ಪಾಸ್‌ಪೋರ್ಟ್ ಹಗರಣದಲ್ಲಿ 24 ಮಂದಿ ಸರ್ಕಾರಿ ಅಧಿಕಾರಿಗಳ ಬಂಧನ, 50 ಸ್ಥಳಗಳಲ್ಲಿ ಸಿಬಿಐ ಶೋಧ

|

Updated on: Oct 14, 2023 | 1:05 PM

ನಕಲಿ ದಾಖಲೆಯ ಆಧಾರದ ಮೇಲೆ ಪಾಸ್​​​ಪೋರ್ಟ್​​ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ (Central Bureau of Investigation) ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಗ್ಯಾಂಗ್​​ಟಾಕ್​​​ನ 20 ಪ್ರದೇಶಗಳ ಮೇಲೆ ದಾಳಿ ಮಾಡಿದ್ದಾರೆ. ಜತೆಗೆ ಸರ್ಕಾರಿ ಅಧಿಕಾರಿಗಳು ಹಾಗೂ ಖಾಸಗಿ ಕಂಪನಿಗಳ ವ್ಯಕ್ತಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಇಂದು (ಅ.14) ಬಂಧಿಸಲಾಗಿದೆ. ಗ್ಯಾಂಗ್‌ಟಾಕ್‌ನಲ್ಲಿ ನಿಯೋಜಿಸಲಾದ ಅಧಿಕಾರಿ ಮತ್ತು ಮಧ್ಯವರ್ತಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಸ್‌ಪೋರ್ಟ್ ಹಗರಣದಲ್ಲಿ 24 ಮಂದಿ ಸರ್ಕಾರಿ ಅಧಿಕಾರಿಗಳ ಬಂಧನ, 50 ಸ್ಥಳಗಳಲ್ಲಿ ಸಿಬಿಐ ಶೋಧ
ಸಾಂದರ್ಭಿಕ ಚಿತ್ರ
Follow us on

ಪಶ್ಚಿಮ ಬಂಗಾಳ, ಅ.14: ನಕಲಿ ದಾಖಲೆಯ ಆಧಾರದ ಮೇಲೆ ಪಾಸ್​​​ಪೋರ್ಟ್​​ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ (Central Bureau of Investigation) ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಗ್ಯಾಂಗ್​​ಟಾಕ್​​​ನ 20 ಪ್ರದೇಶಗಳ ಮೇಲೆ ದಾಳಿ ಮಾಡಿದ್ದಾರೆ. ಜತೆಗೆ ಸರ್ಕಾರಿ ಅಧಿಕಾರಿಗಳು ಹಾಗೂ ಖಾಸಗಿ ಕಂಪನಿಗಳ ವ್ಯಕ್ತಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಇಂದು (ಅ.14) ಬಂಧಿಸಲಾಗಿದೆ. ಗ್ಯಾಂಗ್‌ಟಾಕ್‌ನಲ್ಲಿ ನಿಯೋಜಿಸಲಾದ ಅಧಿಕಾರಿ ಮತ್ತು ಮಧ್ಯವರ್ತಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಣಕ್ಕೆ ಆಸೆಪಟ್ಟು ಈ ಅಧಿಕಾರಿಗಳು ಮತ್ತು ವ್ಯಕ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೆಲವರಿಗೆ ಪಾಸ್​​​ಪೋರ್ಟ್ ನೀಡಿದ್ದಾರೆ. ಈ ಕಾರಣಕ್ಕೆ 16 ಸರ್ಕಾರಿ ಅಧಿಕಾರಿಗಳು ಸೇರಿದಂತೆ 24 ಮಂದಿಯನ್ನು ಬಂಧಿಸಲಾಗಿದೆ. ಇದೀಗ ಸಿಬಿಐ ಕೋಲ್ಕತ್ತಾ, ಸಿಲಿಗುರಿ, ಗ್ಯಾಂಗ್ಟಾಕ್ ಮತ್ತು ಇತರ ಸ್ಥಳಗಳಲ್ಲಿ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ. ಈ 24 ಮಂದಿಯ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ:ಉದ್ಯೋಗ ಹಗರಣ: ಬಿಜೆಪಿ ಶಾಸಕ ಪಾರ್ಥಸಾರಥಿ ಚಟರ್ಜಿ ಮನೆಯಲ್ಲಿ ಸಿಬಿಐ ಶೋಧ

ಇದಕ್ಕೂ ಮುನ್ನ 2002ರಲ್ಲಿ ಇಬ್ಬರು ಸೌದಿ ಅರೇಬಿಯಾದ ರಾಯಭಾರಿ ಕಚೇರಿಯ ನಕಲಿ ಪಾಸ್‌ಪೋರ್ಟ್‌ಗಳು, ವೀಸಾ ಸ್ಟಿಕ್ಕರ್‌ಗಳು ಮತ್ತು ರಬ್ಬರ್ ಸ್ಟ್ಯಾಂಪ್‌ಗಳನ್ನು ಹೊಂದಿದ್ದರು ಎಂಬ ಆರೋಪದ ಮೇಲೆ ಬಂಧಿಸಲಾಗಿತ್ತು. ಆದರೆ ಇದೀಗ ಅವರನ್ನು ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ. ದೇಶದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಜೀತ್ ನಾರಾಯಣ್ ಅವರು ಆರೋಪಿಗಳಾಗಿದ್ದ ಸುಲೇಮಾನ್ ಖಾನ್ ಮತ್ತು ಹಸಿಬುಲ್ ರೆಹಮಾನ್ ವಿರುದ್ಧ 2002ರಲ್ಲಿ ಫಾರ್ಷ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ