ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ಗೆ ಬಿಗ್ ರಿಲೀಫ್; 2019ರ ದ್ವೇಷ ಭಾಷಣ ಪ್ರಕರಣದಲ್ಲಿ ದೋಷಮುಕ್ತ
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ್ದಕ್ಕಾಗಿ ಕಳೆದ ವರ್ಷ ಸಮಾಜವಾದಿ ನಾಯಕ ಅಜಂ ಖಾನ್ನ್ನು ತಪ್ಪಿತಸ್ಥ ಎಂದು ಘೋಷಿಸಲಾಗಿತ್ತು
ದೆಹಲಿ: 2019 ರ ದ್ವೇಷ ಭಾಷಣ ಪ್ರಕರಣದಲ್ಲಿ (2019 hate speech case) ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ (Azam Khan) ಅವರನ್ನು ಉತ್ತರ ಪ್ರದೇಶದ (Uttar Pradesh) ನ್ಯಾಯಾಲಯ ಇಂದು (ಬುಧವಾರ) ದೋಷಮುಕ್ತಗೊಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ್ದಕ್ಕಾಗಿ ಕಳೆದ ವರ್ಷ ಸಮಾಜವಾದಿ ನಾಯಕನನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು ರಾಂಪುರ ನ್ಯಾಯಾಲಯವು ರದ್ದುಗೊಳಿಸಿತು. ದೇಶದಲ್ಲಿ ಮುಸ್ಲಿಮರು ಅಸ್ತಿತ್ವದಲ್ಲಿರಲು ಕಷ್ಟಪಡುವ ವಾತಾವರಣವನ್ನು ಪ್ರಧಾನಿ ನಿರ್ಮಿಸುತ್ತಿದ್ದಾರೆ ಎಂದು ಸಮಾಜವಾದಿ ನಾಯಕ ಆರೋಪಿಸಿದ್ದರು.
2022 ರ ತೀರ್ಪಿನ ನಂತರ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಯಿತು.
ವಿಶೇಷ ನ್ಯಾಯಾಲಯವು ಖಾನ್ ಶಿಕ್ಷೆಯ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಅಂಗೀಕರಿಸಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ. ಖಾನ್ ಪರ ವಾದಿಸಿದ ವಕೀಲ ವಿನೋದ್ ಶರ್ಮಾ, ದ್ವೇಷ ಭಾಷಣ ಪ್ರಕರಣದಲ್ಲಿ ನಮ್ಮನ್ನು ಖುಲಾಸೆಗೊಳಿಸಲಾಗಿದೆ, ನ್ಯಾಯ ಸಿಕ್ಕಿರುವುದಕ್ಕೆ ನಮಗೆ ಸಂತೋಷವಾಗಿದೆ ಎಂದು ಹೇಳಿದರು. ಪ್ರಕರಣದಲ್ಲಿ ನಮ್ಮನ್ನು ಸಿಲುಕಿಸಲಾಗಿದೆ ಎಂಬ ನಮ್ಮ ವಾದವನ್ನು ನ್ಯಾಯಾಲಯವು ಎತ್ತಿಹಿಡಿದಿದೆ ಮತ್ತು ತೀರ್ಪು ನಮ್ಮ ಪರವಾಗಿದೆ ಎಂದು ಶರ್ಮಾ ಹೇಳಿದ್ದಾರೆ.
ಇದನ್ನೂ ಓದಿ: ಕೇಜ್ರಿವಾಲ್ಗೆ ಭರವಸೆ; ನಾವೆಲ್ಲರೂ ದೇಶ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಒಟ್ಟಾಗಿ ಬಂದಿದ್ದೇವೆ ಎಂದ ಉದ್ಧವ್ ಠಾಕ್ರೆ
ಖಾನ್ ಅವರ ಅಸೆಂಬ್ಲಿ ಸದಸ್ಯತ್ವವನ್ನು ಅನರ್ಹಗೊಳಿಸಿದ ನಂತರ, ರಾಂಪುರ ಸದರ್ ಸ್ಥಾನಕ್ಕೆ ಉಪಚುನಾವಣೆ ನಡೆಯಿತು. ಬಿಜೆಪಿ ಅಭ್ಯರ್ಥಿ ಆಕಾಶ್ ಸಕ್ಸೇನಾ ಅವರು ಚುನಾವಣೆಯಲ್ಲಿ ಖಾನ್ ಅವರ ನಿಕಟವರ್ತಿ ಎಸ್ಪಿಯ ಅಸೀಮ್ ರಾಜಾ ಅವರನ್ನು ಪರಾಭವಗೊಳಿಸಿದರು.
ಆಜಂ ಖಾನ್ ಅವರು ರಾಂಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ಹೆಚ್ಚಿನ ಬೆಂಬಲ ಹೊಂದಿದ್ದಾರೆ.
2017 ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಮಾಜವಾದಿ ನಾಯಕ ಅವರು ಭ್ರಷ್ಟಾಚಾರ ಮತ್ತು ಕಳ್ಳತನದಿಂದ ಭೂಕಬಳಿಕೆಯವರೆಗಿನ 87 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ