ತಮಿಳುನಾಡು: ಕಬಡ್ಡಿ ಆಡುತ್ತಿದ್ದಾಗ ಹೃದಯಾಘಾತದಿಂದ 22ರ ಹರೆಯದ ಯುವಕ ಸಾವು

ಮೃತ ವಿಮಲ್‌ರಾಜ್ ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್‌ಸಿ ಪ್ರಾಣಿಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ

ತಮಿಳುನಾಡು: ಕಬಡ್ಡಿ ಆಡುತ್ತಿದ್ದಾಗ ಹೃದಯಾಘಾತದಿಂದ 22ರ ಹರೆಯದ ಯುವಕ ಸಾವು
ಸಾಂಕೇತಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 26, 2022 | 7:36 PM

22ರ ಹರೆಯದ ವಿದ್ಯಾರ್ಥಿಯೊಬ್ಬ ಭಾನುವಾರ ರಾತ್ರಿ ಪನ್ರುತಿ ಸಮೀಪದ ಮನಡಿಕುಪ್ಪಂನಲ್ಲಿ ಕಬಡ್ಡಿ (kabaddi) ಆಡುತ್ತಿದ್ದಾಗ ಹೃದಯಾಘಾತದಿಂದ (heart attack) ಮೃತಪಟ್ಟಿದ್ದಾನೆ. ಮೃತ ವಿಮಲ್‌ರಾಜ್ ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್‌ಸಿ ಪ್ರಾಣಿಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಡಲೂರು ಜಿಲ್ಲೆಯ ಕಡಂಪುಲಿಯೂರು ಸಮೀಪದ ಪುರಂಗಿಣಿ ಗ್ರಾಮದವರಾದ ವಿಮಲ್‌ರಾಜ್ ಅವರು ಮನ್ನಾಡಿಕುಪ್ಪಂನಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮುರಟ್ಟು ಕಾಳೈ ತಂಡದ ಪರ ಆಡುತ್ತಿದ್ದರು. ಆಗ ಅವರು ಹಠಾತ್ತನೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಪನ್ರುತಿ ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವಿಲ್ಲುಪುರಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ. ಕಡಂಪುಲಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.