ಕೊರೊನಾ: ಕೇಂದ್ರ ಆರೋಗ್ಯ ಸಚಿವರು ಏನು ಹೇಳಿದ್ರು?
ದೆಹಲಿ: ಜಗತ್ತಿನಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿರುವ ಕಿಲ್ಲರ್ ಕೊರೊನಾ ವೈರಸ್ ಇದೀಗ ಭಾರತಕ್ಕೂ ಲಗ್ಗೆ ಇಟ್ಟಿದೆ. ಹೀಗಾಗಿ ದೇಶದ ಎಲ್ಲಾ ರಾಜ್ಯಗಳಲ್ಲಿ ವೈರಸ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಿದರು. ದೆಹಲಿ ಆಸ್ಪತ್ರೆಯ ಅಧಿಕಾರಿಗಳ ಜತೆ ಈಗಾಗಲೇ ಸಭೆ ನಡೆಸಿ, ಆಸ್ಪತ್ರೆಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸಲು ಸೂಚಿಸಿದ್ದೇವೆ. ಪ್ರತ್ಯೇಕ ವಾರ್ಡ್ನಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತೆ. […]
ದೆಹಲಿ: ಜಗತ್ತಿನಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿರುವ ಕಿಲ್ಲರ್ ಕೊರೊನಾ ವೈರಸ್ ಇದೀಗ ಭಾರತಕ್ಕೂ ಲಗ್ಗೆ ಇಟ್ಟಿದೆ. ಹೀಗಾಗಿ ದೇಶದ ಎಲ್ಲಾ ರಾಜ್ಯಗಳಲ್ಲಿ ವೈರಸ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಿದರು.
ದೆಹಲಿ ಆಸ್ಪತ್ರೆಯ ಅಧಿಕಾರಿಗಳ ಜತೆ ಈಗಾಗಲೇ ಸಭೆ ನಡೆಸಿ, ಆಸ್ಪತ್ರೆಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸಲು ಸೂಚಿಸಿದ್ದೇವೆ. ಪ್ರತ್ಯೇಕ ವಾರ್ಡ್ನಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತೆ. ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ದೆಹಲಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅವರು 66 ಜನರನ್ನು ಭೇಟಿಯಾಗಿರುವ ಬಗ್ಗೆ ಮಾಹಿತಿ ಇದೆ ಎಂದರು.
28 ಜನರಲ್ಲಿ ಸೋಂಕು ಪತ್ತೆ! ಇದುವರೆಗೂ ಭಾರತದಲ್ಲಿ 28 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಅದರಲ್ಲಿ 12 ಭಾರತೀಯರು ಹಾಗೂ 16 ವಿದೇಶಿಯರಾಗಿದ್ದಾರೆ. ಭಾರತಕ್ಕೆ ಬಂದ ಇಟಲಿಯ 16 ಪ್ರವಾಸಿಗರಲ್ಲಿ ಸೋಂಕು ಕಂಡುಬಂದಿದೆ. ಹಾಗಾಗಿ ವಿಮಾನ ನಿಲ್ದಾಣಗಳಲ್ಲಿ 5,89,000 ಜನರಿಗೆ ಸ್ಕ್ರೀನಿಂಗ್ ಮಾಡಿದ್ದೇವೆ. 3 ಸಾವಿರಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ಮಾಡಿದ್ದೇವೆ. ಜನರು ಯಾವುದೇ ರೀತಿಯ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಸರ್ಕಾರ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹರ್ಷವರ್ಧನ್ ಭರವಸೆ ನೀಡಿದರು.
ಕೈಕುಲುಕುವ ಬದಲು ನಮಸ್ತೆ ಎಂದೇಳಿ: ಕೊರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಎಲ್ಲರು ಎಚ್ಚರಿಕೆಯಿಂದಿರಬೇಕು. ಜನರಿಗೆ ಕೈಕುಲುಕುವ ಬದಲು ನಮಸ್ತೆ ಎಂದು ಹೇಳಿ. ಜನಸಂದಣಿ ಇರುವ ಪ್ರದೇಶದಿಂದ ದೂರ ಇರಿ. ಪಾರ್ಟಿ, ಸಮಾರಂಭಗಳಿಂದ ಆದಷ್ಟು ದೂರ ಇರಿ ಎಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಸಲಹೆ ನೀಡಿದರು.
Published On - 1:15 pm, Wed, 4 March 20