Hardik Patel: 2017ರ ಪ್ರಕರಣ, ವಿಚಾರಣೆಗೆ ಹಾಜರಾಗದೆ ನ್ಯಾಯಾಂಗಕ್ಕೆ ಅಗೌರವ, ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ಬಂಧನಕ್ಕೆ ವಾರಂಟ್ ಜಾರಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಹಾರ್ದಿಕ್ ಪಟೇಲ್ 2017ರ ಪ್ರಕರಣವೊಂದರಲ್ಲಿ  ವಿಚಾರಣೆಗೆ ಹಾಜರಾಗದ ಕಾರಣ ಗುಜರಾತ್ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ.

Hardik Patel: 2017ರ ಪ್ರಕರಣ, ವಿಚಾರಣೆಗೆ ಹಾಜರಾಗದೆ ನ್ಯಾಯಾಂಗಕ್ಕೆ ಅಗೌರವ, ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ಬಂಧನಕ್ಕೆ ವಾರಂಟ್ ಜಾರಿ
ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್
Follow us
ನಯನಾ ರಾಜೀವ್
|

Updated on: Feb 16, 2023 | 4:08 PM

ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಹಾರ್ದಿಕ್ ಪಟೇಲ್ 2017ರ ಪ್ರಕರಣವೊಂದರಲ್ಲಿ  ವಿಚಾರಣೆಗೆ ಹಾಜರಾಗದ ಕಾರಣ ಗುಜರಾತ್ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. 2017ರ ಗುಜರಾತ್ ವಿಧಾನಸಭೆ ಚುನಾವಣೆಗೆ ಮುನ್ನ ಜಿಲ್ಲೆಯ ಹಳ್ಳಿಯೊಂದರಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪಟೇಲ್ ರಾಜಕೀಯ ಭಾಷಣ ಮಾಡಿದ್ದರು.

ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾದ ಪಟೇಲ್ ವಿರುದ್ಧ ಧ್ರಂಗಾಧ್ರದಲ್ಲಿ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಿಡಿ ಶಾ ಅವರು ಬಂಧನ ವಾರಂಟ್ ಹೊರಡಿಸಿದ್ದಾರೆ. ಫೆಬ್ರವರಿ 2 ರಂದು ತನ್ನ ಆದೇಶದ ಮೂಲಕ, ನ್ಯಾಯಾಲಯವು ಪಟೇಲ್ ಅನ್ನು ಬಂಧಿಸಿ ನ್ಯಾಯಾಲಯದ ಮುಂದೆ ತಪ್ಪದೇ ಹಾಜರುಪಡಿಸುವಂತೆ ಸುರೇಂದ್ರನಗರ ಜಿಲ್ಲೆಯ ಧ್ರಂಗಾಧ್ರ ತಾಲೂಕು ಪೊಲೀಸ್ ಠಾಣಾಧಿಕಾರಿಗೆ ಸೂಚಿಸಿತು. ಫೆಬ್ರವರಿ 11 ರಂದು ಪೊಲೀಸ್ ಠಾಣೆಗೆ ಆದೇಶ ಬಂದಿದೆ ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಮತ್ತಷ್ಟು ಓದಿ:ಟ್ವಿಟರ್ ಖಾತೆಯಲ್ಲಿ ಪಕ್ಷದ ಹೆಸರು ತೆಗೆದುಹಾಕಿದ ಗುಜರಾತ್ ಕಾಂಗ್ರೆಸ್ ಘಟಕದ ನಾಯಕ ಹಾರ್ದಿಕ್‌ ಪಟೇಲ್

ಪಟೇಲ್ ಮತ್ತು ಸಹ-ಆರೋಪಿ ಕೌಶಿಕ್ ಪಟೇಲ್ ಅವರು ಹರಿಪರ್ ಗ್ರಾಮದಲ್ಲಿ ಸಭೆ ಆಯೋಜಿಸಲು ನೀಡಿದ್ದ ಅನುಮತಿಯ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದ ನಂತರ ಜನವರಿ 12, 2018 ರಂದು ಧ್ರಂಗಾಧ್ರ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ.

ಎಫ್‌ಐಆರ್‌ ಪ್ರಕಾರ, 2017ರ ನವೆಂಬರ್‌ 26ರಂದು ವಿಧಾನಸಭೆ ಚುನಾವಣೆಗೆ ಮುನ್ನ ಇಬ್ಬರೂ ಗ್ರಾಮದಲ್ಲಿ ಸಭೆ ನಡೆಸಲು ಅನುಮತಿ ಕೋರಿದ್ದರು. ಆದರೆ ಮಾಡಿದ ಭಾಷಣದಲ್ಲಿ ಅವರು ಹೆಚ್ಚುವರಿ ಜಿಲ್ಲಾಧಿಕಾರಿ ಹೊರಡಿಸಿದ ಅಧಿಸೂಚನೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅವರ ವಿರುದ್ಧ ಗುಜರಾತ್  ಪೊಲೀಸ್ ಆಕ್ಟ್, 1951 ರ ಸೆಕ್ಷನ್ 37 (3) ಮತ್ತು 135 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಯಿತು, ಸರ್ಕಾರಿ ಆದೇಶಗಳನ್ನು ಪಾಲಿಸದಿದ್ದಕ್ಕಾಗಿ ಶಿಕ್ಷೆಯನ್ನು ವಿಧಿಸಲಾಯಿತು. ಗಮನಾರ್ಹವೆಂದರೆ, ನವೆಂಬರ್ 2017 ರಲ್ಲಿ ಧುತಾರ್‌ಪರ್ ಗ್ರಾಮದಲ್ಲಿ ನಡೆದ ರ್ಯಾಲಿಯಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ರಾಜಕೀಯ ಭಾಷಣ ಮಾಡಿದ್ದಕ್ಕಾಗಿ ಜಾಮ್‌ನಗರದ ನ್ಯಾಯಾಲಯವು ಕಳೆದ ವಾರ ಇದೇ ರೀತಿಯ ಪ್ರಕರಣದಲ್ಲಿ ಪಟೇಲ್ ಅವರನ್ನು ಖುಲಾಸೆಗೊಳಿಸಿತ್ತು.

ಆ ಸಮಯದಲ್ಲಿ, ಪಟೇಲ್ ಅವರು ಪಾಟಿದಾರ್ ಅನಾಮತ್ ಆಂದೋಲನ ಸಮಿತಿ (ಪಿಎಎಎಸ್) ನೇತೃತ್ವ ವಹಿಸಿದ್ದರು, ಇದು ಪಾಟಿದಾರ್ ಸಮುದಾಯದ ಸಂಘಟನೆಯಾಗಿದ್ದು ಅದು ಯುವಕರಿಗೆ ಒಬಿಸಿ ಕೋಟಾದಡಿಯಲ್ಲಿ ಮೀಸಲಾತಿಗೆ ಒತ್ತಾಯಿಸಿ ರಾಜ್ಯಾದ್ಯಂತ ಆಂದೋಲನವನ್ನು ಆಯೋಜಿಸಿತು. ಆಂದೋಲನ ಹಿಂಸಾಚಾರಕ್ಕೆ ತಿರುಗಿತ್ತು.

ಪಟೇಲ್ ಅವರು 2019 ರಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು, ಅವರು ಡಿಸೆಂಬರ್ 2022 ರ ಗುಜರಾತ್ ಚುನಾವಣೆಗೆ ಮುಂಚಿತವಾಗಿ ಅವರು ಕಾಂಗ್ರೆಸ್ ತೊರೆದಿದ್ದರು, ನಂತರ ಅಹಮದಾಬಾದ್‌ನ ವಿರಾಮಗಾಮ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಶಾಸಕರಾಗಿ ಆಯ್ಕೆಯಾದರು. ಅವರು ಗುಜರಾತ್‌ನಲ್ಲಿ ಎರಡು ದೇಶದ್ರೋಹ ಪ್ರಕರಣಗಳು ಸೇರಿದಂತೆ ಎರಡು ಡಜನ್‌ಗಿಂತಲೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್