ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 25 ಒಮಿಕ್ರಾನ್ ಪ್ರಕರಣಗಳು ಪತ್ತೆ, ಎಲ್ಲ ಪ್ರಕರಣಗಳು ಸೌಮ್ಯ ಲಕ್ಷಣದ್ದು: ಕೇಂದ್ರ ಆರೋಗ್ಯ ಸಚಿವಾಲಯ

Omicron ನವೆಂಬರ್ 24 ರವರೆಗೆ 2 ದೇಶಗಳಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗಿತ್ತು. ಈಗ 59 ದೇಶಗಳಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಈ 59 ದೇಶಗಳಲ್ಲಿ 2,936 ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಇದಲ್ಲದೇ 78,054 ಸಂಭವನೀಯ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 25 ಒಮಿಕ್ರಾನ್ ಪ್ರಕರಣಗಳು ಪತ್ತೆ, ಎಲ್ಲ ಪ್ರಕರಣಗಳು ಸೌಮ್ಯ ಲಕ್ಷಣದ್ದು: ಕೇಂದ್ರ  ಆರೋಗ್ಯ ಸಚಿವಾಲಯ
ಲವ್ ಅಗರ್ವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 10, 2021 | 5:03 PM

ದೆಹಲಿ: ದೇಶದಲ್ಲಿ ಇದುವರೆಗೆ ಒಟ್ಟು 25 ಒಮಿಕ್ರಾನ್ (Omicron) ಪ್ರಕರಣಗಳು ಪತ್ತೆಯಾಗಿವೆ. ಪತ್ತೆಯಾದ ಎಲ್ಲಾ ಪ್ರಕರಣಗಳು ಸೌಮ್ಯ ಲಕ್ಷಣಗಳನ್ನು ಹೊಂದಿವೆ. ಇವುಗಳಲ್ಲಿ ಶೇ 0.04ಕ್ಕಿಂತ ಕಡಿಮೆ ರೂಪಾಂತರಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ (Union Health Ministry) ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ (Lav Agarwal) ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಕಳೆದ ವಾರ ದೇಶದಲ್ಲಿ ಒಟ್ಟಾರೆ ಧನಾತ್ಮಕತೆಯ ದರ ಶೇ 0.73 ಆಗಿತ್ತು. ಕಳೆದ 14 ದಿನಗಳಲ್ಲಿ 10,000 ಕ್ಕಿಂತ ಕಡಿಮೆ ಪ್ರಕರಣಗಳು ವರದಿ ಆಗಿವೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳಿದ್ದು ಮೊದಲು ಶೇ 43ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳು ಮತ್ತು ನಂತರ ಶೇ10 ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಅವರು ಹೇಳಿದ್ದಾರೆ. ನವೆಂಬರ್ 24 ರವರೆಗೆ 2 ದೇಶಗಳಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗಿತ್ತು. ಈಗ 59 ದೇಶಗಳಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಈ 59 ದೇಶಗಳಲ್ಲಿ 2,936 ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಇದಲ್ಲದೇ 78,054 ಸಂಭವನೀಯ ಪ್ರಕರಣಗಳು ಪತ್ತೆಯಾಗಿವೆ.ಅವುಗಳ ಜೀನೋಮ್ ಸೀಕ್ವೆನ್ಸಿಂಗ್ ನಡೆಯುತ್ತಿದೆ.  ವ್ಯಾಕ್ಸಿನೇಷನ್ ಜೊತೆಗೆ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ನಿರಂತರವಾಗಿ ಅನುಸರಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ . ಸಾಕಷ್ಟು ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು. ಸಾರ್ವಜನಿಕ ಆರೋಗ್ಯ ಕ್ರಮಗಳಲ್ಲಿನ ಸಡಿಲತೆ ಯುರೋಪ್‌ನಲ್ಲಿ ಪ್ರಕರಣಗಳ ಉಲ್ಬಣಕ್ಕೆ ಕಾರಣ ಎಂದು ಅಗರ್ವಾಲ್ ಹೇಳಿದ್ದಾರೆ.

ಕಣ್ಗಾವಲು, ಪರಿಣಾಮಕಾರಿ ತಪಾಸಣೆ, ಅಂತರಾಷ್ಟ್ರೀಯ ಪ್ರಯಾಣಿಕರ ಮೇಲ್ವಿಚಾರಣೆ ಮತ್ತು ಆರೋಗ್ಯ ಮೂಲಸೌಕರ್ಯ ಉನ್ನತೀಕರಣವನ್ನು ಮಾಡಲಾಗುತ್ತಿದೆ. ತಮ್ಮ ಕಣ್ಗಾವಲು ಹೆಚ್ಚಿಸಲು ಮತ್ತು ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಸಕ್ರಿಯವಾಗಿ ಪರೀಕ್ಷಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ.

ಒಮಿಕ್ರಾನ್ ಮೇಲೆ ಕೇಂದ್ರೀಕರಿಸಿ ಭಾರತದಲ್ಲಿ ಜಾಗತಿಕ ಸನ್ನಿವೇಶ ಮತ್ತು ಕೊವಿಡ್ ದೃಶ್ಯವನ್ನು ವೀಕ್ಷಿಸಲು ನಿಯಮಿತ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಆತಂಕ  ಹರಡದಿರಲು ನಮಗೆ ಸಹಾಯ ಬೇಕು. ಶೇ 5 ಕ್ಕಿಂತ ಹೆಚ್ಚು ಸಕಾರಾತ್ಮಕತೆ ಇದ್ದಲ್ಲಿ ಜಿಲ್ಲಾ ಮಟ್ಟದ ನಿರ್ಬಂಧಗಳನ್ನು ಜಾರಿಗೊಳಿಸಲಾಗುವುದು ಎಂದು ಐಸಿಎಂಆರ್ ಮಹಾ ನಿರ್ದೇಶಕ  ಬಲರಾಮ್ ಭಾರ್ಗವ  ಹೇಳಿದ್ದಾರೆ.

ರಕ್ಷಣೆಯ ಸಾಮರ್ಥ್ಯಕ್ಕೆ ಸಂಬಂಧಿಸಿದಂತೆ ನಾವು ಈಗ ಅಪಾಯಕಾರಿ ಮತ್ತು ಸ್ವೀಕಾರಾರ್ಹವಲ್ಲದ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ಮಾಸ್ಕ್ ಬಳಕೆ ಕಡಿಮೆಯಾಗುತ್ತಿದೆ. ಲಸಿಕೆಗಳು ಮತ್ತು ಮಾಸ್ಕ್ ಎರಡೂ ಮುಖ್ಯವೆಂದು ನಾವು ನೆನಪಿನಲ್ಲಿಡಬೇಕು. ಜಾಗತಿಕ ಪರಿಸ್ಥಿತಿಯಿಂದ ನಾವು ಕಲಿಯಬೇಕು ಎಂದು ನೀತಿ ಆಯೋಗ್ಯ (ಆರೋಗ್ಯ) ಸದಸ್ಯ ಡಾ ವಿಕೆ ಪೌಲ್ ಹೇಳಿದ್ದಾರೆ.

ಧಾರಾವಿ ಮತ್ತು ಗುಜರಾತ್​ನಲ್ಲಿ ಒಮಿಕ್ರಾನ್ ಪ್ರಕರಣ ಪತ್ತೆ

ಮುಂಬೈನ ಧಾರಾವಿ ಪ್ರದೇಶದಲ್ಲಿ ಒಮಿಕ್ರಾನ್  ಪ್ರಕರಣ ಪತ್ತೆಯಾಗಿದೆ. ವ್ಯಕ್ತಿ ತಾಂಜಾನಿಯಾದಿಂದ ಹಿಂದಿರುಗಿದ್ದರು. ಈಗ ಸೆವೆನ್‌ಹಿಲ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಹೇಳಿದೆ.

ಗುಜರಾತ್‌ನಲ್ಲಿ ಶುಕ್ರವಾರದಂದು ಗುಜರಾತ್‌ನಲ್ಲಿ ಎರಡು ಒಮಿಕ್ರಾನ್  ಪ್ರಕರಣಗಳು ವರದಿಯಾಗಿದೆ. ಕೊವಿಡ್‌ನ ಒಮಿಕ್ರಾನ್ ರೂಪಾಂತರದಿಂದ ಸೋಂಕಿಗೆ ಒಳಗಾಗಿದ್ದ ಎನ್‌ಆರ್‌ಐ ವ್ಯಕ್ತಿಯ ಪತ್ನಿ ಮತ್ತು ಸೋದರ ಮಾವ -19 ವಾರದ ಹಿಂದೆ ಗುಜರಾತ್‌ನ ಜಾಮ್‌ನಗರದಲ್ಲಿ ಪತ್ತೆಯಾಗಿದ್ದಾರೆ  ಎಂದು ಜಾಮ್‌ನಗರ ಮುನ್ಸಿಪಲ್ ಕಾರ್ಪೊರೇಷನ್ (ಜೆಎಂಸಿ) ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ,ಗುಜರಾತ್‌ನಲ್ಲಿ ಈಗ ಒಮಿಕ್ರಾನ್‌ ಸೋಂಕಿತರ ಸಂಖ್ಯೆ ಮೂರು ಆಗಿದೆ.

ಶುಕ್ರವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಒಂದು ದಿನದಲ್ಲಿ 8,503 ಜನರು ಕೊರೊನಾ ಪಾಸಿಟಿವ್ ಆಗಿದ್ದು ಭಾರತದ ಕೊವಿಡ್ ಪ್ರಕರಣಗಳ ಸಂಖ್ಯೆ 3,46,74,744 ಕ್ಕೆ ಏರಿದೆ ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 94,943 ಆಗಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಮಾಹಿತಿಯ ಪ್ರಕಾರ, 624 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 4,74,735 ಕ್ಕೆ ಏರಿದೆ. ಕಳೆದ 43 ದಿನಗಳಿಂದ ಹೊಸ ಕೊರೊನಾವೈರಸ್ ಸೋಂಕುಗಳ ದೈನಂದಿನ ಹೆಚ್ಚಳವು 15,000 ಕ್ಕಿಂತ ಕಡಿಮೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 94,943 ಕ್ಕೆ ಏರಿದೆ. ಇದು ಒಟ್ಟು ಸೋಂಕುಗಳ 0.27 ಪ್ರತಿಶತವನ್ನು ಒಳಗೊಂಡಿದೆ. ರಾಷ್ಟ್ರೀಯ ಕೊವಿಡ್ -19 ಚೇತರಿಕೆ ದರವು 98.36 ಪ್ರತಿಶತದಷ್ಟು ದಾಖಲಾಗಿದೆ, ಇದು ಮಾರ್ಚ್ 2020 ರಿಂದ ಅತಿ ಹೆಚ್ಚು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಕೊವಿಡ್ ಲಸಿಕೆ ಅರ್ಹ ಜನಸಂಖ್ಯೆಯ ಶೇ 86 ಮಂದಿಗೆ 1ನೇ ಡೋಸ್ ನೀಡಲಾಗಿದೆ: ಕೇಂದ್ರ ಆರೋಗ್ಯ ಸಚಿವ

Published On - 4:44 pm, Fri, 10 December 21

ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ