AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2016ರ ಹಿಟ್​ ಆ್ಯಂಡ್ ರನ್ ಪ್ರಕರಣ: ಮೃತ ವ್ಯಕ್ತಿಯ ಕುಟುಂಬಕ್ಕೆ 1.96 ಕೋಟಿ ರೂ. ಪರಿಹಾರ

2016ರಲ್ಲಿ ದೆಹಲಿಯಲ್ಲಿ ನಡೆದ ಹಿಟ್​ ಆ್ಯಂಡ್​ ರನ್ ಪ್ರಕರಣದಲ್ಲಿ ಮೃತ ಸಿದ್ಧಾರ್ಥ್​ ಕುಟುಂಬಕ್ಕೆ 1.96 ಕೋಟಿ ರೂ.ಗಳ ಪರಿಹಾರ ನೀಡುವಂತೆ ಇನ್ಶೂರೆನ್ಸ್​ ಕಂಪನಿಗೆ ನ್ಯಾಯಾಲಯ ಸೂಚಿಸಿದೆ.

2016ರ ಹಿಟ್​ ಆ್ಯಂಡ್ ರನ್ ಪ್ರಕರಣ: ಮೃತ ವ್ಯಕ್ತಿಯ ಕುಟುಂಬಕ್ಕೆ 1.96 ಕೋಟಿ ರೂ. ಪರಿಹಾರ
ಸಿದ್ಧಾರ್ಥ್​
ನಯನಾ ರಾಜೀವ್
|

Updated on: Jul 17, 2024 | 10:46 AM

Share

ದೆಹಲಿಯಲ್ಲಿ 2016ರಲ್ಲಿ ನಡೆದ ಹಿಟ್​ ಆ್ಯಂಡ್​ ರನ್ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 1.96 ಕೋಟಿ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಇನ್ಶೂರೆನ್ಸ್​ ಕಂಪನಿಗೆ ಹೇಳಿದೆ. ಈ ಅಪಘಾತದ ಸಂದರ್ಭದಲ್ಲಿ ಕಾರನ್ನು ಅಪ್ರಾಪ್ತ ಬಾಲಕ ಓಡಿಸುತ್ತಿದ್ದ, ಸಿದ್ಧಾರ್ಥ್​ ಮಾರುಕಟ್ಟೆಯಿಂದ ಮನೆಗೆ ಮರಳುತ್ತಿರುವಾಗ ರಸ್ತೆ ದಾಟುವ ಸಮಯದಲ್ಲಿ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದಿತ್ತು, ಮಾರಣಾಂತಿಕವಾಗಿ ಗಾಯಗೊಂಡಿದ್ದರು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಅಪಘಾತದಲ್ಲಿ ಸಾವನ್ನಪ್ಪಿದ್ದ ಸಿದ್ಧಾರ್ಥ್​ ಶರ್ಮಾ ವಯಸ್ಸು ಆಗ 32 ವರ್ಷವಾಗಿತ್ತು, ದೆಹಲಿಯ ಸಿವಿಲ್​ ಲೈನ್ಸ್​ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದಾಗ ಚಾಲಕನ ಅಜಾಗರೂಕ ಚಾಲನೆಯಿಂದ ಸಿದ್ಧಾರ್ಥ್​ ಮಾರಣಾಂತಿಕವಾಗಿ ಗಾಯಗೊಂಡಿದ್ದರು.

ನ್ಯಾಯಾಲಯವು ಅಪ್ರಾಪ್ತ ಬಾಲಕನ ತಂದೆಯನ್ನೇ ಹೊಣೆಗಾರರನ್ನಾಗಿ ಮಾಡಿದೆ. 1.98 ಕೋಟಿ ರೂ. ಸರಿಸುಮಾರು 1.21 ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ಮತ್ತು ಸುಮಾರು 77.61 ಲಕ್ಷ ರೂಪಾಯಿಗಳನ್ನು ಬಡ್ಡಿಯಾಗಿ ನೀಡುವಂತೆ ನ್ಯಾಯಾಲಯವು ವಿಮಾ ಕಂಪನಿಗೆ ಸೂಚಿಸಿತು.

ಮತ್ತಷ್ಟು ಓದಿ: ಹಿಟ್​ ಆ್ಯಂಡ್​ ರನ್: ಸಿಸಿಟಿವಿ ದೃಶ್ಯಗಳನ್ನು ನೀಡಲು ಬಾರ್ ವಿಫಲ, ಪರವಾನಗಿ ತಾತ್ಕಾಲಿಕ ರದ್ದು

ಸಿದ್ಧಾರ್ಥ್​ ಸಾಯುವ ಸಮಯದಲ್ಲಿ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದರು ಎನ್ನಲಾಗಿದೆ. 2015 ರಲ್ಲಿ 25,000 ರೂ. ಮಾಸಿಕ ವೇತನವನ್ನು ಪಡೆಯುತ್ತಿದ್ದರು ಎಂಬ ಅಂಶವನ್ನು ಪರಿಗಣಿಸಿತು. ಮಾರ್ಚ್ 2016 ರಲ್ಲಿ ಸ್ವೀಕರಿಸಿದ ಆಫರ್ ಲೆಟರ್ ಗಮನಿಸಿ, ವಾರ್ಷಿಕ 10 ಲಕ್ಷ ರೂ.ಗಳನ್ನು ಸಹ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

ಅಪ್ರಾಪ್ತ ವಯಸ್ಕ, ತನ್ನ ಆರು ಸ್ನೇಹಿತರ ಜೊತೆಯಲ್ಲಿ, ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದ. ಡಿಕ್ಕಿಯ ನಂತರ ಸಿದ್ದಾರ್ಥ್ ಗಾಳಿಯಲ್ಲಿ 20 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?