AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಬಾಂಬ್ ಸ್ಫೋಟ, ಯಾಸಿನ್ ಭಟ್ಕಳ್ ಸೇರಿ ಐವರ ಮರಣದಂಡನೆ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್​

2013ರಲ್ಲಿ ಹೈದರಾಬಾದ್​ನಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ ಐವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ತೆಲಂಗಾಣ ಹೈಕೋರ್ಟ್‌ ಮಂಗಳವಾರ ಎತ್ತಿ ಹಿಡಿದಿದೆ. ಎನ್‌ಐಎ (ವಿಚಾರಣಾ) ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ನಿಷೇಧಿತ ಉಗ್ರ ಸಂಘಟನೆ ಇಂಡಿಯನ್‌ ಮುಜಾಹಿದ್ದೀನ್‌ನ(ಐಎಂ) ಸದಸ್ಯರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಆದೇಶದ ವಿರುದ್ಧ ಸು‍ಪ್ರೀಂಕೋರ್ಟ್‌ ಮೊರೆ ಹೋಗುವುದಾಗಿ ಅಪರಾಧಿಗಳ ಪರ ವಕೀಲರು ತಿಳಿಸಿದ್ದಾರೆ.

ಹೈದರಾಬಾದ್ ಬಾಂಬ್ ಸ್ಫೋಟ, ಯಾಸಿನ್ ಭಟ್ಕಳ್ ಸೇರಿ ಐವರ ಮರಣದಂಡನೆ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್​
ಯಾಸಿನ್ ಭಟ್ಕಳ್ Image Credit source: Amarujala.com
ನಯನಾ ರಾಜೀವ್
|

Updated on:Apr 09, 2025 | 9:39 AM

Share

ತೆಲಂಗಾಣ, ಏಪ್ರಿಲ್ 09: ಹೈದರಾಬಾದ್​ನಲ್ಲಿ 2013ರಲ್ಲಿ ನಡೆದ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್​ ಭಟ್ಕಳ್(Yasin Bhatkal) ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್​ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ.  ಈ ಭಯೋತ್ಪಾದಕರು 2013 ರ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು, ಇದರಲ್ಲಿ 18 ಜನರು ಸಾವನ್ನಪ್ಪಿದ್ದರು ಮತ್ತು 131 ಜನರು ಗಾಯಗೊಂಡಿದ್ದರು.

ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀ ಸುಧಾ ಅವರ ಪೀಠವು, ಐಎಂ ಭಯೋತ್ಪಾದಕರು ಸಲ್ಲಿಸಿದ್ದ ಕ್ರಿಮಿನಲ್ ಪರಿಷ್ಕರಣಾ ಮೇಲ್ಮನವಿಯನ್ನು ವಜಾಗೊಳಿಸಿ, ಎನ್ಐಎ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ದೃಢಪಡಿಸಲಾಗಿದೆ ಎಂದು ಪೀಠ ಹೇಳಿದೆ.

ಇದಕ್ಕೂ ಮೊದಲು ಡಿಸೆಂಬರ್ 13, 2016 ರಂದು ಐಎಂ ಸಹ ಸಂಸ್ಥಾಪಕ ಮೊಹಮ್ಮದ್ ಅಹ್ಮದ್ ಸಿದ್ದಿಬಾಪಾ ಅಲಿಯಾಸ್ ಯಾಸಿನ್ ಭಟ್ಕಳ್, ಪಾಕಿಸ್ತಾನಿ ಪ್ರಜೆ ಜಿಯಾ-ಉರ್-ರೆಹಮಾನ್ ಅಲಿಯಾಸ್ ವಕಾಸ್, ಅಸಾದುಲ್ಲಾ ಅಖ್ತರ್ ಅಲಿಯಾಸ್ ಮೊನ್ಜಾ ಹದ್ದಿ ಸೇರಿದಂತೆ ಐವರು ಸದಸ್ಯರನ್ನು ಎನ್‌ಐಎ ನ್ಯಾಯಾಲಯ ದೋಷಿ ಎಂದು ಘೋಷಿಸಿತ್ತು.

ಇದನ್ನೂ ಓದಿ
Image
ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಮನೆ ಬಾಗಿಲ ಬಳಿ ಸ್ಫೋಟ
Image
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
Image
ಪಾಕಿಸ್ತಾನದ ಮಸೀದಿಯಲ್ಲಿ ಸ್ಫೋಟ; ಇಸ್ಲಾಮಿಕ್ ನಾಯಕ ಸೇರಿದಂತೆ ಮೂವರಿಗೆ ಗಾಯ
Image
ಐಇಡಿ ಸ್ಫೋಟ, ಯೋಧರನ್ನು ರಕ್ಷಿಸುವ ವೇಳೆ ಸಿಆರ್​ಪಿಎಫ್​ ಶ್ವಾನಕ್ಕೆ ಗಾಯ

ಶೇಖ್ ಫೆಬ್ರವರಿ 21, 2013 ರಂದು ನಗರದ ಜನದಟ್ಟಣೆಯ ಶಾಪಿಂಗ್ ಪ್ರದೇಶವಾದ ದಿಲ್‌ಸುಖ್‌ನಗರದಲ್ಲಿ ಎರಡು ಮಾರಕ ಸ್ಫೋಟಗಳು ಸಂಭವಿಸಿದವು. ಆರೋಪಿಗಳಲ್ಲಿ ಒಬ್ಬರ ವಕೀಲರು ವರದಿಗಾರರಿಗೆ ತಿಳಿಸಿದ್ದು, ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಜೈಪುರ ಬಾಂಬ್ ಸ್ಫೋಟ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಘಟನೆ ಏನು? ಫೆಬ್ರವರಿ 21, 2013 ರಂದು ನಗರದ ಜನದಟ್ಟಣೆಯ ಶಾಪಿಂಗ್ ಪ್ರದೇಶವಾದ ದಿಲ್‌ಸುಖ್‌ನಗರದಲ್ಲಿ ಎರಡು ಮಾರಕ ಸ್ಫೋಟಗಳು ಸಂಭವಿಸಿದ್ದವು. ಮೊದಲ ಸ್ಫೋಟ ಬಸ್ ನಿಲ್ದಾಣದಲ್ಲಿ ಮತ್ತು ಎರಡನೆಯದು ದಿಲ್‌ಸುಖ್‌ನಗರದ ತಿನಿಸು ಮಳಿಗೆ (ಎ1 ಮಿರ್ಚಿ ಸೆಂಟರ್) ಬಳಿ ಸಂಭವಿಸಿತ್ತು. ಈ ಪ್ರಕರಣವು ಭಯೋತ್ಪಾದಕ ಚಟುವಟಿಕೆಯನ್ನು ಒಳಗೊಂಡಿರುವುದರಿಂದ ಎನ್‌ಐಎ ತನಿಖೆಯನ್ನು ವಹಿಸಿಕೊಂಡಿದೆ ಎಂದು ಪ್ರಾಸಿಕ್ಯೂಷನ್ ವಕೀಲರು ಹೈಕೋರ್ಟ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಆದಾಗ್ಯೂ, ಆರಂಭದಲ್ಲಿ ಇದನ್ನು ನಗರ ಪೊಲೀಸರ ವಿಶೇಷ ತನಿಖಾ ತಂಡ (SIT) ತನಿಖೆ ನಡೆಸಿತು. ಪ್ರಮುಖ ಆರೋಪಿ ರಿಯಾಜ್ ಭಟ್ಕಳ್ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ.

ಎನ್​ಐಎ 4,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿತ್ತು ಇದನ್ನು ಅಪರೂಪದಲ್ಲೇ ಅಪರೂಪದ ಪ್ರಕರಣ ಎಂದು ಬಣ್ಣಿಸಿ, ಐದು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಅಪರಾಧಿಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಆಲಿಸಿದ ನಂತರ, ಹೈಕೋರ್ಟ್ ಐದು ಐಎಂ ಭಯೋತ್ಪಾದಕರ ಮರಣದಂಡನೆಯನ್ನು ಎತ್ತಿಹಿಡಿಯಿತು. ಎನ್ಐಎ 4,000 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:31 am, Wed, 9 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ