ಬೆಳಗಿನ ಜಾವ ಟ್ರಕ್ ಡಿಕ್ಕಿ: ಮತ್ತೆ ವಲಸೆ ಕಾರ್ಮಿಕರ ದುರ್ಮರಣ! ಎಲ್ಲಿ?
ಲಕ್ನೋ: ಕೊರೊನಾ ಲಾಕ್ಡೌನ್ ಸಡಿಲಿಕೆ ಮಾಡಿದ ಬಳಿಕ ವಲಸೆ ಕಾರ್ಮಿಕರ ದುರಂತಗಳ ಸರಮಾಲೆ ಇನ್ನೂ ನಿಂತಿಲ್ಲ. ಎರಡು ಟ್ರಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 21 ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ರಾಜಸ್ಥಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್ನಲ್ಲಿ ತೆರಳುತ್ತಿದ್ದರು. ಬೆಳಗಿನ ಜಾವವೇ ಜವರಾಯ ಅಟ್ಟಹಾಸ ಮೆರೆದಿದ್ದು, ಟ್ರಕ್ನಲ್ಲಿದ್ದ […]
ಲಕ್ನೋ: ಕೊರೊನಾ ಲಾಕ್ಡೌನ್ ಸಡಿಲಿಕೆ ಮಾಡಿದ ಬಳಿಕ ವಲಸೆ ಕಾರ್ಮಿಕರ ದುರಂತಗಳ ಸರಮಾಲೆ ಇನ್ನೂ ನಿಂತಿಲ್ಲ. ಎರಡು ಟ್ರಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 21 ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ರಾಜಸ್ಥಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್ನಲ್ಲಿ ತೆರಳುತ್ತಿದ್ದರು. ಬೆಳಗಿನ ಜಾವವೇ ಜವರಾಯ ಅಟ್ಟಹಾಸ ಮೆರೆದಿದ್ದು, ಟ್ರಕ್ನಲ್ಲಿದ್ದ 21 ವಲಸೆ ಕಾರ್ಮಿಕರು ಸಾವಿಗೀಡಾಗಿದ್ದಾರೆ.
Published On - 7:31 am, Sat, 16 May 20