ಬೆಳಗಿನ ಜಾವ ಟ್ರಕ್​ ಡಿಕ್ಕಿ: ಮತ್ತೆ ವಲಸೆ ಕಾರ್ಮಿಕರ ದುರ್ಮರಣ! ಎಲ್ಲಿ?

|

Updated on: May 16, 2020 | 10:15 AM

ಲಕ್ನೋ: ಕೊರೊನಾ ಲಾಕ್​ಡೌನ್​ ಸಡಿಲಿಕೆ ಮಾಡಿದ ಬಳಿಕ ವಲಸೆ ಕಾರ್ಮಿಕರ ದುರಂತಗಳ ಸರಮಾಲೆ ಇನ್ನೂ ನಿಂತಿಲ್ಲ. ಎರಡು ಟ್ರಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 21 ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾಕ್​ಡೌನ್​ ಸಡಿಲಿಕೆ ಹಿನ್ನೆಲೆಯಲ್ಲಿ ರಾಜಸ್ಥಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್​ನಲ್ಲಿ ತೆರಳುತ್ತಿದ್ದರು. ಬೆಳಗಿನ ಜಾವವೇ ಜವರಾಯ ಅಟ್ಟಹಾಸ ಮೆರೆದಿದ್ದು, ಟ್ರಕ್​ನಲ್ಲಿದ್ದ […]

ಬೆಳಗಿನ ಜಾವ ಟ್ರಕ್​ ಡಿಕ್ಕಿ: ಮತ್ತೆ ವಲಸೆ ಕಾರ್ಮಿಕರ ದುರ್ಮರಣ! ಎಲ್ಲಿ?
Follow us on

ಲಕ್ನೋ: ಕೊರೊನಾ ಲಾಕ್​ಡೌನ್​ ಸಡಿಲಿಕೆ ಮಾಡಿದ ಬಳಿಕ ವಲಸೆ ಕಾರ್ಮಿಕರ ದುರಂತಗಳ ಸರಮಾಲೆ ಇನ್ನೂ ನಿಂತಿಲ್ಲ. ಎರಡು ಟ್ರಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 21 ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲಾಕ್​ಡೌನ್​ ಸಡಿಲಿಕೆ ಹಿನ್ನೆಲೆಯಲ್ಲಿ ರಾಜಸ್ಥಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್​ನಲ್ಲಿ ತೆರಳುತ್ತಿದ್ದರು. ಬೆಳಗಿನ ಜಾವವೇ ಜವರಾಯ ಅಟ್ಟಹಾಸ ಮೆರೆದಿದ್ದು, ಟ್ರಕ್​ನಲ್ಲಿದ್ದ 21 ವಲಸೆ ಕಾರ್ಮಿಕರು ಸಾವಿಗೀಡಾಗಿದ್ದಾರೆ.

Published On - 7:31 am, Sat, 16 May 20