ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ, 23 ಸೇನಾ ಸಿಬ್ಬಂದಿ ನಾಪತ್ತೆ

ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ ಸಂಭವಿಸಿದ್ದು, 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ, 23 ಸೇನಾ ಸಿಬ್ಬಂದಿ ನಾಪತ್ತೆ
ಪ್ರವಾಹImage Credit source: Madhyamam
Follow us
ನಯನಾ ರಾಜೀವ್
|

Updated on:Oct 04, 2023 | 10:06 AM

ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ ಸಂಭವಿಸಿದ್ದು, 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ, ಪ್ರವಾಹದ ನಂತರ ಚುಂಗ್‌ಥಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೆಳಭಾಗದ ಪ್ರದೇಶಗಳಲ್ಲಿ ನೀರಿನ ಮಟ್ಟ ಇದ್ದಕ್ಕಿದ್ದಂತೆ 15-20 ಅಡಿ ಎತ್ತರಕ್ಕೆ ಏರಿದೆ ಎಂದು ವರದಿಯಾಗಿದೆ.

ಸಿಂಘ್‌ಥಾಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಮುಳುಗಿವೆ. ಇದಲ್ಲದೇ 23 ಸೇನಾ ಸಿಬ್ಬಂದಿಯೂ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನದಿ ಉಕ್ಕಿ ಹರಿಯುತ್ತಿರುವ ಕಾರಣ ತೀಸ್ತಾ ನದಿಯ ಮೇಲಿನ ಸಿಂಥಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಕೆಳಗಿನ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುತ್ತಿದೆ. ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ. ತೀಸ್ತಾ ನದಿಯಿಂದ ದೂರ ಇರುವಂತೆ ಜನರಿಗೆ ತಿಳಿಸಲಾಗಿದೆ.

ಮತ್ತಷ್ಟು ಓದಿ: ಲಿಬಿಯಾದಲ್ಲಿ ಡೇನಿಯನ್ ಚಂಡಮಾರುತ, ಭಾರಿ ಪ್ರವಾಹಕ್ಕೆ ಸಿಲುಕಿ 2 ಸಾವಿರಕ್ಕೂ ಅಧಿಕ ಮಂದಿ ಸಾವು, ಸಾವಿರಾರು ಮಂದಿ ನಾಪತ್ತೆ

ಮೇಘಸ್ಫೋಟಗೊಂಡು ಪ್ರವಾಹದ ಸ್ಥಿತಿ ಎದುರಾಗಿದ್ದು, ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ ಆದರೆ ಸಿಂಗ್ಟಾಮ್‌ನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಕೆಲವರು ನಾಪತ್ತೆಯಾಗಿದ್ದಾರೆ, ಅವರ ಪತ್ತೆಗೆ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ಇದೆ.

ಆಗಸ್ಟ್ 18 ರಂದು ಉತ್ತರಾಖಂಡದ ಚಮೋಲಿಯ ಥರಾಲಿ ಪ್ರದೇಶದಲ್ಲಿ ಭಾರೀ ಮಳೆಯ ನಂತರ ಮೇಘಸ್ಫೋಟ ಸಂಭವಿಸಿತ್ತು. ಣ್ಮತಿ ನದಿಯ ನೀರಿನ ಮಟ್ಟವು ಅಪಾಯದ ಮಟ್ಟವನ್ನು ಮೀರಿ ಹರಿಯಲು ಪ್ರಾರಂಭಿಸಿತು ಮತ್ತು ಪಿಂಡಾರ್ ನದಿಯೂ ಉಕ್ಕಿ ಹರಿಯಿತು. ನದಿಗಳ ನೀರು ಜನರ ಮನೆ ಹಾಗೂ ಶಿವನ ದೇವಸ್ಥಾನಕ್ಕೆ ನುಗ್ಗಿತ್ತು. ಇದರಿಂದ ಅಪಾರ ನಷ್ಟ ಉಂಟಾಗಿತ್ತು. ಹಲವು ಮನೆಗಳಿಗೆ ಹಾನಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:22 am, Wed, 4 October 23

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್