ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 275 ಮಂದಿ ಸಾವು; ಸರ್ಕಾರದಿಂದ ಅಧಿಕೃತ ಘೋಷಣೆ

ಗುಜರಾತಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನವು ವೈದ್ಯಕೀಯ ಕಾಲೇಜು ಹಾಸ್ಟೆಲ್‌ಗೆ ಅಪ್ಪಳಿಸಿತು. ಮೃತರಲ್ಲಿ 241 ಮಂದಿ ಬೋಯಿಂಗ್ 787-8 ಡ್ರೀಮ್‌ಲೈನರ್‌ನಲ್ಲಿದ್ದರೆ, 34 ಮಂದಿ ನೆಲದ ಮೇಲೆ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಮಾನವು ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು ಮತ್ತು ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು.

ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 275 ಮಂದಿ ಸಾವು; ಸರ್ಕಾರದಿಂದ ಅಧಿಕೃತ ಘೋಷಣೆ
Plane Crash In Ahmedabad

Updated on: Jun 24, 2025 | 10:11 PM

ನವದೆಹಲಿ, ಜೂನ್ 24: ಜೂನ್ 12ರಂದು ಗುಜರಾತ್​​ನ ಅಹಮದಾಬಾದ್‌ನಲ್ಲಿ (Ahmedabad Plane Crash) ಸಂಭವಿಸಿದ ಏರ್ ಇಂಡಿಯಾ (Air India) ವಿಮಾನ ಅಪಘಾತದಲ್ಲಿ 275 ಜನರು ಸಾವನ್ನಪ್ಪಿದ್ದಾರೆ ಎಂದು ಗುಜರಾತ್ ಆರೋಗ್ಯ ಇಲಾಖೆ ಇಂದು ದೃಢಪಡಿಸಿದೆ. ಈ ಘಟನೆಯ ನಂತರ ಬಿಡುಗಡೆಯಾದ ಮೊದಲ ಅಧಿಕೃತ ಸಾವಿನ ಸಂಖ್ಯೆ ಇದು. ಅಧಿಕಾರಿಗಳ ಪ್ರಕಾರ, ಮೃತರಲ್ಲಿ 241 ಮಂದಿ ಬೋಯಿಂಗ್ 787-8 ಡ್ರೀಮ್‌ಲೈನರ್‌ನಲ್ಲಿದ್ದರೆ, ಈ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವೈದ್ಯಕೀಯ ಕಾಲೇಜು ಹಾಸ್ಟೆಲ್‌ಗೆ ಅಪ್ಪಳಿಸಿದಾಗ ಅಲ್ಲಿದ್ದ 34 ಮಂದಿ ಕೂಡ ಸಾವನ್ನಪ್ಪಿದ್ದಾರೆ. ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಈ ವಿಮಾನವು ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು.

ಕೆಲವು ಶವಗಳ ಡಿಎನ್‌ಎ ಗುರುತಿಸುವಿಕೆ ಇನ್ನೂ ಪ್ರಗತಿಯಲ್ಲಿದೆ. ಆದರೆ ಒಂದನ್ನು ಹೊರತುಪಡಿಸಿ ಉಳಿದವುಗಳನ್ನು ಈಗ ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವು ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಎತ್ತರವನ್ನು ಕಳೆದುಕೊಂಡು ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ಗೆ ಅಪ್ಪಳಿಸಿತು. ಇದರ ಪರಿಣಾಮವಾಗಿ ದೊಡ್ಡ ಸ್ಫೋಟ ಮತ್ತು ಬೆಂಕಿ ಕಾಣಿಸಿಕೊಂಡಿತು. ಮೃತಪಟ್ಟವರನ್ನು ಗುರುತಿಸುವಲ್ಲಿ ಸಹಾಯ ಮಾಡಲು ವಿಧಿವಿಜ್ಞಾನ ತಂಡಗಳನ್ನು ನಿಯೋಜಿಸಲಾಗಿದ್ದು, ಹಲವಾರು ರಾಜ್ಯ ಸಂಸ್ಥೆಗಳು ರಕ್ಷಣಾ ಮತ್ತು ಚೇತರಿಕೆ ಕಾರ್ಯಾಚರಣೆಗಳನ್ನು ನಡೆಸಿವೆ.

ಇದನ್ನೂ ಓದಿ: Air India: ಜೂ.21ರಿಂದ ಜು.15ರವರೆಗೆ 3 ವಿದೇಶಿ ಮಾರ್ಗಗಳಲ್ಲಿ ಏರ್​ಇಂಡಿಯಾ ವಿಮಾನ ಸೇವೆ ಸ್ಥಗಿತ

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮತ್ತು ಏರ್ ಇಂಡಿಯಾ ತನಿಖೆ ಇನ್ನೂ ಪ್ರಗತಿಯಲ್ಲಿದೆ. ಅಪಘಾತದ ಕಾರಣವನ್ನು ಇನ್ನೂ ನಿರ್ಧರಿಸಲು ಸಾಧ್ಯವಿಲ್ಲ. ಆರೋಗ್ಯ ಇಲಾಖೆಯ ಅಧಿಕಾರಿಗಳು ಎಲ್ಲಾ ಶವಗಳನ್ನು ಈಗ ಹೊರತೆಗೆಯಲಾಗಿದೆ. ಇಲ್ಲಿಯವರೆಗೆ, ಡಿಎನ್‌ಎ ಹೊಂದಾಣಿಕೆಯ ಮೂಲಕ 260 ಶವಗಳನ್ನು ಮತ್ತು ಮುಖ ಗುರುತಿಸುವಿಕೆಯ ಮೂಲಕ ಆರು ಶವಗಳನ್ನು ಗುರುತಿಸಲಾಗಿದೆ.

ಇದನ್ನೂ ಓದಿ: Air India: ಭೀಕರ ವಿಮಾನಾಪಘಾತಕ್ಕೆ ಕೆಲವೇ ದಿನ ಮೊದಲು ಭರ್ಜರಿ ಸಂಬಳ ಹೆಚ್ಚಳ ಪಡೆದಿದ್ದ ಏರ್ ಇಂಡಿಯಾ ಸಿಇಒ

ಮೃತರಲ್ಲಿ 120 ಪುರುಷರು, 124 ಮಹಿಳೆಯರು ಮತ್ತು 16 ಮಕ್ಕಳು ಇದುವರೆಗೆ 256 ಶವಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ ಶವಗಳ ಡಿಎನ್‌ಎ ಗುರುತಿಸುವಿಕೆ ಇನ್ನೂ ಪ್ರಗತಿಯಲ್ಲಿದೆ. ಲಂಡನ್‌ಗೆ ತೆರಳುತ್ತಿದ್ದ ಬೋಯಿಂಗ್ ಡ್ರೀಮ್‌ಲೈನರ್ ವಿಮಾನವು ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಎತ್ತರ ಕಳೆದುಕೊಳ್ಳಲು ಪ್ರಾರಂಭಿಸಿತು. ಈ ವಿಮಾನ ನಿಲ್ದಾಣದ ಪರಿಧಿಯ ಹೊರಗೆ ಇರುವ ಮೇಘಾನಿ ನಗರದಲ್ಲಿರುವ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಆವರಣಕ್ಕೆ ಅಪ್ಪಳಿಸಿತು. ವಿಮಾನದಲ್ಲಿದ್ದ 242 ಜನರಲ್ಲಿ 11Aನಲ್ಲಿ ಕುಳಿತಿದ್ದ ಬ್ರಿಟಿಷ್-ಭಾರತೀಯ ವ್ಯಕ್ತಿ ಮಾತ್ರ ಬದುಕುಳಿದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:07 pm, Tue, 24 June 25