Crime News: ಮದುವೆಯಾಗಬೇಕಿದ್ದ ಯುವಕನೆದುರು ಕಾಡಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

|

Updated on: Oct 26, 2024 | 5:47 PM

ಒಡಿಶಾದ ನಯಾಗರ್ ಜಿಲ್ಲೆಯ ಕಾಡಿನಲ್ಲಿ 21 ವರ್ಷದ ಮಹಿಳೆಯೊಬ್ಬಳ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಆಕೆ ಮದುವೆಯಾಗಬೇಕಿದ್ದ ಯುವಕನ ಮುಂದೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಈ ಕೃತ್ಯದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

Crime News: ಮದುವೆಯಾಗಬೇಕಿದ್ದ ಯುವಕನೆದುರು ಕಾಡಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಅತ್ಯಾಚಾರ
Follow us on

ಪುರಿ: ಒಡಿಶಾದ ನಯಾಗರ್ ಜಿಲ್ಲೆಯ ಕಾಡಿನಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಕ್ಟೋಬರ್ 20ರಂದು ಈ ಘಟನೆ ಸಂಭವಿಸಿದೆ. ಆಕೆ ಮತ್ತು ಆಕೆಯ ಭಾವಿ ಪತಿ ಸಂಜೆ ಫತೇಗಢ ರಾಮ ದೇವಾಲಯಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಪಿಟಿಐ ವರದಿಯ ಪ್ರಕಾರ, ಮೂವರು ಅಪರಿಚಿತ ವ್ಯಕ್ತಿಗಳು ಆ ಯುವತಿ ಮತ್ತು ಆಕೆಯ ಭಾವಿ ಪತಿಯನ್ನು ಪಿತಾಖೈ ಅರಣ್ಯದ ಬಳಿ ತಡೆದು ಬಲವಂತವಾಗಿ ಕಾಡಿಗೆ ಕರೆದೊಯ್ದರು. ಅಲ್ಲಿ ಅವರು ಆಕೆಯ ಭಾವಿ ಗಂಡನ ಎದುರಲ್ಲೇ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಕೆಯ ಪ್ರೇಯಸಿಗೆ ಚಾಕುವಿನಿಂದ ಬೆದರಿಕೆ ಹಾಕಿ, ಅತ್ಯಾಚಾರ ನಡೆಸಿದ್ದಾರೆ.

ಇದನ್ನೂ ಓದಿ: ಮಹಿಳೆಯ ಮೇಲೆ ಅತ್ಯಾಚಾರವೆಸಗಿ,ಕೊಂದ ಆರೋಪಿಯನ್ನು ಥಳಿಸಿದ ಜನ

ಈ ಘಟನೆ ಅಕ್ಟೋಬರ್ 20ರಂದು ನಡೆದಿದ್ದರೂ, ಆ ಮಹಿಳೆ ಶುಕ್ರವಾರ ಫತೇಗಢ ಪೊಲೀಸ್ ಠಾಣೆಗೆ ದೂರು ನೀಡಿದಾಗ ಇದು ಬೆಳಕಿಗೆ ಬಂದಿದೆ. ಆ ಮಹಿಳೆ ತಾನು ಮದುವೆಯಾಗಬೇಕಿದ್ದ ವರನ ಜೊತೆಗೆ ಸಂಜೆ ಫತೇಗಢ್ ರಾಮ ಮಂದಿರಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

“ಮೂವರು ಅಪರಿಚಿತ ವ್ಯಕ್ತಿಗಳು ಪಿತಾಖೈ ಅರಣ್ಯದ ಬಳಿ ಇಬ್ಬರನ್ನು ಅಡ್ಡಗಟ್ಟಿ ಬಲವಂತವಾಗಿ ಕಾಡಿಗೆ ಕರೆದೊಯ್ದು ಆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿ ವ್ಯಕ್ತಿಗಳು ಘಟನೆಯನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಆ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: 9ನೇ ಕ್ಲಾಸ್ ಬಾಲಕಿಯ ಕುತ್ತಿಗೆಗೆ ದುಪಟ್ಟಾ ಬಿಗಿದು ಮೂವರು ಬಾಲಕರಿಂದ ಅತ್ಯಾಚಾರ

ಈ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಆಕೆಯ ವೈದ್ಯಕೀಯ ಪರೀಕ್ಷೆಯನ್ನು ಸಹ ಮಾಡಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ