ಗುಜರಾತ್‌ನ ರಾಸಾಯನಿಕ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 24 ಕಾರ್ಮಿಕರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶೇಖರಣಾ ಟ್ಯಾಂಕರ್‌ನಲ್ಲಿ ಸ್ಫೋಟ ಸಂಭವಿಸಿದ ನಂತರ ಗುಜರಾತ್‌ನ ಸೂರತ್ ನಗರದ ರಾಸಾಯನಿಕ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ 24 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಎಎನ್‌ಐ ವರದಿ ಮಾಡಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳ ಹಾಗೂ ಖಾಸಗಿ ಕಂಪನಿಗಳ ಹತ್ತಕ್ಕೂ ಹೆಚ್ಚು ವಾಹನಗಳು ಸ್ಥಳದಲ್ಲಿದ್ದವು.
ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:07 am, Wed, 29 November 23