AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ಟ್ರಕ್ ಕಂದಕಕ್ಕೆ ಉರುಳಿ 22 ಕಾರ್ಮಿಕರು ಸಾವು

ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯಿಂದ ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಅರುಣಾಚಲ ಪ್ರದೇಶದ ಭಾರತ-ಚೀನಾ ಗಡಿಯ ಬಳಿ ಕಮರಿಗೆ ಬಿದ್ದಿದೆ. ಇದರ ಪರಿಣಾಮವಾಗಿ 22 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ತಂಡಗಳು ಇಲ್ಲಿಯವರೆಗೆ 13 ಶವಗಳನ್ನು ಹೊರತೆಗೆದಿವೆ. ಈ ಭೂಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅರುಣಾಚಲದ ಹಯುಲಿಯಾಂಗ್-ಚಾಗ್ಲಗಂ ರಸ್ತೆಯಲ್ಲಿ ಈ ಅಪಘಾತ ವರದಿಯಾಗಿದೆ.

ಅರುಣಾಚಲ ಪ್ರದೇಶದಲ್ಲಿ ಟ್ರಕ್ ಕಂದಕಕ್ಕೆ ಉರುಳಿ 22 ಕಾರ್ಮಿಕರು ಸಾವು
Arunachal Pradesh Truck Accident
ಸುಷ್ಮಾ ಚಕ್ರೆ
|

Updated on: Dec 11, 2025 | 4:26 PM

Share

ಇಟಾನಗರ, ಡಿಸೆಂಬರ್ 11: ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯಿಂದ ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಇಂದು (ಗುರುವಾರ) ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಕಂದಕಕ್ಕೆ ಉರುಳಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ. ಟ್ರಕ್ (Truck Accident) ಬೆಟ್ಟದ ರಸ್ತೆಯಿಂದ ಜಾರಿ ಸುಮಾರು 1,000 ಅಡಿಗಳಷ್ಟು ಕಡಿದಾದ ಕಮರಿಗೆ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಟಿನ್ಸುಕಿಯಾದ ಗೆಲಾಪುಖುರಿ ಟೀ ಎಸ್ಟೇಟ್‌ನ ಕಾರ್ಮಿಕರು ಕೆಲಸಕ್ಕಾಗಿ ಹಯುಲಿಯಾಂಗ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ನಡೆದಿದೆ. ಇನ್ನೂ ಎಲ್ಲ ಮೃತದೇಹಗಳನ್ನು ಹೊರತೆಗೆದಿಲ್ಲ. ಆದರೆ ಅವರೆಲ್ಲರೂ ಮೃತರಾಗಿದ್ದಾರೆ ಎನ್ನಲಾಗಿದೆ.

ಗುಡ್ಡಗಾಡು ಪ್ರದೇಶದ ಮೂಲಕ ಹೋಗುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದಾಗ ಈ ಅಪಘಾತ ಸಂಭವಿಸಿದೆ. ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿದವು. ಸ್ಥಳೀಯ ಅಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಆ ಟ್ರಕ್​​ನಲ್ಲಿದ್ದವರನ್ನು ಹುಡುಕಲು ಆ ಸ್ಥಳಕ್ಕೆ ತಲುಪಿದ್ದಾರೆ.

ಇದನ್ನೂ ಓದಿ: ದೇವನಹಳ್ಳಿ: ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಡಿಸೆಂಬರ್ 7ರಂದು ಇದೇ ರೀತಿಯ ಮತ್ತೊಂದು ಘಟನೆ ನಡೆದಿತ್ತು. ನಾಸಿಕ್‌ನ ಕಲ್ವಾನ್ ತಾಲ್ಲೂಕಿನ ಸಪ್ತಶ್ರಿಂಗ್ ಗರ್ ಘಾಟ್‌ನಲ್ಲಿ ಕಾರು 600 ಅಡಿ ಆಳದ ಕಂದಕಕ್ಕೆ ಬಿದ್ದು 6 ಜನರು ಸಾವನ್ನಪ್ಪಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು