ಸೆರಮ್ ಇನ್​ಸ್ಟಿಟ್ಯೂಟ್ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ

ಮಧ್ಯಾಹ್ನ 2 ಗಂಟೆ ಸುಮಾರಿಗೆ  ಸೆರಮ್ ಸಂಸ್ಥೆಯ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಕಟ್ಟಡದಲ್ಲಿ ಸಿಲುಕಿದ್ದವರ ಪೈಕಿ ಐವರು ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

  • TV9 Web Team
  • Published On - 21:56 PM, 21 Jan 2021
ಸೆರಮ್ ಇನ್ಸ್​ಟಿಟ್ಯೂಟ್​ನಲ್ಲಿ ಅಗ್ನಿ ಅವಘಡ

ಮುಂಬೈ: ಕೊವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಪುಣೆಯ ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದ ಕಟ್ಟಡದಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ಐವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ  ಸೆರಮ್ ಸಂಸ್ಥೆಯ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಕಟ್ಟಡದಲ್ಲಿ ಸಿಲುಕಿದ್ದವರ ಪೈಕಿ ಐವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿದ್ದರು. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಸೆರಮ್ ಇನ್ಸ್​ಟಿಟ್ಯೂಟ್ ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಮಹಾ ಸಿಎಂ ಟ್ವೀಟ್​
ಸೆರಮ್ ಇನ್ಸ್​ಟಿಟ್ಯೂಟ್​ನಲ್ಲಿ ಅಗ್ನಿ ಆಕಸ್ಮಿಕ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ಟ್ವೀಟ್​ ಮಾಡಿದ್ದಾರೆ. ಅಗ್ನಿ ಅವಘಡದಲ್ಲಿ 6 ಜನರನ್ನು ರಕ್ಷಣೆ ಮಾಡಲಾಗಿದೆ. ಶಾರ್ಟ್​ ​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರುವ ಸಾಧ್ಯತೆ ಇದೆ. ಕೋವಿಡ್ ಲಸಿಕೆ ಸುರಕ್ಷಿತವಾಗಿದೆ ಎಂದಿದ್ದಾರೆ.

ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ- ಮೋದಿ
ಸೆರಮ್ ಇನ್ಸ್​ಟಿಟ್ಯೂಟ್ ಅಗ್ನಿ ಅವಡಘದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಅಗ್ನಿ ಅವಘಡದಿಂದಾಗಿ ಪ್ರಾಣಹಾನಿ ಆಗಿದ್ದು ದುರದೃಷ್ಟಕರ. ಮೃತಪಟ್ಟವರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್​ ಮಾಡಿದ್ದಾರೆ. ಇದರ ಜೊತೆ ರಾಷ್ಟ್ರಪತಿ ರಾಮನಾಥ ಕೋವಿಂದ ಕೂಡ ಟ್ವೀಟ್​ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಸೆರಮ್ ಇನ್ಸ್​ಟಿಟ್ಯೂಟ್ ಅಗ್ನಿ ದುರಂತ: ಐವರ ಸಾವು, ಕೆಲವರ ಸ್ಥಿತಿ ಗಂಭೀರ