಿ ನಡೆದ ಬಾಂಬ್ ಸ್ಫೋಟದಿಂದ 56 ಜನರು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ 200 ಮಂದಿ ಗಾಯಗೊಂಡಿದ್ದರು.
2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ 77 ಆರೋಪಿಗಳ ಪೈಕಿ 28 ಮಂದಿಯನ್ನು ಗುಜರಾತ್‌ನ ವಿಶೇಷ ನ್ಯಾಯಾಲಯ ಇಂದು ಖುಲಾಸೆಗೊಳಿಸಿದೆ. ಉಳಿದ 49 ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಈ ವಿಶೇಷ ನ್ಯಾಯಾಲಯವು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ 77 ಆರೋಪಿಗಳ ವಿರುದ್ಧದ ವಿಚಾರಣೆಯನ್ನು ಮುಕ್ತಾಯಗೊಳಿಸಿತ್ತು. 2009ರ ಡಿಸೆಂಬರ್ನಲ್ಲಿ ಪ್ರಾರಂಭವಾದ ಸುದೀರ್ಘ ವಿಚಾರಣೆಯಲ್ಲಿ 1,100 ಸಾಕ್ಷಿಗಳನ್ನು ಪ್ರಾಸಿಕ್ಯೂಷನ್‌ನಿಂದ ಪರೀಕ್ಷಿಸಲಾಗಿತ್ತು.
2008ರ ಜುಲೈ 26ರಂದು 70 ನಿಮಿಷಗಳ ಕಾಲ ಅಹಮದಾಬಾದ್ ನಗರದಲ್ಲಿ 21 ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಇದರಲ್ಲಿ 56 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ)ಯ ಬಣವಾದ ಇಂಡಿಯನ್ ಮುಜಾಹಿದೀನ್ (ಐಎಂ) ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವವರು ಈ ಸರಣಿ ಬಾಂಬ್ ಸ್ಫೋಟಗಳನ್ನು ನಡೆಸಿದ್ದಾರೆ ಎಂದು ಹೇಳಲಾಗಿತ್ತು. 2002ರ ಗೋಧ್ರಾ ಗಲಭೆಗೆ ಪ್ರತೀಕಾರವಾಗಿ ಈ ಸ್ಫೋಟಗಳನ್ನು ಭಯೋತ್ಪಾದಕರು ಯೋಜಿಸಿದ್ದರು. ಇದರಲ್ಲಿ ಅಲ್ಪಸಂಖ್ಯಾತ ಸಮುದಾಯದ ಹಲವಾರು ಜನರು ಸಾವನ್ನಪ್ಪಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ಈ ಹಿಂದೆ 85 ಜನರನ್ನು ಬಂಧಿಸಿದ್ದರು. ಆದರೆ, 78 ಜನರ ವಿರುದ್ಧ ಮಾತ್ರ ವಿಚಾರಣೆ ಪ್ರಾರಂಭವಾಗಿತ್ತು. ಆರೋಪಿಗಳ ಮೇಲೆ ಕೊಲೆ, ಕ್ರಿಮಿನಲ್ ಪಿತೂರಿಯ ಆರೋಪಗಳನ್ನು ಹೊರಿಸಲಾಗಿತ್ತು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.
2013ರಲ್ಲಿ ಕೆಲವು ಆರೋಪಿಗಳು ವಿಚಾರಣೆಯ ಸಮಯದಲ್ಲಿ ಜೈಲಿನಲ್ಲಿ 213 ಅಡಿ ಉದ್ದದ ಸುರಂಗವನ್ನು ಕೊರೆದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು ಎಂದು ಪಿಟಿಐ ವರದಿ ಮಾಡಿತ್ತು.
ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಾಂಬ್ ಸ್ಫೋಟ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Pakistan Bomb Blast: ಪಾಕಿಸ್ತಾನದ ಕರಾಚಿಯಲ್ಲಿ ಕಾರ್ ಬಾಂಬ್ ಸ್ಫೋಟ; 10 ಜನ ಸಾವು, 13ಕ್ಕೂ ಹೆಚ್ಚು ಮಂದಿಗೆ ಗಾಯ
Published On - 12:21 pm, Tue, 8 February 22