AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದನ್ನು ತಡೆದಿದ್ದಕ್ಕೆ ಅಮೆರಿಕದಲ್ಲಿ ಭಾರತೀಯನ ಕೊಲೆ

ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುವುದನ್ನು ತಡೆದ ಕಾರಣಕ್ಕೆ ಅಮೆರಿಕದಲ್ಲಿ ಹರಿಯಾಣದ 26 ವರ್ಷದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಘಟನೆಯಲ್ಲಿ ಮಧ್ಯಪ್ರವೇಶಿಸಿದ ನಂತರ ಹರಿಯಾಣದ ಜಿಂದ್‌ನ ಕಪಿಲ್ ಎಂಬಾತನ ಮೇಲೆ ಕ್ಯಾಲಿಫೋರ್ನಿಯಾದಲ್ಲಿ ಗುಂಡು ಹಾರಿಸಲಾಗಿದೆ. ಈ ಪ್ರಕರಣದಲ್ಲಿ ಶಂಕಿತ ವ್ಯಕ್ತಿಯನ್ನು ಅಮೆರಿಕದ ಅಧಿಕಾರಿಗಳು ಇನ್ನೂ ಬಂಧಿಸಿಲ್ಲ.

ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದನ್ನು ತಡೆದಿದ್ದಕ್ಕೆ ಅಮೆರಿಕದಲ್ಲಿ ಭಾರತೀಯನ ಕೊಲೆ
Kapil
ಸುಷ್ಮಾ ಚಕ್ರೆ
|

Updated on: Sep 08, 2025 | 4:06 PM

Share

ವಾಷಿಂಗ್ಟನ್, ಸೆಪ್ಟೆಂಬರ್ 8: ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹರಿಯಾಣದ (Haryana) ಜಿಂದ್ ಜಿಲ್ಲೆಯ 26 ವರ್ಷದ ಕಪಿಲ್ ಎಂಬ ವ್ಯಕ್ತಿಯನ್ನು ಲಾಸ್ ಏಂಜಲೀಸ್‌ನಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಜಿಂದ್‌ನ ಬ್ರಾಹ್ ಕಲಾನ್ ನಿವಾಸಿ ಕಪಿಲ್ ಮೃತ ವ್ಯಕ್ತಿಯಾಗಿದ್ದು, ಅವರು ಅಮೆರಿಕದ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ಜಿಂದ್‌ನ ಪಿಲ್ಲು ಖೇರಾದಲ್ಲಿ ಟ್ರ್ಯಾಕ್ಟರ್ ಏಜೆನ್ಸಿ ನಡೆಸುತ್ತಿರುವ ಮೃತ ಕಪಿಲ್ ಅವರ ಚಿಕ್ಕಪ್ಪ ರಮೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ನಮ್ಮ ಮನೆಯ ಕಪಿಲ್ ಲಾಸ್ ಏಂಜಲೀಸ್‌ನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಸಂಜೆ ಅವರ ಸಾವಿನ ಸುದ್ದಿ ನಮಗೆ ತಲುಪಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ

“ಕಪಿಲ್ ಸಾವಿನ ಬಗ್ಗೆ ನಮಗೆ ಅಮೆರಿಕದ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಸಿಕ್ಕಿದೆ. ಕಪಿಲ್ ತನ್ನ ಅಂಗಡಿಯ ಬಳಿಯ ರಸ್ತೆಯಲ್ಲಿ ಮೂತ್ರ ವಿಸರ್ಜಿಸದಂತೆ ಅಮೆರಿಕದ ಪ್ರಜೆಯೊಬ್ಬರನ್ನು ಕೇಳಿಕೊಂಡಿದ್ದಾನೆ. ನಂತರ ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಅಲ್ಲಿನ ಪೊಲೀಸರು ನಮಗೆ ತಿಳಿಸಿದ್ದಾರೆ” ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

“ಮಾತಿನ ಚಕಮಕಿ ನಡೆದ ನಂತರ ಅಲ್ಲಿನ ಸ್ಥಳೀಯ ವ್ಯಕ್ತಿ ತನ್ನ ಪಿಸ್ತೂಲನ್ನು ತೆಗೆದುಕೊಂಡು ಕಪಿಲ್ ಮೇಲೆ ಗುಂಡು ಹಾರಿಸಿದ. ಕಪಿಲ್​ನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸತ್ತಿದ್ದಾರೆ ಎಂದು ಘೋಷಿಸಿದರು” ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ದಕ್ಷಿಣ ಕೊರಿಯಾದಲ್ಲಿ ಚೀನಾ ಅಧ್ಯಕ್ಷ ಜಿನ್​​ಪಿಂಗ್​​ರನ್ನು ಭೇಟಿಯಾಗಲಿದ್ದಾರೆ ಅಮೆರಿಕ ಅಧ್ಯಕ್ಷ ಟ್ರಂಪ್

ಎರಡು ದಿನಗಳ ಕಾಲ ಅಮೆರಿಕದಲ್ಲಿ ರಜೆ ಇರುವುದರಿಂದ ಬುಧವಾರ ಕಪಿಲ್​ನ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಕಪಿಲ್ ಅವರ ಮೃತದೇಹವನ್ನು ಅವರ ಊರಿಗೆ ತರಲು 15 ಲಕ್ಷ ರೂ. ಪಾವತಿಸಬೇಕಾಗುತ್ತದೆ.

ಅಮೆರಿಕದ ಅಧಿಕಾರಿಗಳು ಇನ್ನೂ ಶಂಕಿತನ ಹೆಸರನ್ನು ಬಿಡುಗಡೆ ಮಾಡಿಲ್ಲ ಅಥವಾ ಯಾರನ್ನಾದರೂ ಈ ಪ್ರಕರಣದಲ್ಲಿ ಬಂಧಿಸಲಾಗಿದೆಯೇ ಎಂಬ ಬಗ್ಗೆ ತಿಳಿಸಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್